ಮಡಿಕೇರಿ, ಮೇ ೬: ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಲ್ಲಿಗೆ ಸನಿಹದ ಚೇರಂಬಾಣೆಯಲ್ಲಿ ಸಂಭವಿಸಿದೆ.

ಚೇರಂಬಾಣೆಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ರಾಜು (೫೨) ಎಂಬಾತ ಇಂದು ಸಂಜೆ ಅಲ್ಲಿನ ನದಿಗೆ ಮೀನು ಹಿಡಿಯಲೆಂದು ನೀರಿಗೆ ಬಿದ್ದು ಮೇಲೇಳಲಾಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ರಾಜು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಈ ಬಗ್ಗೆ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.