ಸೋಮವಾರಪೇಟೆ, ಮೇ ೭: ಇಲ್ಲಿನ ನಾವು ಪ್ರತಿಷ್ಠಾನದ ವತಿಯಿಂದ ಮಹಿಳಾ ಸಮಾಜದಲ್ಲಿ ನಡೆಯುತ್ತಿರುವ ಮಕ್ಕಳ ಬೇಸಿಗೆ ಶಿಬಿರದ ಶಿಬಿರಾರ್ಥಿಗಳು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಪೊಲೀಸ್ ಇಲಾಖೆಯ ಆಡಳಿತ ಹಾಗೂ ಕರ್ತವ್ಯದ ಬಗ್ಗೆ ಇನ್ಸ್ಪೆಕ್ಟರ್ ಮುದ್ದು ಮಾದೇವ ಮಾಹಿತಿ ನೀಡಿದರು. ಮಕ್ಕಳ ವಿಶೇಷ ಪೊಲೀಸ್ ವೀಣಾ, ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು, ಕಾರ್ಯಕಾರಿ ನಿರ್ದೇಶಕಿ ಸುಮನ ಮ್ಯಾಥ್ಯು ಇದ್ದರು.