ಸೋಮವಾರಪೇಟೆ, ಮೇ ೭: ತಾಲೂಕಿನ ಶಿರಂಗಾಲದ ನಲ್ಲೂರಮ್ಮ ಹಾಗೂ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ರೂ. ೨ ಲಕ್ಷ ಧನಸಹಾಯ ನೀಡಲಾಗಿದ್ದು, ಈ ಸಂಬAಧಿತ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಗ್ರಾಮಸ್ಥರಿಗೆ ವಿತರಿಸಿದರು.
ನಂತರ ಮಾತನಾಡಿದ ಅವರು, ಶ್ರೀ ಕ್ಷೇತ್ರದಿಂದ ದೇವಾಲಯ ಜೀರ್ಣೋದ್ಧಾರ, ನೂತನ ದೇವಾಲಯಗಳ ನಿರ್ಮಾಣಕ್ಕೆ ಅನುದಾನ, ಶಿಕ್ಷಣ ಕ್ಷೇತ್ರದಲ್ಲಿ ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವು ನೀಡಲಾಗುತ್ತಿದೆ ಎಂದರು.
ಇದರೊAದಿಗೆ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ, ಗ್ರಾಮೀಣ ರೈತರಿಗೆ ಅನುಕೂಲವಾಗುವಂತೆ ಹಾಲು ಉತ್ಪಾದಕರ ಸಂಘಗಳಿಗೆ ಅನುದಾನ, ನಿರ್ಗತಿಕರಿಗೆ ಮಾಸಾಶನ, ವಿಶೇಷ ಚೇತನರಿಗೆ ಪರಿಕರಗಳ ವಿತರಣೆ, ಕೆರೆಗಳ ಹೂಳು ತೆಗೆಯುವುದು ಸೇರಿದಂತೆ ಶ್ರೀ ಕ್ಷೇತ್ರದಿಂದ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚೇತನ್, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು.