*ಸಿದ್ದಾಪುರ, ಮೇ ೫: ಕೊಡಗಿನ ಪ್ರಸಿದ್ಧ ಪ್ರವಾಸಿತಾಣ ಚಿಕ್ಲಿಹೊಳೆ ಜಲಾಶಯಕ್ಕೆ ಹೋಗುವ ರಸ್ತೆ ಹೊಂಡ ಗುಂಡಿಗಳಿAದ ಕೂಡಿದ್ದು, ವಾಹನ ಸಂಚಾರ ಅಸಾಧ್ಯವಾಗಿದೆ.

ಪ್ರತಿದಿನ ಈ ಮಾರ್ಗದಲ್ಲಿ ನೂರಾರು ಪ್ರವಾಸಿ ವಾಹನಗಳು ಸಂಚರಿಸುತ್ತವೆ, ಸಾವಿರಾರು ಪ್ರವಾಸಿಗರು ಚಿಕ್ಲಿಹೊಳೆ ಜಲಾಶಯಕ್ಕೆ ಆಗಮಿಸುತ್ತಾರೆ. ಸಾರ್ವಜನಿಕರು ಹಾಗೂ ಗ್ರಾಮಸ್ಥರು ಕೂಡ ಸಂಪರ್ಕಕ್ಕೆ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಆದರೆ ಪ್ರವಾಸೋದ್ಯಮದ ಅಭಿವೃದ್ಧಿಯ ಕುರಿತು ಭರವಸೆಗಳನ್ನು ನೀಡುತ್ತಿರುವ ಆಡಳಿತ ವ್ಯವಸ್ಥೆ ಕನಿಷ್ಟ ರಸ್ತೆ ವ್ಯವಸ್ಥೆಯನ್ನು ಕೂಡ ಸುಗಮಗೊಳಿಸಿಲ್ಲ. ರಸ್ತೆ ಅವ್ಯವಸ್ಥೆಯ ಕುರಿತು ಜನಪ್ರತಿನಿಧಿಗಳಿಗೆ ಮಾಹಿತಿ ಇದ್ದರೂ ಇಲ್ಲಿಯವರೆಗೆ ದುರಸ್ತಿ ಕಾರ್ಯ ಕೈಗೊಂಡಿಲ್ಲವೆAದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿಕ್ಲಿಹೊಳೆ ಜಲಾಶಯಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಣದೆ ಅನೇಕ ವರ್ಷಗಳೇ ಕಳೆದಿದೆ. ಮಳೆಗಾಲದಲ್ಲಂತೂ ವಾಹನ ಸವಾರರು ಈ ಮಾರ್ಗದಲ್ಲಿ ನರಕಯಾತನೆ ಅನುಭವಿಸುತ್ತಾರೆ. ಹೊಂಡ ಗುಂಡಿಗಳಲ್ಲಿ ನೀರು ನಿಂತು ಕೆಸರುಮಯವಾಗಿ ಸಂಚಾರ ದುಸ್ತರವಾಗುತ್ತದೆ. ಶಾಲಾ ಕಾಲೇಜು ವಿದ್ಯಾರ್ಥಿಗಳ ಓಡಾಟಕ್ಕೆ ತೊಂದರೆಯಾಗುತ್ತಿದ್ದು, ಸಂಬAಧಪಟ್ಟ ಇಲಾಖೆ ಮತ್ತು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಪ್ರವಾಸಿತಾಣಗಳಿಗೆ ತೆರಳುವ ಎಲ್ಲಾ ರಸ್ತೆಗಳನ್ನು ದುರಸ್ತಿಪಡಿಸಲು ಶಾಸಕರುಗಳು ಕ್ರಮ ಕೈಗೊಳ್ಳಬೇಕು. ಚಿಕ್ಲಿಹೊಳೆ ಜಲಾಶಯಕ್ಕೆ ತೆರಳುವ ರಸ್ತೆಯನ್ನು ಮೊದಲು ಪರಿಶೀಲಿಸಿ ಅಭಿವೃದ್ಧಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.