ಕುಶಾಲನಗರ, ಮೇ ೫ : ಕುಶಾಲನಗರ ಪಟ್ಟಣದ ವಿವಿಧಡೆ ಬಸವ ಜಯಂತಿ ಕಾರ್ಯಕ್ರಮಗಳು ಜರುಗಿದವು. ಶ್ರೀ ಬಸವೇಶ್ವರ ದೇವಾಲಯದಲ್ಲಿ ವೀರಶೈವ-ಲಿಂಗಾಯತ ಮಹಾಸಭೆ, ವೀರಶೈವ ಸಮಾಜ ಹಾಗೂ ಶ್ರೀ ಬಸವೇಶ್ವರ ದೇವಾಲಯ ಸಮಿತಿಯ ವತಿಯಿಂದ ಭಕ್ತಿ ಭಂಡಾರಿ ವಿಶ್ವಗುರು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತೋತ್ಸವವನ್ನು ಆಚರಿಸಲಾಯಿತು. ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಚ್.ವಿ.ಶಿವಪ್ಪ, ಪ್ರತಿಯೊಬ್ಬರೂ ವಿಶ್ವಜ್ಞಾನಿ, ಮಹಾ ಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್. ನಂದೀಶ್, ಬಸವಣ್ಣನವರು ವಚನಗಳ ಮೂಲಕ ಸಮುದಾಯದಲ್ಲಿ ಸಾಮಾಜಿಕ ಅರಿವು ಮೂಡಿಸಿದರು. ಸಮಾಜದಲ್ಲಿ ಬೇರೂರಿದ್ದ ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದರು ಎಂದು ಹೇಳಿದರು. ವೀರಶೈವ-ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ. ಉದಯ್ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ. ಮಧುಸೂದನ್, ಜಿಲ್ಲಾ ಶರಣ್ಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ, ಅಕ್ಕನ ಬಳಗದ ಅಧ್ಯಕ್ಷೆ ಕಮಲ ಉದಯ್, ಎಂ.ಎಸ್. ಗಣೇಶ್, ಬಿ.ಬಿ.ಲೋಕೇಶ್, ಎಸ್.ಆರ್. ಶಿವಲಿಂಗ, ಟಿ. ಬಿ. ಮಂಜುನಾಥ್, ಸರೋಜ, ಲತಾ, ಮಣಿಯಮ್ಮ. ಇತರರು ಇದ್ದರು. ಇದೇ ವೇಳೆ ತಾಲ್ಲೂಕು ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಚ್.ಎಂ. ಮಧುಸೂದನ್ ಹಾಗೂ ಡಿವೈಎಸ್ಪಿ ಗಂಗಾಧರಪ್ಪ ಅವರ ಪತ್ನಿ ಪ್ರಿಯಾಂಕ ಗಂಗಾಧರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕುಶಾಲನಗರ : ಕುಶಾಲನಗರ ಪುರಸಭೆ ಕಚೇರಿಯಲ್ಲಿ ಬಸವ ಜಯಂತಿ ಅಂಗವಾಗಿ ಸರಳ ಕಾರ್ಯಕ್ರಮ ನಡೆಯಿತು. ಬಸವೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮಿಸಲಾಯಿತು. ಪುರಸಭೆ ಮುಖ್ಯ ಅಧಿಕಾರಿ ಗಿರೀಶ್, ಪುರಸಭಾ ಸದಸ್ಯರು ಸಿಬ್ಬಂದಿಗಳು ಇದ್ದರು. ಕುಶಾಲನಗರ : ಕುಶಾಲನಗರ ತಾಲೂಕು ಕಚೇರಿಯಲ್ಲಿ ಬಸವ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಅಧಿಕಾರಿ ಸಿಬ್ಬಂದಿಗಳು ಇದ್ದರು.

ಕೂಡಿಗೆ : ಕೂಡಿಗೆ ಗ್ರಾ. ಪಂ. ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಜೇನುಕಲ್ಲು ಬೆಟ್ಟದ ಗ್ರಾಮದಲ್ಲಿರುವ ಶ್ರೀ ಉದ್ಭವ ಬಸವೇಶ್ವರ ದೇವಾಲಯದ ಆವರಣದಲ್ಲಿ ಬಸವ ಜಯಂತಿಯ ಅಂಗವಾಗಿ ಬಸವೇಶ್ವರ ಪೂಜೋತ್ಸವ ನೆರವೇರಿತು. ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಟಿ. ನಾಗೇಶ್, ಕಾರ್ಯದರ್ಶಿ ಹೆಚ್. ಟಿ. ಬಸವರಾಜ್, ಉಪಾಧ್ಯಕ್ಷ ಯೋಗಾನಂದ, ಗ್ರಾಮ ಪಂಚಾಯತಿ ಸದಸ್ಯೆ ಜಯಶೀಲಾ, ಸೇರಿದಂತೆ ಸಮಿತಿ ನಿರ್ದೇಶಕರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.ಕಣಿವೆ : ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕಾಯಕ ಮತ್ತು ದಾಸೋಹ ಪರಿಕಲ್ಪನೆ ಇಡೀ ಜಗತ್ತಿಗೆ ನೀಡಿದ ಅಮೂಲ್ಯ ಕೊಡುಗೆಗಳು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಅಭಿಪ್ರಾಯಿಸಿದರು. ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದ ಹಾರಂಗಿ ಸಭಾಂಗಣದಲ್ಲಿ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಬಸವ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ನಾಯಕ ಬಸವೇಶ್ವರರು ಎಂಬ ವಿಷಯದ ಕುರಿತು ಮಾತನಾಡಿದ ಅವರು, ಜಾತೀಯತೆ, ಅಸೃಶ್ಯತೆ ವಿರುದ್ಧ ಧ್ವನಿ ಎತ್ತುವ ಮೂಲಕ ದೀನ ದಲಿತರ, ಕಾಯಕ ವರ್ಗಗಳ ಆಶಾಕಿರಣವಾಗಿದ್ದ ಬಸವಣ್ಣ ನವರು ದೇಹವೆ ದೇಗುಲವೆಂದು ಸಾರಿದರು. ವರ್ಗ, ಜಾತಿ, ಲಿಂಗ ಭೇದವನ್ನು ತೊಡೆದುಹಾಕಲು ಇಷ್ಟಲಿಂಗವನ್ನು ನೀಡಿದರು. ಕ್ರಿ.ಶ. ೧೨ನೇ ಶತಮಾನದಲ್ಲಿ ಪ್ರಬಲವಾಗಿ ಬೇರೂರಿದ್ದ ಜಾತಿ ವ್ಯವಸ್ಥೆಯನ್ನು ಪ್ರಶ್ನಿಸಿದರು. ಅಸೃಶ್ಯತೆಯ ಕಾರಣಕ್ಕೆ ದೀನದಲಿತರನ್ನು ಕೆಟ್ಟದಾಗಿ ನಡೆಸಿಕೊಳ್ಳುವ ಪ್ರಕರಣಗಳನ್ನು ಕಂಡು ತೀವ್ರವಾಗಿ ಖಂಡಿಸಿದವರು ಬಸವಣ್ಣನವರು. ಇಂತಹ ಬಸವಾದಿ ಶರಣರು ನುಡಿದಂತೆ ನಡೆದವರು. ಎಲ್ಲರೂ ದುಡಿಯಬೇಕು, ದುಡಿದದ್ದರಲ್ಲಿ ದಾಸೋಹ ಮಾಡಬೇಕು ಆ ಮೂಲಕ ಸಮಾಜಕ್ಕೆ ದುಡಿಮೆಯ ಪಾಲನ್ನು ವಿನಿಯೋಗಿಸಬೇಕು ಎಂಬುದು ಶರಣರ ಸಂಕಲ್ಪವಾಗಿತ್ತು. ಹೀಗೆ ನಾಡಿನ ಸಾಂಸ್ಕೃತಿಕ ಸಾಹಿತ್ಯ ಪರಂಪರೆಯಲ್ಲಿ ಬಸವಣ್ಣನವರ ಚಿಂತನೆಗಳು ಇಡೀ ವಿಶ್ವಕ್ಕೆ ಕೊಡುಗೆ ನೀಡಿವೆ ಎಂದು ತಿಳಿಸಿದರು. ಕೊಡಗು ವಿಶ್ವವಿದ್ಯಾಲ ಯದ ಕುಲಸಚಿವರು ಆದ ಡಾ. ಸುರೇಶ್ ಎಂ. ಮಾತನಾಡಿದರು. ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಿರಂಜನ್, ಉಪನ್ಯಾಸಕರಾದ ಯೋಗಿತಾ, ರಾಷ್ಟಿçÃಯ ಸೇವಾ ಯೋಜನಾ ಶಿಬಿರಾಧಿಕಾರಿ ಯೋಗೇಂದ್ರ, ವಿವಿಧ ವಿಭಾಗದ ಬೋಧಕ ವೃಂದ ಮತ್ತು ಬೋಧಕೇತರ ವೃಂದದವರು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.