.
ಸಿದ್ದಾಪುರ, ಮೇ ೯: ಬಾಡಗ ಬಾಣಂಗಾಲ ಗ್ರಾಮ ವ್ಯಾಪ್ತಿಯ ಕಾಫಿ ತೋಟದೊಳಗೆ ಬೀಡು ಬಿಟ್ಟು ಜಾನುವಾರುಗಳ ಮೇಲೆ ನಿರಂತರವಾಗಿ ದಾಳಿ ನಡೆಸಿ ಕೊಂದು ಹಾಕಿರುವ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿಯಲು ಗುರುವಾರದಿಂದಲೇ ಕಾರ್ಯಾಚರಣೆ ನಡೆಸಿದ್ದಾರೆ. ಗುರುವಾರ ಮಧ್ಯರಾತ್ರಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಹುಲಿಯ ಸೆರೆಗೆ ಹಸು ಸತ್ತ ಜಾಗದಲ್ಲಿ ಬೋನ್ ಇಡಲಾಗಿದ್ದು ಆದರೆ ಹುಲಿಯು ಈ ಭಾಗಕ್ಕೆ ಬಂದಿರುವುದಿಲ್ಲವೆAದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಡಗ ಬಾಣಂಗಾಲ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿAದ ನಾಲ್ಕೆöÊದು ಜಾನುವಾರುಗಳನ್ನು ಹುಲಿ ಕೊಂದು ಹಾಕಿರುತ್ತದೆ. ಹಲವಾರು ಕಾಡು ಹಂದಿಗಳನ್ನು ಬೇಟೆಯಾಡಿ ತಿಂದಿರುವ ಕುರುಹುಗಳು ಪತ್ತೆಯಾಗಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹುಲಿಯ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಆದರೆ ಬೇರೆ ದಿಕ್ಕಿಗೆ ಸಂಚರಿಸುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.