ಕೂಡಿಗೆ, ಮೇ ೭: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲ ಡಾ ಕೆ.ಬಿ. ಬಸಪ್ಪ ಅವರಿಗೆ ಕಾಲೇಜಿನಲ್ಲಿ ಬೀಳ್ಕೊಡಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕೆ. ಮಂಜುಳಾ ಮಾತನಾಡಿ, ಡಾ. ಬಸಪ್ಪ ಮತ್ತು ಉಪನ್ಯಾಸಕರ ಸಮನ್ವಯತೆಯಿಂದ ಕಾಲೇಜಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ಬರುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಪುಟ್ಟರಾಜ್, ಹಾಸನ ಕಾಲೇಜಿನ ಪ್ರೊ ಸುಂದರೇಶ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಮತ್ತಿತರರು ಮಾತನಾಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್. ವಿಜಯ್, ದಿವಾಕರ್, ಸಿ.ಜಿ. ಮಂದಪ್ಪ ಮತ್ತಿತರರು ಇದ್ದರು. ಕಾಲೇಜಿನ ಉಪನ್ಯಾಸಕರಾದ ನಾಗಪ್ಪ ಯಾಲಕ್ಕಿಕಟ್ಟೆ, ಕಾವೇರಮ್ಮ, ಎಂ.ಟಿ. ರಮೇಶ್, ಎಂ.ಯು. ಸತೀಶ್, ಲಿನೆಟ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಹೇಮಂತ್ ಕುಮಾರ್, ಗ್ರಾ.ಪಂ.ಸದಸ್ಯ ಟಿ.ಪಿ. ಹಮೀದ್ ಮತ್ತಿತರರು ಇದ್ದರು. ಉಪನ್ಯಾಸಕ ರವೀಶ್ ನಿರ್ವಹಿಸಿದರು. ಇದೇ ವೇಳೆ ನಿವೃತ್ತಗೊಂಡ ಪ್ರಾಂಶುಪಾಲ ಡಾ ಕೆ.ಬಿ. ಬಸಪ್ಪ ಹಾಗೂ ಅವರ ಪತ್ನಿ ಬಿ.ಕೆ. ಭವಾನಿ ಅವರನ್ನು ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಸನ್ಮಾನಿಸಿ ಗೌರವಿಸಿದರು.