ಭಾರತೀಯ ಸೇನೆಗೆ ಬೆಂಬಲ: ಕಾಂಗ್ರೆಸ್
‘ಜೈ ಹಿಂದ್ ತಿರಂಗಾ ಯಾತ್ರೆ'
ಬೆಂಗಳೂರು, ಮೇ ೯: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸಶಸ್ತç ಪಡೆಗಳಿಗೆ ಬೆಂಬಲ ಸೂಚಿಸಲು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ‘ಜೈ ಹಿಂದ್ ತಿರಂಗಾ ಯಾತ್ರೆ'ಯನ್ನು ಆಯೋಜಿಸಿತ್ತು. ‘ಜೈ ಹಿಂದ್-ಜೈ ಭಾರತ್-ಜೈ ತಿರಂಗಾ', ‘ಭಾರತ ಜಿಂದಾಬಾದ್', ‘ಭಾರತ ಮಾತಾ ಕಿ ಜೈ' ಮತ್ತು ‘ನಮ್ಮ ಸೈನಿಕರು ನಮ್ಮ ಹೆಮ್ಮೆ' ಎಂಬ ಘೋಷಣೆಗಳ ನಡುವೆ ಭಾರತೀಯ ತ್ರಿವರ್ಣ ಧ್ವಜವನ್ನು ಹಾರಾಡಿಸಲಾಯಿತು. ಕೆ.ಆರ್. ವೃತ್ತದಿಂದ ಪ್ರಾರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಲವಾರು ಹಿರಿಯ ಸಚಿವರು ಭಾಗವಹಿಸಿದ್ದರು. ಭಾರತದ ಗಡಿಗಳನ್ನು ಕಾಯುತ್ತಿರುವ ಸೈನಿಕರಿಗೆ ಬೆಂಬಳ ಸೂಚಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ'ಯನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಮತ್ತು ವಿವಿಧ ಸಂಘಟನೆಗಳು ಮತ್ತು ಸಂಸ್ಥೆಗಳ ಸದಸ್ಯರು ಸೇರಿದಂತೆ ಎಲ್ಲ ವರ್ಗದ ಜನರು ಭಾಗವಹಿಸುವಂತೆ ಕೇಳಲಾಗಿದೆ ಎಂದರು. ‘ಸೈನಿಕರು ನಮ್ಮ ರಾಷ್ಟ್ರೀಯ ಹೆಮ್ಮೆ. ನಾವು ಅವರಿಗೆ ನಮನ ಸಲ್ಲಿಸಲು ಬಯಸುತ್ತೇವೆ. ಇಡೀ ದೇಶವು ಅವರ ಹಿಂದೆ ಇದೆ ಎಂದು ತಿಳಿಸಲು ನಾವು ಅವರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ' ಎಂದು ಹೇಳಿದರು.
ಮೂರು ಗಂಟೆ ಮೊದಲೇ ವಿಮಾನ ನಿಲ್ದಾಣ ತಲುಪುವಂತೆ ಸಲಹೆ
ಬೆಂಗಳೂರು, ಮೇ ೯: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣ ಶುಕ್ರವಾರ ಪ್ರಯಾಣಿಕರಿಗೆ ಮನವಿ ಮಾಡಿದೆ. ಭದ್ರತೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಲಹೆ ಮಾರ್ಗಸೂಚಿಯಲ್ಲಿ ಹೊಸ ಅಂಶವನ್ನು ಸೇರ್ಪಡೆ ಮಾಡಲಾಗಿದ್ದು, ತಪಾಸಣೆ ನಡೆಸುವ ನಿಟ್ಟಿನಲ್ಲಿ ಎಲ್ಲ ಪ್ರಯಾಣಿಕರು ವಿಮಾನ ಹೊರಡುವ ಮೂರು ಗಂಟೆಗೂ ಮುನ್ನವೇ ವಿಮಾನ ನಿಲ್ದಾಣಕ್ಕೆ ತಲುಪುವಂತೆ ಸೂಚಿಸಲಾಗಿದೆ. ದೇಶದಾದ್ಯಂತ ಹೆಚ್ಚಿದ ಭದ್ರತಾ ದೃಷ್ಟಿಯಿಂದಾಗಿ ಎಲ್ಲ ವಿಮಾನ ನಿಲ್ದಾಣಗಳಲ್ಲಿ ವರ್ಧಿತ ಸ್ಕಿçÃನಿಂಗ್ ಕ್ರಮಗಳು ಜಾರಿಯಲ್ಲಿವೆ. ಸುಗಮ ಚೆಕ್-ಇನ್, ಭದ್ರತೆ ಮತ್ತು ಬೋರ್ಡಿಂಗ್ಗಾಗಿ ಪ್ರಯಾಣಿಕರು ವಿಮಾನ ನಿರ್ಗಮಿಸುವ ಕನಿಷ್ಟ ಮೂರು ಗಂಟೆಗೂ ಮುನ್ನವೇ ನಿಲ್ದಾಣಕ್ಕೆ ಆಗಮಿಸಲು ಸೂಚಿಸಲಾಗಿದೆ' ಎಂದು ತಿಳಿಸಿದೆ. ಹೊಸ ಮಾರ್ಗಸೂಚಿಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣ (ಕೆಐಎ) ತಿಳಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಎಲ್ಲ ವಿಮಾನಗಳಿಗೆ ದ್ವಿತೀಯ ಹಂತದ ಭದ್ರತಾ (ಸೆಕೆಂಡರಿ ಲ್ಯಾಡರ್ ಪಾಯಿಂಟ್) ತಪಾಸಣೆಯನ್ನು ಕಡ್ಡಾಯಗೊಳಿಸಿದೆ. ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡಗಳಲ್ಲಿ ಸಂದರ್ಶಕರಿಗೆ ನಿಷೇಧ ಹೇರಲಾಗಿದೆ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ತಿಳಿಸಿದೆ.
ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ
ಬೆಂಗಳೂರು, ಮೇ ೯: ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ ೨೨೩ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ. ಜನಪ್ರÀತಿನಿಧಿಗಳ ಕಾಯ್ದೆಯಡಿ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳ ಸದಸ್ಯತ್ವ ರದ್ದಾಗಲಿದೆ. ಜನಾರ್ದನ ರೆಡ್ಡಿ ಅವರು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾದ ನಂತರವೂ ೬ ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಓಬಳಾಪುರಂ ಮೈನಿಂಗ್ ಕಂಪೆನಿ(ಒಎAಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ನೀಡಿತ್ತು. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬAಧ ಬರೋಬ್ಬರಿ ೧೩ ವರ್ಷಗಳಿಂದ ನಡೆದ ಸುದೀರ್ಘ ವಿಚಾರಣಾ ಪ್ರಕ್ರಿಯೆಯಲ್ಲಿ ೩,೪೦೦ಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸಲಾಗಿದೆ ಮತ್ತು ೨೧೯ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಇಬ್ಬರು ಶಂಕಿತ ಜೆಎನ್ಬಿ ಉಗ್ರರ ಬಂಧನ
ಕೊಲ್ಕತ್ತ, ಮೇ ೯: ನಿಷೇಧಿತ ಜಮಾತುಲ್ಲಾ ಮುಜಾ ಹಿದ್ದೀನ್ ಬಾಂಗ್ಲಾದೇಶ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಬೀರ್ ಭೂಮ್ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ ವಿಶೇಷ ಕಾರ್ಯ ಪಡೆ ಪೊಲೀಸರು ಬಂಧಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತರನ್ನು ಅಜ್ಮೋಲ್ ಹೊಸೈನ್ ಮತ್ತು ಸಾಹೇಬ್ ಅಲಿ ಖಾನ್ ಎಂದು ಗುರುತಿಸಲಾಗಿದೆ. ಅವರನ್ನು ಮೇ ೮ ಮತ್ತು ೯ ರ ಮಧ್ಯರಾತ್ರಿ ನಲ್ಹಾಟಿ ಮತ್ತು ಮುರಾರೈ ಪ್ರದೇಶಗಳಿಂದ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬಂಧಿತರು ಭಯೋತ್ಪಾದಕ ಸಂಘಟನೆ ಸೇರಲು ಮುಸ್ಲಿಂ ಯುವಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ಪ್ರೇರೇಪಿಸುವಲ್ಲಿ ತೊಡಗಿದ್ದರು ಮತ್ತು ಅವರನ್ನು ಭಾರತದ ವಿರುದ್ಧ ಯುದ್ಧ ಮಾಡುವ ಉದ್ದೇಶದೊಂದಿಗೆ ಮೂಲಭೂತೀಕರಣ ಮಾಡಲಾಗುತಿತ್ತು ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಜಿಹಾದಿ ಚಟುವಟಿಕೆಗಳನ್ನು ನಡೆಸಲು ಬಾಂಗ್ಲಾದೇಶ ದಾಟಲು ಯತ್ನಿಸಿದ್ದ ಹೊಸೈನ್ ಉಪಖಂಡದ ಇತರ ಭಾಗಗಳಲ್ಲಿ ಸಂಪರ್ಕ ಹೊಂದಿದ್ದಾನೆ. ಇವರಿಬ್ಬರು ಇತರ ಸಹಚರರೊಂದಿಗೆ ವಿಧ್ವಂಸಕ ಚಟುವಟಿಕೆಗಳಿಗಾಗಿ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸಂಗ್ರಹಿಸಲು ಪ್ರಯತ್ನಿಸಿದ್ದಾರೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಬಂಧಿತರನ್ನು ರಾಮ್ಪುರಹಟ್ನ ಸಹಾಯಕ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ೧೪ ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಆಕ್ಷೇಪಾರ್ಹ ಹೇಳಿಕೆ ನೀಡಲ್ಲ, ರಾಮದೇವ್ ಭರವಸೆ
ನವದೆಹಲಿ, ಮೇ ೯: ಹಮ್ದರ್ದ್ ಸಂಸ್ಥೆಯ ರೂಹ್ ಅಫ್ಜಾ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಯೋಗ ಗುರು ರಾಮ್ದೇವ್ ಭರವಸೆ ನೀಡಿದ ನಂತರ ದೆಹಲಿ ಹೈಕೋರ್ಟ್ ಶುಕ್ರವಾರ ಪ್ರಕರಣವನ್ನು ಮುಕ್ತಾಯಗೊಳಿಸಿತು. ರಾಮದೇವ್ ಮತ್ತು ಪತಂಜಲಿ ಫುಡ್ಸ್ ಲಿಮಿಟೆಡ್ ತಮ್ಮ ಅಫಿಡವಿಟ್ಗಳಲ್ಲಿ ನೀಡಿದ ಹೇಳಿಕೆಗಳು ಅವರ ಮೇಲೆ ಬದ್ಧವಾಗಿವೆ ಎಂದು ನ್ಯಾಯಮೂರ್ತಿ ಅಮಿತ್ ಬನ್ಸಾಲ್ ಹೇಳಿದರು. ಹಮ್ದರ್ದ್ ನ್ಯಾಷನಲ್ ಫೌಂಡೇಶನ್ ಇಂಡಿಯಾ ಪರವಾಗಿ ತೀರ್ಪು ನೀಡಿತ್ತು. ನ್ಯಾಯಾಲಯವು ಈ ಹಿಂದೆ ವಿವಾದಾತ್ಮಕ ಆನ್ಲೈನ್ ವಿಷಯವನ್ನು ತೆಗೆದುಹಾಕುವಂತೆ ಆದೇಶಿಸಿತ್ತು. ರಾಮ್ದೇವ್ ಮತ್ತು ಪತಂಜಲಿಗೆ ತಮ್ಮ ಹೊಣೆಗಾರಿಕೆಗಳನ್ನು ಸಲ್ಲಿಸುವಂತೆ ಕೇಳಿತ್ತು. ಪತಂಜಲಿಯ "ಗುಲಾಬ್ ಶರ್ಬತ್" ಅನ್ನು ಪ್ರಚಾರ ಮಾಡುವಾಗ, ಹಮ್ದರ್ದ್ ಅವರ ರೂಹ್ ಅಫ್ಜಾದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗಿದೆ ಎಂದು ರಾಮದೇವ್ ಆರೋಪಿಸಿದ್ದಾರೆ ಎಂದು ಹಮ್ದರ್ದ್ ಹೇಳಿತ್ತು. ಏಪ್ರಿಲ್ ೨೨ ರಂದು, ನ್ಯಾಯಾಲಯವು ರಾಮ್ದೇವ್ ಮತ್ತು ಪತಂಜಲಿಯಿAದ ಅಫಿಡವಿಟ್ ಅನ್ನು ಕೋರಿತ್ತು. ಭವಿಷ್ಯದಲ್ಲಿ ಪ್ರತಿಸ್ಪರ್ಧಿಗಳ ಉತ್ಪನ್ನಗಳಿಗೆ ಸಂಬAಧಿಸಿದAತೆ ಪ್ರಸ್ತುತ ಮೊಕದ್ದಮೆಯ ವಿಷಯಕ್ಕೆ ಹೋಲುವ ಯಾವುದೇ ಹೇಳಿಕೆಗಳು, ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಅಥವಾ ಅವಹೇಳನಕಾರಿ ವೀಡಿಯೊಗಳು/ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಭರವಸೆ ನೀಡಿತು. ಹಮ್ದರ್ದ್ ಅವರ ರೂಹ್ ಅಫ್ಜಾ ಕುರಿತು ರಾಮದೇವ್ ಅವರ "ಶರ್ಬತ್ ಜಿಹಾದ್" ಹೇಳಿಕೆ ಕ್ಷಮಿಸಲಾಗದು. ಮತ್ತೊಂದೆಡೆ, ರಾಮದೇವ್ ಪರ ವಕೀಲರು "ನ್ಯಾಯಾಲಯದ ಬಗ್ಗೆ ಅವರಿಗೆ ಅಪಾರ ಗೌರವವಿದೆ" ಮತ್ತು ಅದರ ಸೂಚನೆಗಳನ್ನು ಪಾಲಿಸಲಾಗುವುದು ಎಂದು ಹೇಳಿದರು.