ಸೋಮವಾರಪೇಟೆ, ಮೇ ೨೩: ಕೊಡಗು ಪತ್ರಕರ್ತರ ಸಂW ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ತಾ. ೨೫ರಂದು ಪತ್ರಿಕಾಭವನದಲ್ಲಿ ಸಂಜೆ ೪ ಗಂಟೆಗೆ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವನ್ನು ಹಿರಿಯ ವಕೀಲರು ಮತ್ತು ನೋಟರಿ ಈಶ್ವರಚಂದ್ರ ವಿದ್ಯಾಸಾಗರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್. ಹರೀಶ್‌ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಉದ್ಯಮಿ ಬಿ. ಸಂಜೀವ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್, ಬೆಂಗಳೂರಿನ ಉದ್ಯಮಿ ಗಿರೀಶ್ ಮಲ್ಲಪ್ಪ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಸದಸ್ಯರು ಹಾಗೂ ಕುಟುಂಬಸ್ಥರಿಗೆ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಧಾನ ಕಾರ್ಯದರ್ಶಿ ಡಿ.ಪಿ. ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.