ಮಡಿಕೇರಿ, ಮೇ. ೨೪ : ಕೊಡಗು ಜಿಲ್ಲೆಯಲ್ಲಿ ತಾ. ೨೬ ರಿಂದ ೩೧ ರವರೆಗೆ ನಡೆಯುವ “೨೦೨೫ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨” ಅನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ರ ಕಲಂ ೧೬೩ ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಕುಶಾಲನಗರ, ಸೋಮವಾರಪೇಟೆ, ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದçಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪçದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದಾಗಿದೆ. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು ಅಥವಾ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್‌ರಾಜಾ ತಿಳಿಸಿದ್ದಾರೆ.