ಬೆಂಗಳೂರು, ಮೇ ೨೪ : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು ಕೋವಿಡ್ ಬಂದಿದೆ ಎಂದು ಜನ ಆತಂಕಪಡುವ ಅಗತ್ಯವಿಲ್ಲ. ಆದರೆ, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗ ಸೂಚಿಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ. ಜ್ವರ, ಉಸಿರಾಟದ ಸಮಸ್ಯೆ ಸಂದರ್ಭ (SಂಖI) ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ ಎಂದು ಖಚಿತಪಡಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು ೩೫ ಜನರು ಕೋವಿಡ್ ಪಾಸಿಟಿವ್ ಬಂದಿದ್ದು, ಬೆಂಗಳೂರಿನಲ್ಲಿಯೇ ೩೨ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬAದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು ೨೫೭ ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್

(ಮೊದಲ ಪುಟದಿಂದ) ಹೊಂದಿದವರಿಗೆ ತುಸು ರೋಗ ಲಕ್ಷಣ ಇರುವುದು ಹೊರತು ಪಡಿಸಿ ಗಂಭೀರವಾದ ಸಮಸ್ಯೆಗಳು ಇದುವರೆಗೆ ಕಂಡುಬAದಿಲ್ಲ. ಜ್ವರ ಹಾಗೂ ಉಸಿರಾಟದ ತೊಂದರೆ (SಂಖI) ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬAಧಿ ಕಾಯಿಲೆ ಇರುವವರು ‘ಅಡ್ಮಿಟ್’ ಅಗಿರುವ ಆಸ್ಪತ್ರೆಗಳಲ್ಲಿ ‘ಸ್ಯಾಂಪಲ್ಸ್ ಕಲೆಕ್ಟ್’ ಮಾಡಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.