ಸೋಮವಾರಪೇಟೆ, ಮೇ ೨೩: ಪಟ್ಟಣ ಪಂಚಾಯಿತಿ ವತಿಯಿಂದ ತ್ಯಾಜ್ಯ ವಿಲೇವಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳ ನಿರ್ವಹಣೆಗೆ ಖರೀದಿಸಲಾದ ಜೆಸಿಬಿ ಯಂತ್ರಕ್ಕೆ ಶಾಸಕ ಡಾ. ಮಂತರ್ ಗೌಡ ಅವರು ಚಾಲನೆ ನೀಡಿದರು.

ಈ ಸಂದರ್ಭ ಪ.ಪಂ. ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್. ಮಹೇಶ್, ಸದಸ್ಯರಾದ ಮೃತ್ಯುಂಜಯ, ಶೀಲಾ ಡಿಸೋಜ, ಸಂಜೀವ, ವೆಂಕಟೇಶ್, ಪಿ.ಕೆ. ಚಂದ್ರು, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎ. ಆದಂ, ನಾಮನಿರ್ದೇಶಿತ ಸದಸ್ಯ ಡಿ.ಯು. ಕಿರಣ್, ವಿನಿ, ನಾಗರಾಜ್ ಸೇರಿದಂತೆ ಇತರರು ಇದ್ದರು.