ಮಡಿಕೇರಿ, ಮೇ ೭: ಮುಂಬರುವ ರಾಷ್ಟಿçÃಯ ಜನಗಣತಿ ಮತ್ತು ಜಾತಿ ಗಣತಿಯ ಸಂದರ್ಭ ಆದಿಮಸಂಜಾತ ಬುಡಕಟ್ಟು ಜನಾಂಗ ಕೊಡವರಿಗಾಗಿ ಪ್ರತ್ಯೇಕ "ಕಾಲಮ್ ಮತ್ತು ಕೋಡ್" ಸೇರಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಾ.೯ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದೆಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ರಿಂದ ೧೧.೩೦ ಗಂಟೆಯವರೆಗೆ ಸತ್ಯಾಗ್ರಹ ನಡೆಯಲಿದ್ದು, ಜಿಲ್ಲಾಡಳಿತದ ಮೂಲಕ ಕೇಂದ್ರ ಗೃಹ ಮಂತ್ರಿಗಳು ಹಾಗೂ ಅದರ ಅಧೀನದಲ್ಲಿ ಬರುವ ಭಾರತದ ರಿಜಿಸ್ಟಾçರ್ ಜನರಲ್ ಮತ್ತು ಜನಗಣತಿ ಆಯುಕ್ತರಿಗೆ (ಆರ್‌ಜಿಸಿಸಿಐ) ವಿವರವಾದ ಮನವಿ ಪತ್ರವನ್ನು ಸಲ್ಲಿಸಲಾಗುವುದು ಎಂದರು.