ಕುಶಾಲನಗರ, ಮೇ. ೧೦: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರದ ಮೂಲಕ ಅಂದಾಜು ೧೦೦ ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ಕ್ಷೇತ್ರ ಶಾಸಕ ಡಾ ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಿರಂತರ ಚಿಂತನೆ ಹರಿಸಲಾಗುತ್ತಿದ್ದು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದರು.

ಕುಶಾಲನಗರ ಕೂಡಿಗೆ ರಸ್ತೆಯನ್ನು ಸುಮಾರು ೨.೫ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ದುಬಾರೆ ಪ್ರವಾಸಿ ಕೇಂದ್ರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಎಂಟು ಕೋಟಿ ರೂ ವೆಚ್ಚದಲ್ಲಿ ತೂಗು ಸೇತುವೆ ಕಾಮಗಾರಿಗೆ ಅನುಮೋದನೆ ದೊರೆತಿದೆ. ಹಾರಂಗಿ ಅಣೆಕಟ್ಟು ಎದುರು ಭಾಗದಲ್ಲಿ ಇರುವ ಅತ್ಯಾಧುನಿಕ ತಂತ್ರಜ್ಞಾನದ ಸೇತುವೆ ನಿರ್ಮಾಣ ಕಾಮಗಾರಿ ಸದ್ಯದಲ್ಲೇ ಆರಂಭಗೊಳ್ಳಲಿದೆ, ಹಾರಂಗಿ ಜಲಾಶಯದ ಕಾಲುವೆ ನಿರ್ವಹಣೆ ಕಾಮಗಾರಿ ಸುಮಾರು ೭೮ ಕೋಟಿ ವೆಚ್ಚದಲ್ಲಿ ನಡೆಯಲಿದೆ ಎಂದು ಮಾಹಿತಿ ಒದಗಿಸಿದರು.

ಶಾಸಕರುಗಳಿಗೆ ತಲಾ ೫೦ ಕೋಟಿ ರೂ ಅನುದಾನ ಲಭಿಸಲಿದ್ದು ಈ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ನಡೆಯಲಿದೆ ಎಂದರು. ಕುಶಾಲನಗರ ಬಸ್ ನಿಲ್ದಾಣ ಆವರಣದಲ್ಲಿ ಸುಮಾರು ೧.೧೪ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಇಂದಿರಾ ಕ್ಯಾಂಟೀನ್ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯುವಂತೆ ಅವರು ಕೋರಿದರು.

ಸ್ವಚ್ಛತೆ ಮತ್ತು ಆಹಾರದ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು. ಗ್ರಾಹಕರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಅವರು ಕ್ಯಾಂಟೀನ್ ಸಿಬ್ಬಂದಿಗಳಿಗೆ ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿ ಪಿ ಶಶಿಧರ್ ಇಂದಿರಾ ಕ್ಯಾಂಟೀನ್ ಪರಿಕಲ್ಪನೆಯ ಬಗ್ಗೆ ಹಾಗೂ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದರು. ಹಸಿವು ಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಇಂದಿರಾ ಕ್ಯಾಂಟೀನ್ ಯೋಜನೆ ಕಲ್ಪಿಸಿದ್ದು ಯಶಸ್ವಿಯಾಗಿದೆ ಎಂದರು.

ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪುರಸಭಾ ಮುಖ್ಯ ಅಧಿಕಾರಿ ಗಿರೀಶ್ ಇಂದಿರಾ ಕ್ಯಾಂಟೀನ್ ಬಗ್ಗೆ ಮಾಹಿತಿ ಒದಗಿಸಿದರು.

ಈ ಸಂದರ್ಭ ತಾಲೂಕು ತಹಶೀಲ್ದಾರ್ ಕಿರಣ್ ಜಿ. ಗೌರಯ್ಯ, ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷö್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್, ಕೆಪಿಸಿಸಿ ಸದಸ್ಯ ಮಂಜುನಾಥ ಗುಂಡುರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಆರೋಗ್ಯ ಅಧಿಕಾರಿ ಉದಯಕುಮಾರ್, ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಇದ್ದರು.

ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷö್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್, ಕೆಪಿಸಿಸಿ ಸದಸ್ಯ ಮಂಜುನಾಥ ಗುಂಡುರಾವ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಆರೋಗ್ಯ ಅಧಿಕಾರಿ ಉದಯಕುಮಾರ್, ಪುರಸಭಾ ಸದಸ್ಯರು, ಪಕ್ಷದ ಪ್ರಮುಖರು ಇದ್ದರು.