ಕೂಡಿಗೆ, ಮೇ ೧೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ಶ್ರೀ ಮಾರಿಯಮ್ಮ ಸೇವಾ ಸಮಿತಿ ವತಿಯಿಂದ ವಾರ್ಷಿಕ ಮಹಾ ಪೂಜಾ ಮಹೋತ್ಸವ ಶ್ರದ್ಧಾಭಕ್ತಿ ಯಿಂದ ನೆರವೇರಿತು.
ಇದರ ಅಂಗವಾಗಿ ಬೆಳಿಗ್ಗೆ ಹಾರಂಗಿ ನದಿಯಿಂದ ಗಂಗಾ ಪೂಜೆಯೊಂದಿಗೆ ಕಲಶ ತರಲಾಯಿತು. ಬಳಿಕ ದೇವಿಗೆ ವಿಶೇಷ ಪೂಜೆ, ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ, ಅನ್ನಸಂತರ್ಪಣೆ ಕಾರ್ಯ ನಡೆಯಿತು. ಈ ಸಂದರ್ಭ ಸೇವಾ ಸಮಿತಿ ಅಧ್ಯಕ್ಷ ತಮ್ಮಯ್ಯ, ಕಾರ್ಯದರ್ಶಿ ರಂಜೀನಿ, ಉಪಾಧ್ಯಕ್ಷರಾದ ತುಳಸಿ, ಸೇರಿದಂತೆ ಸಮಿತಿ ನಿರ್ದೇಶಕರು, ಗ್ರಾಮಸ್ಥರು ಹಾಜರಿದ್ದರು.