ಸೋಮವಾರಪೇಟೆ, ಮೇ.೮: ಇಲ್ಲಿನ ಶ್ರೀ ನಾರಾಯಣಗುರು ಸೇವಾ ಸಮಿತಿ ಆಶ್ರಯದಲ್ಲಿ ತಾ. ೧೦ರಂದು ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಪ್ರಧಾನ ಕಾರ್ಯದರ್ಶಿ ಇಂದಿರಾ ಮೋಣಪ್ಪ ತಿಳಿಸಿದ್ದಾರೆ.
ನಗರದ ಚನ್ನಬಸಪ್ಪ ಸಭಾಂಗಣದಲ್ಲಿ ಸಂಜೆ ೬ ಗಂಟೆಗೆ ಪ್ರದರ್ಶನ ಆರಂಭವಾಗಲಿದ್ದು, ದೇಶ ವಿದೇಶಗಳಲ್ಲಿ ಪ್ರದರ್ಶನಗೈದು ಜನಮನ್ನಣೆಗಳಿಸಿರುವ ತೆಂಕು ತಿಟ್ಟಿನ ಪ್ರಸಿದ್ಧ ಶ್ರೀ ಆದಿ ಧೂಮಾವತಿ ದೇಯಿ ಬೈದೇತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದವರು ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾ ಭಾಗವನ್ನು ಯಕ್ಷಗಾನ ಬಯಲಾಟದಲ್ಲಿ ಪ್ರಸ್ತುತಪಡಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸಮಾಜ ಸೇವಕರಾದ ಕಿರಗಂದೂರಿನ ಎ.ಎನ್. ಪದ್ಮನಾಭ ಅವರ ಪ್ರಾಯೋಜಕ ತ್ವವಿದ್ದು, ಸಾರ್ವಜನಿಕರಿಗೆ ಯಕ್ಷಗಾನ ಪ್ರದರ್ಶನ ಉಚಿತವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.