ಜಿ. ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ
ತುಮಕೂರು, ಮೇ ೨೧: ಗೃಹ ಸಚಿವ ಜಿ. ಪರಮೇಶ್ವರ್ ಒಡೆತನದ ನಗರದ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ, ಸಿದ್ಧಾರ್ಥ ಇಂಜಿನಿಯರಿAಗ್ ಕಾಲೇಜು, ಸಿದ್ಧಾರ್ಥ ನಗರದಲ್ಲಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಕಚೇರಿ ಹಾಗೂ ನೆಲಮಂಗಲದ ಟಿ. ಬೇಗೂರು ಬಳಿಯ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮೇಲೆ ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂರು ಕಡೆ ಮೂರು ಪ್ರತ್ಯೇಕ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ೩೦ಕ್ಕೂ ಹೆಚ್ಚು ಅಧಿಕಾರಿಗಳು ದಾಖಲೆ ಪರಿಶೀಲನೆ ಯಲ್ಲಿ ತೊಡಗಿಸಿಕೊಂಡಿದ್ದಾರೆ. ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಚಿನ್ನ ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿರುವ ರನ್ಯಾರಾವ್ ಪ್ರಕರಣ ಹಾಗೂ ಇತ್ತೀಚೆಗೆ ಪರಮೇಶ್ವರ ಅವರು ಖರೀದಿಸಿರುವ ಹೆಚ್ ಎಂಎಸ್ ಇಂಜಿನಿಯರಿAಗ್ ಕಾಲೇಜಿಗೆ ಸಂಬAಧಿಸಿದAತೆ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.
ಗುಂಡಿನ ಚಕಮಕಿಯಲ್ಲಿ ೨೬ ನಕ್ಸಲರು ಹತ
ಛತ್ತೀಸ್ಗಢ, ಮೇ ೨೧: ಇಲ್ಲಿನ ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಟ ೨೬ ನಕ್ಸಲರು ಮೃತಪಟ್ಟಿದ್ದಾರೆ. ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಪೊಲೀಸರಿಗೆ ಗಾಯವಾಗಿದೆ. ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಕ್ಸಲರ ಅಡಗುತಾಣವನ್ನು ಸಮೀಪಿಸುತ್ತಿದ್ದಂತೆ ಮನಬಂದAತೆ ಗುಂಡು ಹಾರಿಸಲು ನಕ್ಸಲರು ಆರಂಭಿಸಿದರು. ಪ್ರತೀಕಾರದ ಕ್ರಮದಲ್ಲಿ, ೨೬ಕ್ಕೂ ಹೆಚ್ಚು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಸ್ಥಳದಿಂದ ಶಸ್ತಾçಸ್ತçಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಆಪರೇಷನ್ ಸಿಂಧೂರ' ಕುರಿತು ಅವಹೇಳನ - ಅಲಿಖಾನ್ಗೆ ಜಾಮೀನು
ನವದೆಹಲಿ, ಮೇ ೨೧: ‘ಆಪರೇಷನ್ ಸಿಂಧೂರ' ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ಅಲಿ ಖಾನ್ ಮಹಮೂದಾಬಾದ್ ಅವರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊAಡಿದ್ದ ತನಿಖೆಯ ವಿಷಯವಾದ ಎರಡೂ ಪೋಸ್ಟ್ಗಳಿಗೆ ಸಂಬAಧಿಸಿ ಯಾವುದೇ ಲೇಖನವನ್ನು ಬರೆಯಬಾರದು ಅಥವಾ ಭಾಷಣ ಗಳನ್ನು ಮಾಡಬಾರದು ಎಂದು ಅಲಿ ಖಾನ್ಗೆ ಸುಪ್ರೀಂಕೋರ್ಟ್ ತಾಕೀತು ಮಾಡಿದೆ. ಅಲಿ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು ವಿಚಾರಣೆ ನಡೆಸಿತು.
ರಾಜ್ಯದ ೪ ಆನೆಗಳು ಆಂಧ್ರಪ್ರದೇಶಕ್ಕೆ ಹಸ್ತಾಂತರ
ಬೆAಗಳೂರು, ಮೇ ೨೧: ನೆರೆಯ ರಾಜ್ಯ ಆಂಧ್ರಪ್ರದೇಶಕ್ಕೆ ರಾಜ್ಯದಿಂದ ನಾಲ್ಕು ಕುಮ್ಕಿ ಆನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹಸ್ತಾಂತರಿಸಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರ ಮಾಡಿದರು. ಈ ವೇಳೆ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. ೩,೬೯೫ ಆನೆಗಳು ನಮ್ಮಲ್ಲಿವೆ. ಮಾನವ - ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ. ಮಾನವ - ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.
ಪೂಜಾ ಖೇಡ್ಕರ್ಗೆ ನಿರೀಕ್ಷಣಾ ಜಾಮೀನು
ನವದೆಹಲಿ, ಮೇ ೨೧: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ. ಜಾಮೀನು ಮಂಜೂರು ಮಾಡಿದ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸತೀಶ ಚಂದ್ರ ಅವರಿದ್ದ ಪೀಠ, ತನಿಖೆಗೆ ಸಹಕರಿಸುವಂತೆ ಖೇಡ್ಕರ್ ಅವರಿಗೆ ಸೂಚಿಸಿದೆ. ಅವರು ಮಾಡಿದ ಘೋರ ಅಪರಾಧವೇನು? ಅವರು ಡ್ರಗ್ಸ್ ಮಾರಾಟಗಾರ್ತಿಯೇ? ಅಥವಾ ಭಯೋತ್ಪಾದಕಿಯೇ, ಅವರು ಕೊಲೆ ಮಾಡಿಲ್ಲ, ಎನ್ಡಿಪಿಎಸ್ ಕಾಯ್ದೆಯಡಿ ಅವರ ಬಂಧನವಾಗಿಲ್ಲ, ನೀವು ತನಿಖೆ ಪೂರ್ಣಗೊಳಿಸಿ. ಎಲ್ಲವನ್ನು ಕಳೆದುಕೊಂಡಿರುವ ಆಕೆಗೆ ಎಲ್ಲಿಯೂ ಕೆಲಸ ಸಿಗುತ್ತಿಲ್ಲ ಎಂದು ಪೀಠವು ಹೇಳಿದೆ.
ಬಲೂಚಿಸ್ತಾನ : ಶಾಲಾ ವಾಹನದ ಮೇಲೆ ಆತ್ಮಾಹುತಿ ದಾಳಿ
ಇಸ್ಲಾಮಾಬಾದ್, ಮೇ ೨೧: ಬಲೂಚಿಸ್ತಾನ ಪ್ರಾಂತ್ಯದ ಖುಜ್ಜಾರ್ ಜಿಲ್ಲೆಯಲ್ಲಿ ಶಾಲಾ ವಾಹನದ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ೩ ಮಕ್ಕಳು ಸೇರಿದಂತೆ ೫ ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆಯು ಬುಧವಾರ ಜರುಗಿದೆ ಎಂದು ಪಾಕಿಸ್ತಾನ ಸೇನಾ ವಕ್ತಾರರು ತಿಳಿಸಿದ್ದಾರೆ. ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ೩೮ ಜನರಿಗೆ ಗಂಭೀರ ಗಾಯವಾಗಿದೆ. ಇದು ಹೇಡಿತನ ಹಾಗೂ ಭಯಾನಕ ದಾಳಿಯಾಗಿದೆ ಎಂದರು. ವಾಹನದ ಮೂಲಕ ಸಾಗಿಸಬಹುದಾದ ಸುಧಾರಿತ ಸ್ಫೋಟಕ ಸಾಧನ (ವಿಬಿಐಇಡಿ)ವನ್ನು ಘಟನೆಯಲ್ಲಿ ಬಳಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. ಘಟನೆಯನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಖಂಡಿಸಿದ್ದು, ಅಮಾಯಕ ಮಕ್ಕಳು ಹಾಗೂ ಶಿಕ್ಷಕರ ಮೇಲಿನ ದಾಳಿಯು ನೋವುಂಟು ಮಾಡಿದೆ. ಘಟನೆಗೆ ಕಾರಣವಾದವರನ್ನು ಬಂಧಿಸಿ, ಸಂತ್ರಸ್ತರಿಗೆ ನ್ಯಾಯ ಕೊಡಿಸುವುದಾಗಿ ತಿಳಿಸಿದ್ದಾರೆ. ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಕೂಡ ದಾಳಿಯ ಹೊಣೆ ಹೊತ್ತಿಲ್ಲ.
ಪಾಕ್ ಸಂಪರ್ಕ ಕುರಿತು ಬಾಯ್ಬಿಟ್ಟ ಜ್ಯೋತಿ ಮಲ್ಲೋತ್ರಾ
ನವದೆಹಲಿ, ಮೇ ೨೧: ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತರಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಲೋತ್ರಾಗೆ ಪಾಕಿಸ್ತಾನದ ಜೊತೆ ಲಿಂಕ್ ಇರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಪಾಕಿಸ್ತಾನದಲ್ಲಿಯೂ ಹಲವು ಗೆಳೆಯರನ್ನು ಹೊಂದಿರುವ ಬಗ್ಗೆ ಇದಾಗಲೇ ಆರಂಭಿಕ ತನಿಖೆಯಿಂದಲೂ ತಿಳಿದುಬಂದಿದೆ. ಕಳೆದ ವರ್ಷ ದೆಹಲಿಯ ಪಾಕಿಸ್ತಾನ ಹೈಕಮಿಷನ್ನಲ್ಲಿ ಇಫ್ತಾರ್ ಔತಣಕೂಟದಲ್ಲಿ ಈಕೆ ಭಾಗವಹಿಸಿದ್ದ ವಿಚಾರವೂ ಇದೀಗ ಬೆಳಕಿಗೆ ಬಂದಿದೆ. ಇಫ್ತಾರ್ ಕೂಟದಲ್ಲಿನ ವ್ಯವಸ್ಥೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಈಕೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಮಾಡಿದ್ದಳು. ಇದೀಗ, ರಾಷ್ಟಿçÃಯ ತನಿಖಾ ದಳದ ವಶದಲ್ಲಿರುವ ಜ್ಯೋತಿ ತನಿಖೆಯ ಸಂದರ್ಭದಲ್ಲಿ ಹಲವು ವಿಷಯಗಳನ್ನು ಆಕೆ ಬಾಯ್ದಿಟ್ಟಿರುವುದಾಗಿ ವರದಿಯಾಗಿದೆ. ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ನ ಸಿಬ್ಬಂದಿಯೊAದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದಾಗಿ ಈಕೆ ಒಪ್ಪಿಕೊಂಡಿದ್ದಾಳೆ ಎಂದು ತನಿಖಾಧಿಕಾರಿಗಳು ದೃಢಪಡಿಸಿದ್ದಾರೆ. ಜ್ಯೋತಿ ಮಲ್ಲೋತ್ರಾ ವಿಚಾರಣೆಯ ಸಮಯದಲ್ಲಿ ಪಾಕಿಸ್ತಾನಿ ಪ್ರಜೆ ಮತ್ತು ಹೈಕಮಿಷನ್ನ ಅಧಿಕಾರಿ ಎಕ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಜೊತೆ ನವೆಂಬರ್ ೨೦೨೩ ರಿಂದ ಮಾರ್ಚ್ ೨೦೨೫ ರವರೆಗೆ ಸಂಪರ್ಕದಲ್ಲಿದ್ದಾಗಿ ಒಪ್ಪಿಕೊಂಡಿದ್ದಾಳೆ. ಇಷ್ಟೇ ಅಲ್ಲದೇ ಡ್ಯಾನಿಶ್, ಜ್ಯೋತಿಯನ್ನು ಪಾಕಿಸ್ತಾನದ ಪರ, ಭಾರತದ ವಿರುದ್ಧ ಗುಪ್ತಚರ ಆಸ್ತಿಯನ್ನಾಗಿ ಮಾಡಿಕೊಂಡಿದ್ದ. ಈ ನಿಟ್ಟಿನಲ್ಲಿ ಆಕೆ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಳು ಎಂದಿದ್ದಾರೆ ಅಧಿಕಾರಿಗಳು.