ಮಡಿಕೇರಿ, ಮೇ ೭ : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದ ಪ್ರಜೆಗಳನ್ನು ದೇಶದಿಂದ ಗಡಿಪಾರು ಮಾಡುವಂತೆ ಜಿಲ್ಲಾ ಬಿಜೆಪಿ, ಸರಕಾರ ಹಾಗೂ ರಾಜ್ಯಪಾಲರನ್ನು ಒತ್ತಾಯಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಅಕ್ರಮ ಹಾಗೂ ವೀಸಾದ ಆಧಾರದಲ್ಲಿ ದೇಶದಲ್ಲಿ ನೆಲೆಸಿರುವ ಪಾಕಿಸ್ತಾನ ಪ್ರಜೆಗಳು ದೇಶ ಬಿಟ್ಟು ಹೋಗುವಂತೆ ಈಗಾಗಲೇ ಕೇಂದ್ರ ಸರಕಾರ ಸೂಚಿಸಿದೆ. ಕೊಡಗು ಸೇರಿದಂತೆ ಹಲವೆಡೆಗಳಲ್ಲಿ ಬಾಂಗ್ಲಾದಿAದ ಬಂದ ಅಕ್ರಮ ವಾಸಿಗಳು ನೆಲೆಸಿದ್ದು, ಪೊಲೀಸ್ ಇಲಾಖೆ ಪತ್ತೆಹಚ್ಚಿ ಹೊರಹಾಕಬೇಕು. ಪಾಕಿಸ್ತಾನ ಜೊತೆ ಯುದ್ಧವಾದಲ್ಲಿ ಇಂತವರಿAದ ಆಂತರಿಕ ಭದ್ರತೆಗೆ ಧಕ್ಕೆ ಬರುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಕೈಗೊಂಡಿರುವ ಜಾತಿಗಣತಿಯಿಂದ ಸಣ್ಣ ಸಮುದಾಯಗಳಿಗೆ ನ್ಯಾಯ ದೊರಕಲಿದೆ ಎಂದು ಹೇಳಿದರು.

ಪಾಕ್ ಭೂಪಟದಲ್ಲಿರುವುದಿಲ್ಲ - ರಂಜನ್

ಪಾಕ್ ನಡೆಸಿದ ಹೇಯ ಕೃತ್ಯಕ್ಕೆ ಭಾರತ ತಕ್ಕ ಪಾಠ ಕಲಿಸಲಿದ್ದು, ಪ್ರಪಂಚದ ಭೂಪಟದಲ್ಲಿ ಪಾಕಿಸ್ತಾನ ಇಲ್ಲ ಎಂಬAತೆ ಭಾರತೀಯ ಸೈನಿಕರು ಮಾಡುತ್ತಾರೆ ಎಂದು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಭಯೋತ್ಪಾದನೆ ನಿರ್ಮೂಲನೆ ಮಾಡಲು ಸರಕಾರ ಮುಂದಾಗಿದ್ದು, ಪಾಕ್‌ನೊಂದಿಗೆ ಯುದ್ಧ ನಡೆಸಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಅಣಕು ಕವಾಯತ್ ನಡೆಸಲಾಗುತ್ತಿದ್ದು, ರಕ್ಷಣಾ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಮಾತನಾಡಿ, ಭಯೋತ್ಪಾದಕರ ಅಟ್ಟಹಾಸದಿಂದ ಅಮಾಯಕರು ಜೀವ ಕಳೆದುಕೊಂಡಿದ್ದು, ಇದು ಪಾಕಿಸ್ತಾನ ನಡೆಸಿರುವ ಹೀನ ಕೃತ್ಯವಾಗಿದೆ. ಪಾಕ್, ಬಾಂಗ್ಲದವರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಆಧಾರ್ ಕಾರ್ಡ್ ಪರಿಶೀಲನೆಯಾಗಬೇಕು. ಪೊಲೀಸ್ ಇಲಾಖೆ ಈ ಕುರಿತು ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ತಳೂರು ಕಿಶೋರ್ ಕುಮಾರ್, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಹಾಜರಿದ್ದರು.