ವೀರಾಜಪೇಟೆ, ಮೇ ೫: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯೆಯಾಗಿ ಬಿ.ಜೆ.ಪಿ.ಯ ಹಿರಿಯ ಮುಖಂಡರಾದ ಮನೆಯಪಂಡ ಕಾಂತಿ ಸತೀಶ್ ಆಯ್ಕೆಯಾಗಿದ್ದಾರೆ.
ವೀರಾಜಪೇಟೆಯ ಕಾಂತಿ ಸತೀಶ್ ಅವರು ಕೊಡಗು ಬಿ.ಜೆ.ಪಿ. ಮಹಿಳಾ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಕೊಡಗು ಜಿಲ್ಲಾ ಬಿ.ಜೆ.ಪಿ.ಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಕೂಡ ಈ ಹಿಂದೆ ಕಾರ್ಯ ನಿರ್ವಹಿಸಿದ್ದರು. ಇದೀಗ ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಒಡೆಯರ್ ಅಧ್ಯಕ್ಷರಾಗಿರುವ ಕೇಂದ್ರ ಸರ್ಕಾರಗಳ ಯೋಜನೆಗಳ ಅನುಷ್ಟಾನ ಸಂಬAಧಿತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಸದಸ್ಯೆಯಾಗಿ ನೇಮಕಗೊಂಡಿದ್ದಾರೆ.