ಮಡಿಕೇರಿ, ಮೇ ೭: -ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆಯು ತಾ. ೯ ರಂದು ನಡೆಯಲಿದೆ. ಪ್ರವೇಶ ಪರೀಕ್ಷೆ ಫಲಿತಾಂಶ ತಾ. ೧೩ ರಂದು ಪ್ರಕಟವಾಗಲಿದೆ. ತಾ. ೧೭ ರಂದು ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಶಾಲೆಗೆ ದಾಖಲಾಗಲು ತಾ. ೩೧ ಕೊನೆಯ ದಿನವಾಗಿದೆ.
ಅರ್ಜಿಯನ್ನು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://sತಿಜ.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಬಳಸಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ೫ನೇ ತರಗತಿಯಲ್ಲಿ ಶೇ. ೬೦ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಟಿತ ಶಾಲೆಯಲ್ಲಿ ೬ನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ.
ವಿದ್ಯಾರ್ಥಿಗಳು ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸಬೇಕು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ. ೨ ಲಕ್ಷ ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ದೂ.ಸಂ. ೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ದೂ.ಸಂ. ೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು.