ಕೊಡ್ಲಿಪೇಟೆ, ಮೇ ೭: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಗೆ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.

ಶ್ರೀ ಕಲ್ಲುಮಠದ ಮಹಾಂತ ಸ್ವಾಮೀಜಿಗಳ ಪೀಠಾರೋಹಣ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭ ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್.ಎಸ್.ಚಂದ್ರಮೌಳಿ ಅವರ ಆಹ್ವಾನದ ಮೇರೆಗೆ ವಿದ್ಯಾಸಂಸ್ಥೆಗೆ ಭೇಟಿ ನೀಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

ಬಲಿಷ್ಠ ರಾಷ್ಟç ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮಹತ್ವವಾದದ್ದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭ ವಿದ್ಯಾಸಂಸ್ಥೆಯ ವತಿಯಿಂದ ಶಂಕರ್ ಬಿದರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ಎಸ್. ಚಂದ್ರ ಮೌಳಿ, ಉಪಾಧ್ಯಕ್ಷ ಶಂಭುಲಿAಗಪ್ಪ ಸಿ.ವಿ., ನಿರ್ದೇಶಕ ಬಿ.ಕೆ. ಯತೀಶ್ ಹಾಗೂ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್ ಸೇರಿದಂತೆ ಉಪನ್ಯಾಸಕರು ಉಪಸ್ಥಿತರಿದ್ದರು.