ಮಡಿಕೇರಿ: ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ೨೦೨೪-೨೫ನೇ ಸಾಲಿನ ಕಿಂಡರ್ ಗಾರ್ಟನ್ ವಿಭಾಗದ ಯು.ಕೆ.ಜಿ. ಮಕ್ಕಳ ಪದವಿ ಪ್ರದಾನ ಸಮಾರಂಭವನ್ನು ನಡೆಸ ಲಾಯಿತು.
ಸಭೆಯ ಅಧ್ಯಕ್ಷತೆ ಯನ್ನು ಶಾಲಾ ಪ್ರಾಂಶುಪಾಲೆ ಸವಿತ ಎಂ.ಜಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೌರಿರ ರಿಷಿಕಾ ಭಾಗವಹಿಸಿದ್ದರು.
ಶಿಕ್ಷಕಿ ವಿನ್ಯಾ ಉತ್ತಪ್ಪ ಸ್ವಾಗತಿಸಿದರು. ಚಂದ್ರಾವತಿ ಬಿ.ಎ. ವರದಿ ವಾಚಿಸಿದರು. ಯುಕೆಜಿ ಮಕ್ಕಳಿಗೆ ನೆನಪಿನ ಕಾಣಿಕೆಯೊಂದಿಗೆ ಪದವಿ ಪ್ರದಾನ ಮಾಡಲಾಯಿತು.
ಪುಟಾಣಿಗಳು ತಮ್ಮ ಅನಿಸಿಕೆ ಹಂಚಿಕೊAಡರು. ಮಕ್ಕಳು ನೃತ್ಯದ ಮೂಲಕ ಎಲ್ಲರ ಮನರಂಜಿಸಿದರು. ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪ್ರಾಂಶುಪಾಲರು ಪ್ರತಿಯೊಂದು ಮಗುವಿನಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರುತ್ತದೆ ಎಂದರು.
ಶಾಲಾ ಆಡಳಿತಾಧಿಕಾರಿ ಎನ್.ಎ. ಪೊನ್ನಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಿಥಿಲ ಪೊನ್ನಪ್ಪ ಕಾರ್ಯಕ್ರಮ ನಿರೂಪಿಸಿ, ಹರ್ಷಿತಾ ಎ.ಎಂ. ವಂದಿಸಿದರು.ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪ್ರಾಂಶುಪಾಲರು ಪ್ರತಿಯೊಂದು ಮಗುವಿನಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರುತ್ತದೆ ಎಂದರು.
ಶಾಲಾ ಆಡಳಿತಾಧಿಕಾರಿ ಎನ್.ಎ. ಪೊನ್ನಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಿಥಿಲ ಪೊನ್ನಪ್ಪ ಕಾರ್ಯಕ್ರಮ ನಿರೂಪಿಸಿ, ಹರ್ಷಿತಾ ಎ.ಎಂ. ವಂದಿಸಿದರು.ಯೂರೋ ಕಿಡ್ಸ್
ಪದವಿ ಪ್ರಮಾಣಪತ್ರ ವಿತರಣೆ
ಮಡಿಕೇರಿ: ನಗರದ ಹೊಸ ಬಡಾವಣೆಯಲ್ಲಿರುವ ಯುರೋ ಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ಟ್ಯಾಲೆಂಟ್ ಡಿಸ್‌ಪ್ಲೆ ಮತ್ತು ಗ್ರಾö್ಯಜು ಯೇಷನ್ ಡೇ ಕಾರ್ಯಕ್ರಮ ನಡೆಯಿತು. ಈ ವೇಳೆ ಮಕ್ಕಳಿಗೆ ಪದವಿ ಪ್ರಮಾಣಪತ್ರವನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷ ಕೆ.ಎಂ. ನಾಣಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಐ.ಎಂ. ಜಲಜಾಕ್ಷಿ ಪಾಲ್ಗೊಂಡಿದ್ದರು.
ಶಾಲೆಯ ಪ್ರಾಂಶುಪಾಲೆ ರಶ್ಮಿದೀಪ ಅವರು ಎನ್.ಟಿ.ಟಿ. ಪ್ರಶಿಕ್ಷಣಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿದರು. ನಂತರ ಮಕ್ಕಳಿಂದ ದೇಶಭಕ್ತಿಗೀತೆ, ಜಾನಪದಗೀತೆ, ಮೊಬೈಲ್ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬಂದವು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯವರು, ಶಾಲೆಯ ಶಿಕ್ಷಕರು, ಪೋಷಕರು ಭಾಗವಹಿಸಿದ್ದರು.vಮಡಿಕೇರಿ: ೨೦೨೪-೨೫ನೇ ಸಾಲಿನ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲೆ ಸವಿತ ಎಂ.ಜಿ. ಹಾಗೂ ಮುಖ್ಯ ಅತಿಥಿಗಳಾಗಿ ಶಾಲಾ ಆಡಳಿತ ಅಧಿಕಾರಿ ಎನ್.ಎ. ಪೊನ್ನಮ್ಮ ಪಾಲ್ಗೊಂಡಿದ್ದರು.
೯ನೇ ತರಗತಿ ನಿಧಿ ಟಿ.ಪಿ. ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭಗೊAಡಿತು. ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊAಡರು. ಪ್ರಾಂಶುಪಾಲೆ ಸವಿತ ಎಂ.ಜಿ. ಹಾಗೂ ಆಡಳಿತ ಅಧಿಕಾರಿ ಎನ್.ಎ. ಪೊನ್ನಮ್ಮ ಶುಭ ಹಾರೈಸಿ ಮಕ್ಕಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಿದರು.
ಲಿಷ್ಮಾ ಹಾಗೂ ಪುಣ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ತರುಣ್ ವಂದಿಸಿದರು.