ಸೋಮವಾರಪೇಟೆ, ಮೇ ೬: ಇಲ್ಲಿನ ಯಂಗ್ ಸ್ಟಾರ್ ಕ್ರಿಕೆಟ್ ಕ್ಲಬ್ ವತಿಯಿಂದ ತಾ. ೨೪ ಮತ್ತು ೨೫ ರಂದು ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ೩೫ ವರ್ಷ ಮೇಲ್ಪಟ್ಟ ಆಟಗಾರರಿಗೆ ಯಂಗ್ ಸ್ಟಾರ್ ಸೀಸನ್-೩ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕ್ಲಬ್‌ನ ಸಂಯೋಜಕ ಮಂಜುನಾಥ್ ತಿಳಿಸಿದ್ದಾರೆ.

ಐಪಿಎಲ್ ಮಾದರಿಯಲ್ಲಿ ಪಂದ್ಯಾಟಗಳು ನಡೆಯಲಿದ್ದು, ಪ್ರಥಮ ಬಹುಮಾನ ೩೦ ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ೧೫ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ಮ್ಯಾನ್ ಆಫ್ ದ ಸೀರೀಸ್, ಮ್ಯಾನ್ ಆಫ್ ದ ಮ್ಯಾಚ್, ಬೆಸ್ಟ್ ಬ್ಯಾಟ್ಸ್ಮೆನ್, ಬೆಸ್ಟ್ ಬೌಲರ್, ಬೆಸ್ಟ್ ಫೀಲ್ಡರ್ ಪ್ರಶಸ್ತಿಗಳನ್ನು ನೀಡಲಾಗುವುದು.

ಇದರೊಂದಿಗೆ ಪ್ರತ್ಯೇಕ ವಿಭಾಗದಲ್ಲಿ ೯ನೇ ತರಗತಿ ಒಳಗಿನ ಮಕ್ಕಳಿಗೆ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೯೫೩೫೫೩೦೨೪೮ ಸಂಖ್ಯೆಯನ್ನು ಸಂಪರ್ಕಿಸಬಹುದು.