ಇಂದು ಮೊಳಗಲಿದೆ ಯುದ್ಧದ ಸೈರನ್: ಮೂರು ಸ್ಥಳಗಳಲ್ಲಿ ಮಾಕ್ ಡ್ರಿಲ್

ಬೆಂಗಳೂರು, ಮೇ ೬: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧಕ್ಕೆ ಸನ್ನದ್ಧವಾಗಿದ್ದು, ತಾ. ೭ ರಂದು (ಇಂದು) ಮಾಕ್ ಡ್ರಿಲ್ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ಅಣಕು ಕವಾಯತುಗಳು ನಡೆಯಲಿವೆ. ಈ ಕುರಿತು ಮಾಹಿತಿ ನೀಡಿದ ಡಿಜೆಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರು, ಈ ಕವಾಯತುಗಳು ಒಂದು ವಾರ ಮುಂದುವರಿಯಲಿವೆ ಮತ್ತು ಸನ್ನದ್ಧತೆ ಹಾಗೂ ಸಂಪನ್ಮೂಲಗಳಲ್ಲಿನ ಅಂತರವನ್ನು ಗುರುತಿಸುವ ಮತ್ತು ಪರಿಹರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. "ಬೆಂಗಳೂರು ನಗರ ಸೇರಿದಂತೆ ರಾಜ್ಯದ ಮೂರು ಸ್ಥಳಗಳಲ್ಲಿ ಅಣಕು ಕವಾಯತುಗಳು ನಡೆಯಲಿವೆ. ಬೆಂಗಳೂರು ಹಲವಾರು ರಕ್ಷಣಾ ಕಚೇರಿಗಳನ್ನು ಹೊಂದಿರುವ ಮಹಾನಗರ ಪ್ರದೇಶವಾಗಿದೆ ಮತ್ತು ಬಹಳ ಸೂಕ್ಷö್ಮ ಜಿಲ್ಲೆಯಾಗಿದೆ" ಎಂದು ಠಾಕೂರ್ ತಿಳಿಸಿದರು. "ಎರಡನೇ ಸ್ಥಳ ಉತ್ತರ ಕನ್ನಡ ಜಿಲ್ಲೆಯ ಕಾರವಾರವಾಗಿದ್ದು, ಅದು ಕೈಗಾ ಪರಮಾಣು ವಿದ್ಯುತ್ ಸ್ಥಾವರದ ನೆಲೆಯಾಗಿದೆ. ಮೂರನೆಯದು ರಾಯಚೂರು, ಅಲ್ಲಿ ಉಷ್ಣ ವಿದ್ಯುತ್ ಸ್ಥಾವರ ಇರುವುದರಿಂದ ಆಯ್ಕೆ ಮಾಡಲಾಗಿದೆ" ಎಂದು ಅವರು ಹೇಳಿದರು. "ನಾವು ಕೇಂದ್ರ ಗೃಹ ಸಚಿವಾಲ ಯದೊಂದಿಗೆ ಮಾಕ್ ಡ್ರಿಲ್ ಘಟಕಗಳ ಬಗ್ಗೆ ಚರ್ಚಿಸಿದ್ದೇವೆ. ಸೈರನ್‌ಗಳು ಈ ಕವಾಯತಿನ ಏಕೈಕ ಅಂಶವಲ್ಲ'' ಎಂದು ಅವರು ಸ್ಪಷ್ಟಪಡಿಸಿದರು. ಈ ಮಾಕ್ ಡ್ರಿಲ್ ಆಸ್ಪತ್ರೆಗಳನ್ನು ಸಜ್ಜುಗೊಳಿಸುವುದು, ಪರಿಹಾರ ಪ್ರಯತ್ನಗಳು ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಸಹ ಒಳಗೊಂಡಿದೆ.

ಅಕ್ರಮ ಗಣಿಗಾರಿಕೆ: ಶಾಸಕ ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ

ಹೈದರಾಬಾದ್, ಮೇ ೬: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಮೈನಿಂಗ್ ಕಂಪೆನಿ(ಒಎAಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ವಾದ - ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಒಎಂಸಿ ಕಂಪೆನಿ ಮಾಲೀಕ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬAಧ ಬರೋಬ್ಬರಿ ೧೩ ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ ೩,೪೦೦ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು ೨೧೯ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಇದೇ ಪ್ರಕರಣದಲ್ಲಿ ವಿ.ಡಿ. ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ. ಮೆಹಫೂಸ್ ಅಲಿ ಖಾನ್ ಕೂಡ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ. ಜನಾರ್ದನ ರೆಡ್ಡಿ, ಬಿ.ವಿ ಶ್ರೀನಿವಾಸ ರೆಡ್ಡಿ (ಒಎಂಸಿ ವ್ಯವಸ್ಥಾಪಕ ನಿರ್ದೇಶಕ), ಮೆಫಾಜ್ ಅಲಿ ಖಾನ್ (ಜನಾರ್ದನ ರೆಡ್ಡಿ ಆಪ್ತ ಸಹಾಯಕ), ವಿ.ಡಿ. ರಾಜಗೋಪಾಲ್ (ಗಣಿ ಇಲಾಖೆಯ ಮಾಜಿ ನಿರ್ದೇಶಕ), ಕೃಪಾನಂದA (ನಿವೃತ್ತ ಐಎಎಸ್ ಅಧಿಕಾರಿ), ಸಬಿತಾ ಇಂದ್ರಾರೆಡ್ಡಿ (ತೆಲಂಗಾಣದ ಮಾಜಿ ಸಚಿವೆ ಹಾಗೂ ಹಾಲಿ ಶಾಸಕಿ), ವೈ. ಶ್ರೀಲಕ್ಷ್ಮಿ (೨೦೨೨ರಲ್ಲಿ ಸೇವೆಯಿಂದ ಬಿಡುಗಡೆಯಾದ ಐಎಎಸ್ ಅಧಿಕಾರಿ) ಮತ್ತು ದಿವಂಗತ ಆರ್. ಲಿಂಗಾ ರೆಡ್ಡಿ (ಅಂದಿನ ಗಣಿ ಇಲಾಖೆಯ ಸಹಾಯಕ ನಿರ್ದೇಶಕ) ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಐಪಿಸಿ ಸೆಕ್ಷನ್ ೧೨೦ ಬಿ, ೪೨೦, ೪೦೯, ೪೬೮ ಮತ್ತು ೪೭೧ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ ೧೩(೨) ಜೊತೆಗೆ ೧೩(೧)(ಡಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದ ಇನ್ಸ್ಪೆಕ್ಟರ್-ಸಬ್‌ಇನ್ಸ್ಪೆಕ್ಟರ್

ಬೆಂಗಳೂರು, ಮೇ ೬: ಕರ್ನಾಟಕ ಲೋಕಾಯುಕ್ತ ಪೊಲೀಸರು ನಗರದ ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಾಜಿ ರಾವ್ ಮತ್ತು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಶಿವಾನಂದ್ ಅವರನ್ನು ರೂ. ೧ ಲಕ್ಷ ಲಂಚದೊAದಿಗೆ ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಉದ್ಯಮಿಯೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಅವರ ಹೆಸರನ್ನು ಕೈಬಿಡಲು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆವಲಹಳ್ಳಿ ನಿವಾಸಿ ಕೇಶವಮೂರ್ತಿ ಎಂಬುವವರು ಫೆಬ್ರವರಿ ೨೦೨೫ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕೈಬಿಡಲು ಆರೋಪಿ ಪೊಲೀಸ್ ಅಧಿಕಾರಿಗಳು ಬೇಡಿಕೆ ಇಟ್ಟಿದ್ದ ರೂ. ೬ ಲಕ್ಷ ಲಂಚವನ್ನು ಕೊಡಲು ಸಾಧ್ಯವಾಗದೆ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದ್ದರು. ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಪರಾಧವನ್ನು ದಾಖಲಿಸಿದ ನಂತರ ಲೋಕಾಯುಕ್ತ ಪೊಲೀಸರು ಬಲೆ ಬೀಸಿದರು. ಅದರಂತೆ ಇನ್ಸ್ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್ಪೆಕ್ಟರ್ ಶಿವಾನಂದ್ ಇಬ್ಬರನ್ನೂ ರೂ. ೧ ಲಕ್ಷ ಲಂಚದೊAದಿಗೆ ಬಂಧಿಸಿದ್ದಾರೆ. ಕೆಂಪೇಗೌಡ ನಗರದ ಉದ್ಯಮಿ ಉತ್ತಮ್ ಚಂದ್ ಮಾರು ಎಂಬುವರು ಕೇಶವಮೂರ್ತಿ ವಿರುದ್ಧ ೨೦೨೫ರ ಫೆಬ್ರವರಿ ೨೦ ರಂದು ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಾರ್ ಲೈಸನ್ಸ್ ಕೊಡಿಸುವುದಾಗಿ ಕೇಶವಮೂರ್ತಿ ತನ್ನಿಂದ ೨೦೨೦ ರಿಂದ ೨೦೨೨ರ ನಡುವೆ ೧ ಕೆ.ಜಿ. ೨೪೦ ಗ್ರಾಂ ಚಿನ್ನದ ಆಭರಣ ಜೊತೆಗೆ, ಹಂತ ಹಂತವಾಗಿ ರೂ. ೧.೩೦ ಕೋಟಿಗಳನ್ನು ನಗದು ಮತ್ತು ಖಾತೆಯ ಮೂಲಕ ಪಡೆದಿದ್ದಾರೆ ಎಂದು ಉತ್ತಮ್ ಚಂದ್ ಆರೋಪಿಸಿದ್ದಾರೆ. ಬಾರ್ ಲೈಸನ್ಸ್ ಕೊಡದಿದ್ದರೆ ನನ್ನ ಹಣ ಮತ್ತು ಚಿನ್ನಾಭರಣವನ್ನು ವಾಪಸ್ ನೀಡುವಂತೆ ಕೇಳಿದಾಗ ಕೇಶವಮೂರ್ತಿ ಅಸಭ್ಯ ಭಾಷೆಯಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು. ಹೀಗಾಗಿ ಉತ್ತಮ್ ಚಂದ್ ಅವರ ವಿರುದ್ಧ ಕೆಂಪೇಗೌಡ ನಗರ ಪೊಲೀಸರಿಗೆ ದೂರು ನೀಡಿದ್ದರು.

ರೈತರನ್ನು ತಡೆದ ಪೊಲೀಸರು : ಪ್ರತಿಭಟನೆ ಎಚ್ಚರಿಕೆ

ಚಂಡೀಗಢ, ಮೇ ೬: ರೈತ ಸಂಘಗಳಾದ ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎA)ಗೆ ಸೇರಿದ ರೈತರ ಪ್ರತಿಭಟನೆಗಳನ್ನು ಪಂಜಾಬ್ ಪೊಲೀಸರು ರಾಜ್ಯಾದ್ಯಂತ ವಿಫಲಗೊಳಿಸುತ್ತಿದ್ದಾರೆ. ಇಂದು ಹರಿಯಾಣದ ಗಡಿಯಲ್ಲಿರುವ ಶಂಭು ಪೊಲೀಸ್ ಠಾಣೆ ಮುಂದೆ ದಿನವಿಡೀ ಧರಣಿ ನಡೆಸಲು ತೆರಳುತ್ತಿದ್ದ ರೈತರನ್ನು ತಡೆಯಲಾಯಿತು. ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡುವ ಪ್ರತಿಭಟನೆ ಅಥವಾ ಮುಷ್ಕರಗಳು ಸೇರಿದಂತೆ ಯಾವುದೇ ರೀತಿಯ ರಸ್ತೆ ಅಥವಾ ರೈಲು ತಡೆ ನಡೆಸದಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಶಂಭು ಪೊಲೀಸ್ ಠಾಣೆಗೆ ಹೋಗುವ ಎಲ್ಲಾ ರಸ್ತೆಗಳಲ್ಲಿ ಭಾರೀ ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಇದು ಸಂಚಾರ ದಟ್ಟಣೆಗೆ ಕಾರಣವಾಯಿತು. "ಯಾರಿಗೂ ಪ್ರತಿಭಟನೆ ನಡೆಸಲು ಮತ್ತು ಜನರಿಗೆ ಕಿರುಕುಳ ನೀಡಲು ಅವಕಾಶ ನೀಡಲಾಗುವುದಿಲ್ಲ. ರೈತರು ಯಾವುದೇ ಕಾರಣಕ್ಕೂ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಪಡಿಸಲು ನಾವು ಬಿಡುವುದಿಲ್ಲ" ಎಂದು ಪಟಿಯಾಲದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಶರ್ಮಾ ಅವರು ಹೇಳಿದ್ದಾರೆ.

ಭಾರತ ಜೊತೆ ನಾವಿದ್ದೇವೆ : ಮುಸ್ಲಿಂ ರಾಷ್ಟç ಕತಾರ್!

ನವದೆಹಲಿ, ಮೇ ೬: ಪಹಲ್ಗಾಮ್ ಉಗ್ರ ದಾಳಿಯ ನಂತರ ಜಗತ್ತಿನ ಬಹುತೇಕ ಪಾಶ್ಚಿಮಾತ್ಯ ದೇಶಗಳು ಭಾರತ ಪರವಾಗಿ ನಿಂತಿವೆ. ಇದೀಗ ಖಟ್ಟರ್ ಮುಸ್ಲಿಂ ರಾಷ್ಟç ಕತಾರ್ ಕೂಡ ಭಾರತದ ಬೆಂಬಲಕ್ಕೆ ನಿಂತಿದ್ದು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ನಾವು ಭಾರತದೊಂದಿಗಿದ್ದೇವೆ ಎಂದು ಕತಾರ್‌ನ ಅಮೀರ್ ಅಲ್ ಥಾನಿ ಹೇಳಿದ್ದಾರೆ. ಪಹಲ್ಗಾಮ್ ಉಗ್ರ ದಾಳಿಯ ಬಗ್ಗೆ ಕತಾರ್‌ನ ಅಮೀರ್ ತಮೀಮ್ ಬಿನ್ ಹಮದ್ ಅಲ್-ಥಾನಿ ದುಃಖ ವ್ಯಕ್ತಪಡಿಸಿದ್ದಾರೆ. ಕತಾರ್‌ನ ಅಮೀರ್ ಪ್ರಧಾನಿ ಮೋದಿಗೆ ಕರೆ ಮಾಡಿ ಮಾತನಾಡಿ ಭಯೋತ್ಪಾದನೆ ವಿರುದ್ಧದ ಹೋರಾಟ ದಲ್ಲಿ ಭಾರತಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಅವರು ಸಂತಾಪ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಿದರು.