ಕುಶಾಲನಗರ, ಮೇ ೫: ದೇಶದಲ್ಲಿ ಎಲ್ಲೆಡೆ ಹಿಂದೂಗಳ ರಕ್ಷಣೆ ಸಂಬAಧ ಶಕ್ತಿಯುತ ಜಾಗೃತ ಸಮಾಜ ನಿರ್ಮಾಣದ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದ್ದಾರೆ.
ಕುಶಾಲನಗರದಲ್ಲಿ ಮಿಷನ್ ಮೋದಿ ಡೆಮಾಕ್ರಸಿ ಡೆವಲಪ್ಮೆಂಟ್ ಟ್ರಸ್ಟ್ ಆಶ್ರಯದಲ್ಲಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದು ಬಾಂಧವರನ್ನು ಗುರಿಯಾಗಿಸಿ ನಡೆಸಿದ ನರಮೇಧ ಹಾಗೂ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ನಡೆದ ಮೌನ ಮೆರವಣಿಗೆ ಮತ್ತು ಪ್ರತಿಭಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಪೊಲೀಸ್ ಬಲ ದುರುಪಯೋಗಪಡಿಸಿಕೊಂಡು ಅನಾವಶ್ಯಕ ಕಿರುಕುಳ ನೀಡಿ ಅಮಾಯಕ ಯುವಕ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ಕಾರಣಕರ್ತರಾದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಒಂದು ತಿಂಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ ಎಂದ ಅವರು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹಿಸಿದರು.
ಕೊಡಗು ಜಿಲ್ಲೆ ಅತ್ಯಂತ ಸೂಕ್ಷö್ಮ ಪ್ರದೇಶವಾಗಿದ್ದು ದುಷ್ಟ ಶಕ್ತಿಗಳ ವಿರುದ್ಧ ಒಂದಾಗಿ ಹೋರಾಡಬೇಕಾಗಿದೆ. ಒಂದು ವರ್ಗದ ಓಲೈಕೆಗೆ ಸೀಮಿತವಾಗಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಪ್ರಮುಖ ಕಾರಣಕರ್ತನಾದ ಆರೋಪಿ ಮೈನಾ ಬಂಧನ ಮಾಡದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಅಪ್ಪಚ್ಚು ರಂಜನ್, ಇತ್ತೀಚಿನ ದಿನಗಳಲ್ಲಿ ಹಿಂದೂಗಳ ಹತ್ಯೆಗಳು ಅಧಿಕವಾಗುತ್ತಿವೆ. ಕೊಡಗು ಜಿಲ್ಲೆಯಲ್ಲಿ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಂತೆ ಪರಿವರ್ತನೆಯಾಗಿವೆ. ವಿನಯ್ ಆತ್ಮಹತ್ಯೆ ಆರೋಪಿಗಳ ಬಂಧನ ಆಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಪ್ರಮುಖ ಕೋಡಿ ಚಂದ್ರಶೇಖರ್ ಆತ್ಮಹತ್ಯೆಯಲ್ಲಿ ಕೂಡ ಮೈನಾ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯತೆಯಿಂದಾಗಿ ಮಂಗಳೂರಿನಲ್ಲಿ ಯುವಕನ ಹತ್ಯೆಯಾಗಿದೆ ಎಂದು ಅವರು ಹೇಳಿದರು.
ರಾಷ್ಟ್ರದಲ್ಲಿ ಭಯೋತ್ಪಾದನೆ ಮಟ್ಟ ಹಾಕುವ ಕೆಲಸ ಕೇಂದ್ರ ಸರ್ಕಾರದ ಮೂಲಕ ನಡೆಯುತ್ತಿದ್ದು ಪಾಕಿಸ್ತಾನ ವಿಶ್ವ ಭೂಪಟದಲ್ಲಿ ಸದ್ಯದಲ್ಲಿಯೇ ಮಾಯವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವಕಾಶ ದೊರೆತಲ್ಲಿ ತಾನು ಕೂಡ ಯುದ್ಧದಲ್ಲಿ ಪಾಲ್ಗೊಳ್ಳಲು ಸಿದ್ಧ ಎಂದು ರಂಜನ್ ಹೇಳಿದರು.
ಮೇಜರ್ ಜನರಲ್ ನಂದಾ ಸನಾತನ ಹಿಂದೂ ಧರ್ಮದ ಬಗ್ಗೆ ಮಾಹಿತಿ ನೀಡಿದರು. ಪ್ರಸಕ್ತ ದಿನಗಳಲ್ಲಿ ಒಗ್ಗಟ್ಟಿನ ಅಗತ್ಯ ಇದೆ. ಪ್ರತಿ ಮನೆ ಮನೆಗಳಲ್ಲಿ ಈ ಬಗ್ಗೆ ಚರ್ಚೆ ಆಗಬೇಕಾಗಿದೆ. ಶಸ್ತಾçಸ್ತçಗಳ ಬಳಕೆಯ ಅರಿವು ಮೂಲಕ ರಕ್ಷಣೆ ಪಡೆಯುವ ಕೆಲಸ ಆಗಬೇಕಾಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಕೊಡಗಿನಲ್ಲಿ ಕಾಂಗ್ರೆಸ್ ಆಡಳಿತದ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಟ್ರಸ್ಟ್ ಸಂಚಾಲಕ ಕಾಯಪಂಡ ವಿಷ್ಣುನಾಚಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅಗಲಿ ಒಂದು ತಿಂಗಳು ಕಳೆದಿದೆ. ಆದರೆ ಆರೋಪಿಗಳು ನಿರಾತಂಕವಾಗಿ ಓಡಾಡಿಕೊಂಡಿದ್ದು ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಹೋರಾಟ ನಿರಂತರವಾಗಿ ಮುಂದುವರೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಮುನ್ನ ವಿನಯ್ ಸೋಮಯ್ಯ, ಕಾಶ್ಮೀರದಲ್ಲಿ ಹತ್ಯೆಗೊಳಗಾದ ಪ್ರವಾಸಿಗರು ಮತ್ತು ಸುಹಾಸ್ ಶೆಟ್ಟಿ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ನಂತರ ಮೌನ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಕುಶಾಲನಗರ ಗಣಪತಿ ದೇವಾಲಯ ಬಳಿ ಮಾನವ ಸರಪಳಿ ರಚಿಸಿದರು.
ತದನಂತರ ಮೆರವಣಿಗೆ ಮೂಲಕ ತಾಲೂಕು ತಹಶೀಲ್ದಾರ್ ಕಚೇರಿಗೆ ಸಾಗಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಟ್ರಸ್ಟ್ ಜಿಲ್ಲಾಧ್ಯಕ್ಷ ಮೈ ನಾ ಲೋಕೇಶ್, ಉಪಾಧ್ಯಕ್ಷ ಪಿ. ಗಿರೀಶ್ ಸಂಘಟನಾ ಕಾರ್ಯದರ್ಶಿ ರವಿಶಂಕರ್, ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್, ಪುರಸಭೆ ಸದಸ್ಯರಾದ ಜಯವರ್ಧನ್ ಅಮೃತರಾಜ್, ಪ್ರಮುಖರಾದ ಭಾರತೀಶ್, ನಗರಾಧ್ಯಕ್ಷ ಎಂ.ಎA. ಚರಣ್, ಜಿ.ಎಲ್. ನಾಗರಾಜ್, ಸೋಮೇಶ್, ಕಾಂತಿ ಸತೀಶ್, ನಾಗೇಶ್ ಕುಂದಲಪಾಡಿ, ಆರ್.ಕೆ. ಚಂದ್ರ, ಶರತ್, ಯಮುನಾ ಚಂಗಪ್ಪ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಗಣಿ ಪ್ರಸಾದ್, ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ವಿನಯ್ ಸೋಮಯ್ಯ ಸಹೋದರ ವಿವೇಕ್ ಸೋಮಯ್ಯ, ಪವಿತ್ರ, ರತ್ನ, ಯತೀಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು, ಬಿಜೆಪಿ ಸೇರಿದಂತೆ ಹಿಂದೂ ಪರ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಇದ್ದರು.