ಚೆಯ್ಯಂಡಾಣೆ, ಮೇ ೫: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಚೆಯ್ಯಂಡಾಣೆಯ ಲಕ್ಷಿö್ಮ ಮಹಿಳಾ ಸಮಾಜದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಸಮಿತಿಯ ಸದಸ್ಯರು ಹಾಗೂ ಪ್ರಚಾರ ಸಮಿತಿಯ ಅಧ್ಯಕ್ಷÀ ಟಿ.ಪಿ. ರಮೇಶ್ ಪ್ರಾಸ್ತವಿಕವಾಗಿ ಮಾತನಾಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಅನಿಸಿಕೆಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.

ನಂತರ ಸಭೆಯಲ್ಲಿ ವಲಯ ಅಧ್ಯಕ್ಷರಾಗಲು ಅರ್ಹತೆ ಇರುವವರ ಹೆಸರನ್ನು ಉಸ್ತುವಾರಿ ಸಮಿತಿಗೆ ನೀಡಿದರು. ಕೂಡಲೇ ಜಿಲ್ಲಾಧ್ಯಕ್ಷರು ವರಿಷ್ಠರ ಸಭೆ ಕರೆದು ಅಂತಿಮವಾಗಿ ವಲಯ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಿ ಆಯ್ಕೆ ಮಾಡಲಾಗುವುದು ಎಂದು ಪ್ರಮುಖರು ಮಾಹಿತಿ ನೀಡಿದರು. ಈ ಸಂದರ್ಭ ಕೆ.ಪಿ.ಸಿ.ಸಿ. ಸದಸ್ಯ ಬೇಕಲ್ ರಮಾನಾಥ್, ಮಡಿಕೇರಿ ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನೆರವಂಡ ಉಮೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಅಬ್ದುಲ್ ರಹ್ಮನ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಮಾಜಿ ಅಧ್ಯಕ್ಷ ಹನೀಫ್, ಕಾಂಗ್ರೆಸ್ ಹಿರಿಯ ಪಿ.ಕೆ. ಪೊನ್ನಪ್ಪ, ಮೋಹನ್ ದಾಸ್, ಸುರೇಶ್, ಮನು ಪೆರ್ಮುಂಡ, ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಯಕರ್ತರು, ಮತ್ತಿತರರು ಉಪಸ್ಥಿತರಿದ್ದರು. ವಿನೋದ್ ನಾಣಯ್ಯ ಸ್ವಾಗತಿಸಿ, ಸುಬೈರ್ ವಂದಿಸಿದರು.