ಗೋಣಿಕೊಪ್ಪಲು: ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ಕಾವೇರಿ ಕಾಲೇಜು ಅಲುಮಿನೈ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಪುಚ್ಚಿಮಾಡ ದಿ. ತಿಮ್ಮಯ್ಯ, ಪುಚ್ಚಿಮಾಡ ದಿ. ಚೋಂದಮ್ಮ ತಿಮ್ಮಯ್ಯ ಹಾಗೂ ಪುಚ್ಚಿಮಾಡ ದಿ. ಮೀನಾ ಸುಬ್ಬಯ್ಯ ಅವರ ಜ್ಞಾಪಕಾರ್ಥವಾಗಿ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ಪ್ರಥಮ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಕನ್ನಡದಲ್ಲಿ ಸೋನಿಕ ಕೆ.ಟಿ. ಪ್ರಥಮ, ಆಂಗ್ಲ ಭಾಷೆಯಲ್ಲಿ ಮನ ಕೆ.ಆರ್. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಪೊನ್ನAಪೇಟೆ ಅರಣ್ಯ ಮಹಾ ವಿದ್ಯಾಲಯ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.ಮಡಿಕೇರಿ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆಗೊಂಡ ಜಿಲ್ಲಾಮಟ್ಟದ ಕಲೋತ್ಸವ-೨೦೨೫ ಕಾರ್ಯಕ್ರಮನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜ ಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಕಾಲೇಜು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದೊಂದಿಗೆ ಕಲೆ, ಸಾಂಸ್ಕೃತಿಕ ಹಾಗೂ ಕ್ರೀಡೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳು ವುದರೊಂದಿಗೆ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಎಲ್ಲರೂ ಶ್ರಮಪಡಬೇಕು ಎಂದು ಕರೆ ನೀಡಿದರು. ಈ ನಿಟ್ಟಿನಲ್ಲಿ ಇಂತಹ ಕಲೋತ್ಸವ ಕಾರ್ಯಕ್ರಮಗಳು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಡಗಿರುವ ವಿಶೇಷ ಹಾಗೂ ವಿಶಿಷ್ಟವಾದ ಕಲೆಯನ್ನು ಹೊರ ತರುವಲ್ಲಿ ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು. ಎಲ್ಲರೂ ಶೈಕ್ಷಣಿಕವಾಗಿ ಹಾಗೂ ಶಿಕ್ಷಣೇತರ ಚಟುವಟಿಕೆಗಳಲ್ಲೂ ಸಾಧನೆ ಮಾಡಿ ಜೀವನದಲ್ಲಿ ಉತ್ತಮ ಸ್ಥಾನ ಹಾಗೂ ಹೆಸರು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭ ಗಣ್ಯರು, ಕಾಲೇಜು ವಿದ್ಯಾರ್ಥಿಗಳು ಇದ್ದರು.ಶನಿವಾರಸಂತೆ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿ ಶಿಕ್ಷಕ. ವಿದ್ಯಾರ್ಥಿಗಳನ್ನು ತಿದ್ದಿ, ತೀಡಿ ಸುಂದರ ಮೂರ್ತಿಗಳನ್ನಾಗಿಸಿ ಸಮಾಜದಲ್ಲಿ ಗೌರವಕ್ಕೆ ಶಿಕ್ಷಕ ಪಾತ್ರನಾಗುತ್ತಾರೆ ಎಂದು ನಿವೃತ್ತ ಮುಖ್ಯಶಿಕ್ಷಕ ಎಸ್.ಪಿ. ರಾಜ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಭಾರತಿ ವಿದ್ಯಾಸಂಸ್ಥೆಯ ನಿಡ್ತ ಬಸಪ್ಪ ಸಭಾಂಗಣದಲ್ಲಿ ಸಂಸ್ಥೆಯ ೨೦೦೨-೦೫ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಏರ್ಪಡಿಸಿದ್ದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ದೆಸೆಯಲ್ಲಿ ತಪ್ಪು ಮಾಡಿದ ವಿದ್ಯಾರ್ಥಿಗಳು ಶಿಕ್ಷಕರ ದಂಡನೆಗೆ ಒಳಗಾಗುವುದು ಸಹಜ. ಅದನ್ನೆಲ್ಲಾ ಮರೆತ ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಸಾಧಿಸಿ ಇಂದು ಗುರುವಂದನಾ ಸಲ್ಲಿಸುತ್ತಿರುವ ಪವಿತ್ರ ಮನೋಭಾವ ಶಿಕ್ಷಕರಲ್ಲಿ ಧನ್ಯತಾ ಭಾವ ಮೂಡಿಸಿದೆ ಎಂದರು.
ಮುಖ್ಯ ಅತಿಥಿ ನಿವೃತ್ತ ಮುಖ್ಯಶಿಕ್ಷಕ ಜಿ.ಬಿ. ನಾಗಪ್ಪ ಮಾತನಾಡಿ, ಗುರುಗಳೆಂಬ ಪವಿತ್ರ ಭಾವನೆಯಿಂದ ಸನ್ಮಾನಿಸಿ ಗುರುವಂದನೆ ಸಲ್ಲಿಸುವ ಹಳೆಯ ವಿದ್ಯಾರ್ಥಿಗಳ ಸಂಪ್ರದಾಯ ಉತ್ತಮವಾದುದು.ಮನುಷ್ಯರಾಗಿ ಜನಿಸಿದ್ದಕ್ಕೆ ದೇವರ ಋಣ ತೀರಿಸಬೇಕು.ಆದರೆ, ತಂದೆ-ತಾಯಿ ಹಾಗೂ ಗುರು ಋಣ ತೀರಿಸಲು ಸಾಧ್ಯವಿಲ್ಲವಾದರೂ ಮೂವರನ್ನು ಸದಾ ಗೌರವಿಸಬೇಕು ಎಂದು ಕರೆ ನೀಡಿದರು. ಸನ್ಮಾನಿತರಾಗಿ ಗುರುವಂದನೆ ಸ್ವೀಕರಿಸಿದ ಶಿಕ್ಷಕರಾದ ಎಸ್.ಪಿ. ರಾಜ್, ಜಿ.ಬಿ. ನಾಗಪ್ಪ, ಕೆ.ಎಂ. ನಾಗರಾಜ್, ಪಿ. ನರಸಿಂಮೂರ್ತಿ, ಪುಟ್ಟಸ್ವಾಮಿ, ಸಿ.ಆರ್. ಗೋಪಾಲ್, ಡಿ. ಶ್ರೀನಿವಾಸ್ ಮೂರ್ತಿ, ಶ.ಗ. ನಯನತಾರ, ದಾಕ್ಷಾಯಿಣಿ, ಮಮತಾ, ಹೆಚ್.ಎನ್. ಮಂಗಳಾ, ಎಸ್.ಈ. ಧರ್ಮಪ್ಪ ತಮ್ಮ ಅನುಭವಗಳ ಕುರಿತು ಮಾತನಾಡಿ, ಹಿತನುಡಿಗಳನ್ನಾಡಿದರು.
ಹಳೆಯ ವಿದ್ಯಾರ್ಥಿಗಳಾದ ಜಗದೀಶ್ ಪಟೇಲ್, ಷಂಶುದ್ದೀನ್, ಉದಯ್, ಪ್ರೀತಿ, ಅನಿಸಿಕೆ ಹಂಚಿಕೊAಡರು. ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಪಿ. ನರಸಿಂಹ ಮೂರ್ತಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ತಾರತಮ್ಯವಿಲ್ಲದೆ ಸಮಾನತೆಯ ಭಾವದಿಂದ ಬೆಳೆದು ಬಂದ ವಿದ್ಯಾರ್ಥಿಗಳು ಪ್ರಸ್ತುತ ಸಮಾಜದಲ್ಲಿ ಉತ್ತಮ ನಾಗರಿಕರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಉದಯಕುಮಾರ್ ಸ್ವಾಗತಿಸಿದರು. ಲೀಲಾವತಿ ನಿರೂಪಿಸಿದರು. ತೀರ್ಥಾನಂದ್ ವಂದಿಸಿದರು. ಮನೋರಂಜನಾ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಳೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಂಜಿಸಿದರು. ವಿದ್ಯಾಸಂಸ್ಥೆಯ ಕೊಠಡಿಗಳಿಗೆ ಹಾಗೂ ಹೊರಗಿನ ಗೋಡೆಗಳಿಗೆ ಸುಣ್ಣ-ಬಣ್ಣ ಮಾಡಿಸುವ ಮೂಲಕ ಹಳೇ ವಿದ್ಯಾರ್ಥಿಗಳು ಕಲಿತ ಶಾಲೆಗೆ ಕೊಡುಗೆ ಸಲ್ಲಿಸಿದರು.ಕೂಡಿಗೆ: ಕೂಡಿಗೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಮುಂಬಡ್ತಿ ಹೊಂದಿದ ಎಂ. ಕೃಷ್ಣಪ್ಪ, ಸಂಸ್ಥೆಯಲ್ಲಿ ಉಪನ್ಯಾಸಕ ಹುದ್ದೆಯಿಂದ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಹುದ್ದೆಗೆ ನಿಯುಕ್ತಿಗೊಂಡ ಸಿದ್ದೇಶ್ ಕುಮಾರ್ ಹಾಗೂ ಸಂಸ್ಥೆಯಲ್ಲಿ ಪ್ರಥಮ ದರ್ಜೆ ಸಹಾಯಕ ಹುದ್ದೆಯಿಂದ ಸೋಮವಾರಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧೀಕ್ಷಕ ಹುದ್ದೆಗೆ ಮುಂಬಡ್ತಿ ಹೊಂದಿದ ಸುಮ ಅವರಿಗೆ ಡಯಟ್ ಸಂಸ್ಥೆಯ ವತಿಯಿಂದ ಬೀಳ್ಕೊಡಲಾಯಿತು.
ಸನ್ಮಾನಿತರನ್ನು ಸನ್ಮಾನಿಸಿ ಮಾತನಾಡಿದ ಡಯಟ್ ಸಂಸ್ಥೆಯ ಉಪ ನಿರ್ದೇಶಕ (ಅಭಿವೃದ್ಧಿ) ಪ್ರಾಂಶುಪಾಲ ಎಂ. ಚಂದ್ರಕಾAತ್, ಸಂಸ್ಥೆಯಲ್ಲಿ ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ ಕೃಷ್ಣಪ್ಪ, ಸಿದ್ದೇಶ್ ಕುಮಾರ್ ಮತ್ತು ಸುಮ ವಿದ್ಯಾರ್ಥಿ ವೃಂದ ಹಾಗೂ ಸಿಬ್ಬಂದಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಜತೆಗೆ ಶಿಕ್ಷಕರ ತರಬೇತಿ ಕಾರ್ಯಗಳು ಸೇರಿದಂತೆ ಸಂಸ್ಥೆಯ ಏಳಿಗೆಗೆ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದರು.
ಬಿಇಓ ಎಂ. ಕೃಷ್ಣಪ್ಪ ಹಾಗೂ ಅಕ್ಷರ ದಾಸೋಹ ಯೋಜನೆಯ ಅಧಿಕಾರಿ ಸಿದ್ದೇಶ್ ಕುಮಾರ್, ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಪ್ರಾಂಶುಪಾಲ ಚಂದ್ರಕಾAತ್ ಹೇಳಿದರು.
ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಹೇಮಂತ್ ರಾಜ್, ಸ್ವಾಮಿ, ಬಿ.ಎನ್. ಪುಷ್ಪ, ಮಡಿಕೇರಿ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಉಪನ್ಯಾಸಕರಾದ ವಿ. ವಿಜಯ್, ಕೆ.ಎಸ್. ನಳಿನಾಕ್ಷಿ, ಗಾಯತ್ರಿ, ಗೀತಾ, ಲತಾ, ಕಚೇರಿಯ ಅಧೀಕ್ಷಕಿ ಜಯಂತಿ, ತಾಂತ್ರಿಕ ಸಹಾಯಕ ಹರೀಶ್ ಚಾಮರಾಯನಕೋಟೆ, ಪ್ರಾಥಮಿಕ ಶಾಲಾ ಶಿಕ್ಷಕ ಗೋವಿಂದರಾಜ್, ಸಂಸ್ಥೆಯ ಪ್ರಶಿಕ್ಷಣಾರ್ಥಿಗಳು ಇದ್ದರು.ಮುಳ್ಳೂರು: ಸಮೀಪದ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕ ಮತ್ತು ಕೊಡಗು ವಿಶ್ವ ವಿದ್ಯಾನಿಲಯ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಶೀರ್ಷಿಕಡಿಯಲ್ಲಿ ವಾರ್ಷಿಕ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ವಿವಿ.ಯ ಕುಲಪತಿ ಪ್ರೋ ಅಶೋಕ ಸಂಗಪ್ಪ ಆಲೂರ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಸೇರಿದಂತೆ ಆಸಕ್ತಿಯ ಜೊತೆಯಲ್ಲಿ ಸಂಶೋಧನಾತ್ಮಕ ಗುಣಗಳನ್ನು ಬೆಳೆಸಿಕೊಳ್ಳಬೇಕು. ಕೌಶಲ್ಯ ಚತುರತೆ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕೊಡಗು ವಿವಿ.ಯ ಕುಲಸಚಿವ ಡಾ. ಎಂ. ಸುರೇಶ್, ಚಾಮರಾಜನಗರ ವಿವಿ.ಯ ಕುಲಪತಿ ಎಂ.ಆರ್. ಗಾಂಗಾಧರ್ ಮಾತನಾಡಿದರು. ಕಾರ್ಯಕ್ರಮವನ್ನು ಕೊಡ್ಲಿಪೇಟೆ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಪರಮೇಶ್ ಉದ್ಘಾಟಿಸಿ ಮಾತನಾಡಿದರು. ವೇದಿಕೆಯಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆ ನಿರ್ದೇಶಕರಾದ ಬಿ.ಕೆ. ಯತೀಶ್, ಯು.ವಿ. ಶಿವಪ್ರಸಾದ್, ಕೊಡಗು ವಿವಿ ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ಗುಣಶ್ರೀ, ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್, ರಾಷ್ಟಿçÃಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಯೋಗೇಂದ್ರ, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.ಆಲೂರು-ಸಿದ್ದಾಪುರ: ಕೊಡಗು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ಆಲೂರು-ಸಿದ್ದಾಪುರ ಪ್ರೌಢಶಾಲಾ ಮುಖ್ಯ ಶಿಕ್ಷಕ ಸಿ.ಟಿ. ಸೋಮಶೇಖರ್ ವಯೋನಿವೃತ್ತಿ ಹೊಂದಿರುವ ಪ್ರಯುಕ್ತ ಆಲೂರು-ಸಿದ್ದಾಪುರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾ ಶಿಕ್ಷಕರ ಸಂಘ ಹಾಗೂ ಸೋಮಶೇಖರ್ ಅಭಿಮಾನಿ ಬಳಗ ಮತ್ತು ಆಲೂರು-ಸಿದ್ದಾಪುರ ಪ್ರೌಢಶಾಲಾ ವತಿಯಿಂದ ಬೀಳ್ಕೊಡುಗೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ, ಸೋಮಶೇಖರ್, ಶಿಕ್ಷಕರನ್ನು ಒಟ್ಟುಗೂಡಿಸಿ ಕೆಲಸ ಮಾಡುತ್ತಿದ್ದರು. ಜಿಲ್ಲಾ ಅಧ್ಯಕ್ಷರಾಗಿ ಕೆಲಸ ಮಾಡುವುದು ಸುಲಭದ ಕೆಲಸವಲ್ಲ. ಅದನ್ನು ಉತ್ತಮ ರೀತಿಯಲ್ಲಿ ಮಾಡಿದ್ದಾರೆ. ನಮ್ಮ ಇಲಾಖೆ ನೀಡುವ ಕೆಲಸವನ್ನು ಯಾವುದೇ ಯೋಚನೆ ಮಾಡದೇ ನಿರ್ವಹಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.
ಕೊಡಗು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಕುಮಾರ್ ಮಾತನಾಡಿ, ಶಿಕ್ಷಕರ ಪರವಾಗಿ ಅನೇಕ ಹೋರಾಟ ಮಾಡಿದ ವ್ಯಕ್ತಿ ಸೋಮಶೇಖರ್, ಕೊಡಗಿನಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಮಡಿಕೇರಿಯಲ್ಲಿ ನಡೆದಾಗ ಅನೇಕ ಗಣ್ಯರನ್ನು ಒಟ್ಟುಗೂಡಿಸಿ ಕಾರ್ಯಕ್ರಮ ಯಶಸ್ಸಿಗೆ ಕಾರಣಕರ್ತರಾದರು ಎಂದರು.
ನಿಕಟಪೂರ್ವ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಕೇಂದ್ರ ಸಂಘಕ್ಕೆ ಅನೇಕ ರೀತಿಯ ಸಹಕಾರ ನೀಡಿದವರು ಸೋಮಶೇಖರ್. ಉತ್ತಮ ಸಂಘಟಕರಾಗಿದ್ದು, ಎಲ್ಲಾ ಸವಾಲುಗಳನ್ನು ಎದುರಿಸಿ ಮುನ್ನುಗ್ಗಿದ್ದರು ಎಂದರು.
ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ದೇವರಾಜ್ ಗೌಡ ಮಾತನಾಡಿ, ಉತ್ತಮ ಜನಮನ್ನಣೆಗಳಿಸಿದ ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್, ನಿವೃತ್ತಿ ನಂತರವು ತಮ್ಮನ್ನು ತಾವು ಬೇರೆ ಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿ ಎಂದರು.
ಹಾಸನ ಜಿಲ್ಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಜಿಲ್ಲಾ ಅಧ್ಯಕ್ಷ ಪಿಲಿಪಾಸ್, ಕೂಡಿಗೆ ಡಯಟ್ ಹಿರಿಯ ಉಪನ್ಯಾಸಕಿ ಪುಷ್ಪ, ಕನ್ನಡ ಸಿರಿ ಬಳಗದ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್, ಮಂಡ್ಯ ತಾಲೂಕು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಮಾತನಾಡಿದರು.ಕಣಿವೆ: ತಾವು ಕಲಿತ ವಿದ್ಯಾಸಂಸ್ಥೆಗೆ ಯಾವತ್ತೂ ಕೃತಜ್ಞರಾಗುವ ಮೂಲಕ ಸಂಸ್ಥೆಯ ಪ್ರಗತಿಗೆ ಕಂಕಣ ಬದ್ಧರಾಗಬೇಕೆಂದು ಕುಶಾಲನಗರದ ಹಿರಿಯ ನಾಗರಿಕರಾದ ವಿ.ಎನ್. ವಸಂತಕುಮಾರ್ ಹಳೆಯ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಕುಶಾಲನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ‘ನೆನಪು’ ಎಂಬ ಹಳೆಯ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜಿನಲ್ಲಿ ಕಲಿತ, ಆಡಿ ನಲಿದ ನೆನಪುಗಳು ಯಾವತ್ತಿಗೂ ಚಿರಸ್ಮರಣೀಯ.
ಕಾಲೇಜಿನಲ್ಲಿ ಕಲಿತು ಇಂದು ಉತ್ತಮ ಭವಿಷ್ಯ ಕಟ್ಟಿಕೊಂಡಿರುವ ಹಳೆಯ ವಿದ್ಯಾರ್ಥಿಗಳು ತಮ್ಮ ಸಂಪಾದನೆಯ ಒಂದು ಭಾಗವನ್ನು ಸಮಾಜ ಸೇವೆಗೆ ತಾವು ಕಲಿತ ವಿದ್ಯಾದೇಗುಲಕ್ಕೆ ಮರಳಿಸಿದರೆ ಅದರಷ್ಟು ಪುಣ್ಯದ ಕಾರ್ಯ ಬೇರಾವುದೂ ಇಲ್ಲ ಎಂದು ಹೇಳಿದರು.
ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ನಿವೃತ್ತ ಆಡಳಿತಾಧಿಕಾರಿ ಹೆಚ್.ವಿ. ಶಿವಪ್ಪ ಮಾತನಾಡಿ, ಕಾಲೇಜು ಆರಂಭವಾದ ಹೊಸತರಲ್ಲಿ ಸಂಸ್ಥೆಯ ಅಭಿವೃದ್ಧಿಗೆ ತಾವು ದುಡಿದ ಸೇವೆಯನ್ನು ಸ್ಮರಿಸಿದರು. ಕಾಲೇಜಿನ ಹಿರಿಯ ಉಪನ್ಯಾಸಕ ಡಾ. ಸತೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ೨೦೦೭-೦೮ ರ ಸಾಲಿನಲ್ಲಿ ಆರಂಭವಾದ ಕಾಲೇಜು ಇಂದು ೧೮ನೇ ವರ್ಷಕ್ಕೆ ಪದಾರ್ಪಣೆಗೊಂಡಿದ್ದು, ಇಂದು ಹಳೆಯ ವಿದ್ಯಾರ್ಥಿಗಳು ಸೇರಿ "ನೆನಪು" ಎಂಬ ಸಂಘವನ್ನು ಆರಂಭಿಸಿರುವುದು ಸಂತಸದ ಸಂಗತಿ ಎಂದರು.
ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಹಳೆಯ ವಿದ್ಯಾರ್ಥಿಗಳನ್ನು ನಿರಂತರವಾಗಿ ಸಂಪರ್ಕಿಸಿ ಈಗ ಸಂಘವನ್ನು ರಚಿಸಿ ಪದಾಧಿಕಾರಿಗಳನ್ನು ನೇಮಿಸಲಾಗಿದೆ. ಇದೀಗ ೩,೦೦೦ ವಿದ್ಯಾರ್ಥಿಗಳು ಹೊರಹೋಗಿದ್ದು ತಮ್ಮ ಭವಿಷ್ಯವನ್ನು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು.
‘ನೆನಪು’ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಕಾಲೇಜಿನಲ್ಲಿ ಕಲಿತ ನಾವುಗಳು ಒಂದು ಶಿಸ್ತುಬದ್ಧವಾದ ತಂಡವನ್ನು ಮಾಡಿಕೊಂಡು ಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ತಾಂತ್ರಿಕ ಪ್ರಗತಿಗೆ ಅವಶ್ಯವಿರುವ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸುವ ಚಿಂತನೆ ಹೊಂದಿದ್ದೇವೆ ಎಂದರು.
ಕಾಲೇಜು ಪ್ರಾಂಶುಪಾಲ ಡಾ. ಪರಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಹಿಂದಿನ ಪ್ರಾಂಶುಪಾಲ ಡಾ. ವೆಂಕಟೇಶ್, ಹಿರಿಯ ಪ್ರಾಧ್ಯಾಪಕರಾದ ಡಾ. ಸೀನಪ್ಪಾ, ಡಾ. ರಂಗನಾಥ್, ವಿದ್ಯಾರ್ಥಿ ಸಂಘದ ಸಂಯೋಜಕ ರಾದ ಡಾ. ಮಾರುತಿ, ಡಾ. ಶ್ರೀನಿವಾಸ್, ಚಾಮರಾಜನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರೊ. ಶ್ರೀನಿವಾಸ್, ನೆನಪು ಹಳೆಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪೃಥ್ವಿರಾಜ್, ಖಜಾಂಚಿ ಸಿನಾನ್, ಸುಖೇಶ್, ಅರ್ಬಾಜ್, ವಿನಯಪ್ರಸಾದ್, ದರ್ಶನ್, ಸಂದೇಶ್, ಪ್ರಿಯ ದಿನೇಶ್, ವಿದ್ಯಾರ್ಥಿನಿ ಯೋಗಿತಾ ಪ್ರಾರ್ಥಿಸಿದರು. ಕಾಲೇಜಿನ ಸಿಬ್ಬಂದಿ ರೂಪ ನಿರೂಪಿಸಿದರು. ಉಪನ್ಯಾಸಕಿ ಪವಿತ್ರ ಸ್ವಾಗತಿಸಿದರು.ಮಡಿಕೇರಿ: ಹವಾಮಾನದ ವೈಪರಿತ್ಯ ಮತ್ತು ಆರೋಗ್ಯದ ಪರಿಸ್ಥಿತಿ ನಿಭಾಯಿಸಲು ವೈದ್ಯಕೀಯ ಕಾಲೇಜುಗಳ ಪಾತ್ರ ಮಹತ್ವದ್ದು ಎಂದು ಆರೋಗ್ಯ ಮತ್ತು ಕುಟುಂಬಗಳ ಕಲ್ಯಾಣ ಇಲಾಖೆಯ ಜನರಲ್ ಡೈರೆಕ್ಟರ್ ಡಾ. ರವಿಕುಮಾರ್ ಹೇಳಿದರು.
ಜಿಮ್ಸ್ ಕಲುಬುರ್ಗಿ ಯುನಿಸೆವಾ ಹಾಗೂ ಎನ್ಹೆಚ್ಎಮ್ ಸಹಾಯೋಗದೊಂದಿಗೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸಮುದಾಯ ವೈದ್ಯಶಾಸ್ತç ವಿಭಾಗದ ವತಿಯಿಂದ ನಡೆದ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಷಯದ ಬಗ್ಗೆ ದಕ್ಷಿಣ ಕರ್ನಾಟಕದ ವಿವಿಧ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಿಬ್ಬಂದಿಗಳಿಗೆ ಎರಡು ದಿನಗಳ ತರಬೇತಿ ನಡೆಯಿತು. ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹವಾಮಾನ ಬದಲಾವಣೆಯಿಂದ ಮಾನವನ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಸಮುದಾಯ ವೈದ್ಯಶಾಸ್ತç ವಿಭಾಗದ ಮುಖ್ಯಸ್ಥರು ಹಾಗೂ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ರಾಮಚಂದ್ರ ಕಾಮತ್ ಮಾತನಾಡಿ, ದುಷ್ಪಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು ಮಾತನಾಡಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಭಾಗ್ಯವತಿ ಎಲ್ಲರ ಸಹಕಾರ ಪಡೆದು ಅಂಗನವಾಡಿ ಕೇಂದ್ರವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ರಿಣಾಮಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ವೈದ್ಯಕೀಯ ಸಂಸ್ಥೆಗಳ ಸುಮಾರು ೩೦ ಸಿಬ್ಬಂದಿಗಳು ಹಾಜರಿದ್ದು, ತರಬೇತಿಯ ಸದುಪಯೋಗವನ್ನು ಪಡೆದುಕೊಂಡರು.ನಾಪೋಕ್ಲು: ಇಲ್ಲಿನ ಭಗವತಿ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಲ್ಲಮಾವಟ್ಟಿ ವೃತ್ತದ ಹಳೆ ತಾಲೂಕು ಅಂಗನವಾಡಿ ಕೇಂದ್ರದ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ ಹಾಗೂ ವಾರ್ಷಿಕೋತ್ಸವ ನಡೆಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ನಿವೃತ್ತ ಪ್ರೊ. ಪೂಣಚ್ಚ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆ ನಡೆಯಿತು. ಈ ಸಂದರ್ಭ ಸಮಾಜಸೇವಕಿ ಬಾಳೆಯಡ ದಿವ್ಯ ಮಂದಪ್ಪ, ಜಾನಪದ ಕಲಾವಿದೆ ಬೊಪ್ಪಂಡ ಬೊಳ್ಳಮ್ಮ, ಬೊಪ್ಪಂಡ ಯೋಶಧ ಅವರನ್ನು ಸನ್ಮಾನಿಸಲಾಯಿತು. ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯುವರಾಜ್, ಮೇಪಡಂಡ ಸವಿತಾ ಕೀರ್ತನ್, ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸೇರಿದಂತೆ ಇನ್ನಿತರರು ಹಾಜರಿದ್ದರು.ಐಗೂರು: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜೂರು ಸರ್ಕಾರದ ಪುಷ್ಟಿ ಯೋಜನೆಯಲ್ಲಿ ಪ್ರಗತಿ ಸಾಧಿಸಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಅತ್ಯುತ್ತಮ ಎಸ್ಡಿಎಂಸಿಗಳ ಸಾಲಿನಲ್ಲಿ ಒಂದಾಗಿ ರಾಜ್ಯದಲ್ಲಿ ಗುರುತಿಸಿಕೊಂಡಿದೆ.
ಪ್ರಶಸ್ತಿಯ ರೂಪದಲ್ಲಿ ನಗದು ರೂ. ೧ ಲಕ್ಷ ಮೊತ್ತದ ಹಣವನ್ನು ಪಡೆದುಕೊಂಡು ಶಿಕ್ಷಣ ಇಲಾಖೆಯ ಪ್ರಶಂಸೆಗೆ ಪಾತ್ರವಾಗಿದೆ. ಬಹುಮಾನದ ಮೊತ್ತವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಮೂಲಭೂತ ಸೌಕರ್ಯಕ್ಕೆ ಬಳಸಿಕೊಳ್ಳಬೇಕೆಂಬ ಇಲಾಖೆಯ ನಿರ್ದೇಶನದಂತೆ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಇ-ಕಲಿಕೆಗೆ ಸದುಪಯೋಗ ಪಡಿಸಲಾಗಿದೆ. ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ಆಶಾ ಚಂಗಪ್ಪ ಮತ್ತು ಸದಸ್ಯರ ಕಾಳಜಿ, ಮುಖ್ಯ ಶಿಕ್ಷಕಿ ಎಂ.ಟಿ. ಸರಳಕುಮಾರಿ, ಅಧ್ಯಾಪಕ ವೃಂದ ಮತ್ತು ಸಿಆರ್ಪಿಯ ಸಾಧನೆ, ಆಂಗ್ಲ ಮಾಧ್ಯಮದ ತರಗತಿಗಳ ಯಶಸ್ಸು, ರಾಜ್ಯಮಟ್ಟದಲ್ಲಿ ಶಾಲೆ ಗುರುತಿಸಿಕೊಳ್ಳುವಲ್ಲಿ ಸಫಲವಾಗಿದೆ. ಪಡಿಸಲಾಗಿದೆ. ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷೆ ಆಶಾ ಚಂಗಪ್ಪ ಮತ್ತು ಸದಸ್ಯರ ಕಾಳಜಿ, ಮುಖ್ಯ ಶಿಕ್ಷಕಿ ಎಂ.ಟಿ. ಸರಳಕುಮಾರಿ, ಅಧ್ಯಾಪಕ ವೃಂದ ಮತ್ತು ಸಿಆರ್ಪಿಯ ಸಾಧನೆ, ಆಂಗ್ಲ ಮಾಧ್ಯಮದ ತರಗತಿಗಳ ಯಶಸ್ಸು, ರಾಜ್ಯಮಟ್ಟದಲ್ಲಿ ಶಾಲೆ ಗುರುತಿಸಿಕೊಳ್ಳುವಲ್ಲಿ ಸಫಲವಾಗಿದೆ.