ಖ್ಯಾತ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವ ಪತ್ತೆ

ಮಂಡ್ಯ, ಮೇ ೧೧: ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಖ್ಯಾತ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಕೃಷಿ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಬ್ಬಣ್ಣ ಅಯ್ಯಪ್ಪನ್ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸಾಯಿ ಆಶ್ರಮದ ಬಳಿಯ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್‌ನಲ್ಲಿ ಸುಬ್ಬಣ್ಣ ತಮ್ಮ ಪತ್ನಿಯೊಂದಿಗೆ ವಾಸಿಸುತ್ತಿದ್ದರು. ಅವರು ಮೇ ೭ ರಿಂದ ಅವರು ನಾಪತ್ತೆಯಾಗಿದ್ದರು. ಈ ಸಂಬAಧ ಕುಟುಂಬವು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ನಾಪತ್ತೆ ದೂರು ದಾಖಲಿಸಿತ್ತು. ಆದರೆ ಶನಿವಾರ ಸಂಜೆ, ಆಶ್ರಮದ ಬಳಿಯ ಕಾವೇರಿ ನದಿಯಲ್ಲಿ ಸುಬಣ್ಣ ಅವರ ಮೃತದೇಹ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಅದು ವಿಜ್ಞಾನಿ ಎಂದು ಪತ್ತೆಯಾಯಿತು. ನದಿಯ ದಡದಲ್ಲಿ ನಿಲ್ಲಿಸಲಾಗಿದ್ದ ಸುಬ್ಬಣ್ಣ ಅವರ ಸ್ಕೂಟರ್ ಅನ್ನು ಸಹ ಅವರು ಪತ್ತೆ ಮಾಡಿದ್ದು ಪ್ರಸ್ತುತ ಅದನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಅವರು ಮೂರು ದಿನಗಳ ಹಿಂದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದಾಗ್ಯೂ, ಸಾವಿಗೆ ನಿಜವಾದ ಕಾರಣವನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಶವವನ್ನು ಕೆಆರ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಸುಬ್ಬಣ್ಣ ಸಂಬAಧಿ ಮತ್ತು ವಕೀಲ ಶ್ರೀನಿಧಿ ಅವರು ಸುಬ್ಬಣ್ಣ ನಿಯಮಿತವಾಗಿ ರಾಮಕೃಷ್ಣ ಆಶ್ರಮ ಮತ್ತು ಸಾಯಿ ಆಶ್ರಮಕ್ಕೆ ಧ್ಯಾನಕ್ಕಾಗಿ ಭೇಟಿ ನೀಡುತ್ತಿದ್ದರು ಎಂದು ಹೇಳಿದರು.

ಪಾಕ್ ಪರ ಪೋಸ್ಟ್-ವಿದ್ಯಾರ್ಥಿನಿ ವಿರುದ್ಧ ಪ್ರಕರಣ

ವಿಜಯಪುರ, ಮೇ ೧೧: ಅತ್ತ ಗಡಿ ಪ್ರದೇಶಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಪರ ಪೋಸ್ಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾಳೆ. ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿರುದ್ಧ ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಾಕಿಸ್ತಾನದ ಪರ ಸರಣಿ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಆಕೆಯ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾರ್ಥಿನಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲೂ ವಿದ್ಯಾರ್ಥಿನಿ ನಡೆಗೆ ಅಸಮಾಧಾನ ಏರ್ಪಟ್ಟಿತ್ತು. ಈ ಬೆಳವಣಿಗೆ ಬೆನ್ನಲ್ಲೇ ವಿದ್ಯಾರ್ಥಿನಿ ತನ್ನ ವಿವಾದಿತ ಪೋಸ್ಟ್ ಅನ್ನು ತೆಗೆದುಹಾಕಿದ್ದಾಳೆ. ವಿದ್ಯಾರ್ಥಿನಿ ತಶೌಧ್ ಫಾರೂಕಿ ಶೇಖ್ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿವಾದಿತ ಪೋಸ್ಟ್ ಹಂಚಿಕೊAಡಿದ್ದಾರೆ, ‘ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ (ಭಾರತೀಯ ಆಕ್ರಮಿತ ಜೆಕೆ) ಜನರು ಮಿಲಿಟರಿ, ಸರ್ಕಾರಿ ಸ್ಥಾಪನೆಗಳ ಬಳಿ ಹೋಗುವುದನ್ನು ತಪ್ಪಿಸಿ. ನೀವು ಗಡಿ ವ್ಯಾಪ್ತಿಯಲ್ಲಿ ೨೦೦ ಕಿಮೀ ಹತ್ತಿರ ವಾಸಿಸುತ್ತಿದ್ದರೆ, ದಯವಿಟ್ಟು ಒಳನಾಡಿಗೆ ತೆರಳಿ. ಅಲ್ಲಾಹನು ಭಾರತದಿಂದ ನಮ್ಮೆಲ್ಲರನ್ನೂ ರಕ್ಷಿಸಲಿ, ಅಮೀನ್ # ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಳು.

ಪಾಕಿಸ್ತಾನದ ಅಧಿಕಾರಿಯೊಂದಿಗೆ ಸಂಪರ್ಕ : ಇಬ್ಬರ ಬಂಧನ

ನವದೆಹಲಿ, ಮೇ ೧೧: ನವದೆಹಲಿಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕ ಹೊಂದಿದ್ದ, ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಮಲೇರ್ಕೋಟ್ಲಾ ಪೊಲೀಸರು ಬಂಧಿಸಿದ್ದಾರೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ತಿಳಿಸಿದ್ದಾರೆ. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯನಿರ್ವಹಿಸುತ್ತಾ, ಭಾರತೀಯ ಸೇನೆಯ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ನಿರ್ವಾಹಕರಿಗೆ ಸೋರಿಕೆ ಮಾಡಿದ್ದಕ್ಕಾಗಿ ಶಂಕಿತರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಈ ಬಂಧನದಿAದ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಎರಡನೇ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ರಹಸ್ಯ ಮಾಹಿತಿಯನ್ನು ರವಾನಿಸಿ ಆನ್‌ಲೈನ್ ವಹಿವಾಟಿನ ಮೂಲಕ ಪಾವತಿಗಳನ್ನು ಪಡೆಯುತ್ತಿದ್ದರು ಎಂದು ಡಿಜಿಪಿ ಹೇಳಿದ್ದಾರೆ. ಆರೋಪಿಗಳಿಬ್ಬರೂ ಹ್ಯಾಂಡ್ಲರ್ ಜೊತೆ ಆಗಾಗ್ಗೆ ಸಂಪರ್ಕದಲ್ಲಿದ್ದರು ಮತ್ತು ಅವರ ಸೂಚನೆಯಂತೆ ಇತರ ಸ್ಥಳೀಯ ಕಾರ್ಯಕರ್ತರಿಗೆ ಹಣವನ್ನು ರವಾನಿಸುವಲ್ಲಿ ಭಾಗಿಯಾಗಿದ್ದರು. ಬಂಧಿತರಿAದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಎಫ್‌ಐಆರ್ ದಾಖಲಿಸಲಾಗಿದೆ.

ಬಾಲಕಿ ಮೇಲೆ ಅತ್ಯಾಚಾರ-ಮತ್ತೋರ್ವಳ ಹತ್ಯೆ

ಲಖನೌ, ಮೇ ೧೧: ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಆಕೆಯ ಸ್ನೇಹಿತೆಯನ್ನು ಕಾರಿನಿಂದ ತಳ್ಳಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಘಟನೆ ಸಂಬAಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ನಾನು ಮತ್ತು ನನ್ನ ಸ್ನೇಹಿತೆ ಆಕೆಯ ಸ್ನೇಹಿತರಾದ ಸಂದೀಪ್, ಅಮಿತ್ ಮತ್ತು ಗೌರವ್ ಜತೆಗೆ ಕಾರಿನಲ್ಲಿ ನೋಯ್ದಾದಿಂದ ಲಖನೌಗೆ ತೆರಳುತ್ತಿದ್ದೇವು. ಈ ವೇಳೆ ಆರೋಪಿಗಳು ಮದ್ಯ ಖರೀದಿಸಿ ಕಾರಿನಲ್ಲಿ ಕುಡಿದು ಗಲಾಟೆ ಆರಂಭಿಸಿದರು. ಬಳಿಕ ನನ್ನ ಸ್ನೇಹಿತೆಯನ್ನು ಕಾರಿನಿಂದ ತಳ್ಳಿ, ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಬುಲಂದ್‌ಶಹರ್‌ನಲ್ಲಿ ಸಂತ್ರಸ್ತೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದಳು. ಈ ಘಟನೆ ಸಂಬAಧ ಖುರ್ಜಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ತೇಜ್‌ವೀರ್ ಸಿಂಗ್ ಹೇಳಿದ್ದಾರೆ. ಈ ಸಂಬAಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು, ಈ ಘಟನೆಯಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಎನ್‌ಕೌಂಟರ್ ಮೂಲಕ ಬಂಧಿಸಲಾಗಿದೆ. ಆರೋಪಿಗಳಿಂದ ಅಕ್ರಮ ಬಂದೂಕುಗಳು, ಅಪರಾಧಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದೇವೆ ಎಂದು ಸಿಂಗ್ ತಿಳಿಸಿದ್ದಾರೆ.

ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್-ಮೂವರ ಬಂಧನ

ಉತ್ತರ ಪ್ರದೇಶ, ಮೇ ೧೧: ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ತಿರುಚಿದ ಮತ್ತು ಆಕ್ಷೇಪಾರ್ಹ ಕಂಟೆAಟ್ ಪೋಸ್ಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶದ ಸೋನ ಭದ್ರದಲ್ಲಿ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಶಬ್ಬಿರ್ ಅನ್ಸಾರಿ, ಜುಬೈರ್ ಅನ್ಸಾರಿ ಮತ್ತು ಇಝಾರ್ ತಮ್ಮ ಫೇಸ್‌ಬುಕ್ ಖಾತೆಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ದೂರುದಾರರ ಪ್ರಕಾರ, ಆರೋಪಿಗಳು ಪಾಕಿಸ್ತಾನಿ ಯೂಟ್ಯೂಬರ್ ಒಬ್ಬರ ಫೇಸ್‌ಬುಕ್ ಕಂಟೆAಟ್‌ಅನ್ನು ಬಳಸಿಕೊಂಡು ಪ್ರಧಾನಿ ಮೋದಿಯವರನ್ನು ತಪ್ಪಾಗಿ ಚಿತ್ರಿಸುವ ತಿರುಚಿದ ಪೋಸ್ಟ್ಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. ಪೋಸ್ಟ್ಗಳು ಭಾರತ ವಿರೋಧಿ ಎಂಬುದು ತನಿಖೆಯಲ್ಲಿ ಕಂಡುಬAದಿದೆ. ಆರೋಪಿಗಳು ಶತ್ರು ರಾಷ್ಟçಗಳೊಂದಿಗೆ ಸೂಕ್ಷö್ಮ ಮಾಹಿತಿ ಯನ್ನು ಹಂಚಿಕೊAಡಿರುವ ಸಾಧ್ಯತೆ ಇದೆ ಎಂದು ಎಎಸ್‌ಪಿ ಹೇಳಿದ್ದಾರೆ. ದೂರು ಮತ್ತು ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಬಿಎನ್‌ಎಸ್‌ನ ಸಂಬAಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತದೇಹವನ್ನು ಕಚ್ಚಿ ತಿಂದ ನಾಯಿ

ಭೋಪಾಲ್, ಮೇ ೧೧: ಮಧ್ಯಪ್ರದೇಶದ ನರ್ಮದಾಪುರಂನ ಸರ್ಕಾರಿ ಆಸ್ಪತ್ರೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯ ಮೃತದೇಹವನ್ನು ನಾಯಿಯೊಂದು ಕಚ್ಚಿ ತಿಂದಿರುವ ಘಟನೆ ಭಾನುವಾರ ನಡೆದಿದೆ. ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಾಲನ್‌ಪುರ ಬಳಿ ಅಪಘಾತದಲ್ಲಿ ಮೃತಪಟ್ಟ ನಿಖಿಲ್ ಚೌರಾಸಿಯಾ (೨೧) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯಲ್ಲಿ ಇಡಲಾಗಿತ್ತು. ಇದೇ ವೇಳೆ ನಿಖಿಲ್ ಮೃತದೇಹವನ್ನು ನಾಯಿ ಕಚ್ಚಿ ತಿಂದಿದೆ ಎಂದು ವರದಿಯಾಗಿದೆ. ಘಟನೆ ಸಂಬAಧ ಭದ್ರತಾ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಆಸ್ಪತ್ರೆಯ ಸಿವಿಲ್ ಸರ್ಜನ್ ಸುಧೀರ್ ವಿಜಯವರ್ಗಿಯಾ ತಿಳಿಸಿದ್ದಾರೆ.