ಪೊನ್ನಂಪೇಟೆ, ಮೇ. ೨೪: ಕೊಡವಾಮೆ ಬಾಳೋ ಕಾರ್ಯಕ್ರಮದ ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟ್ಟೀರ ಪ್ರವೀಣ್ ಉತ್ತಪ್ಪ ಅವರನ್ನು ಚಮ್ಮಟ್ಟೀರ ಕುಟುಂಬದ ಐನ್ಮನೆಯಲ್ಲಿ ಸನ್ಮಾನಿಸಲಾಯಿತು.
ಕುಟುಂಬದ ಪಟ್ಟೆದಾರ ಡಿಕ್ಕಿ ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವೀಣ್ ಉತ್ತಪ್ಪ ಅವರನ್ನು ಸನ್ಮಾನಿಸುವುದರ ಜೊತೆಗೆ ೧೦ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಚಮ್ಮಟ್ಟೀರ ಮನಿಷ್ ಮುದ್ದಪ್ಪ, ಚಮ್ಮಟ್ಟೀರ ಡೆನ್ ದೇವಯ್ಯ, ಚಮ್ಮಟ್ಟೀರ ತರುಣ್ ತಿಮ್ಮಯ್ಯ ಅವರಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ಕಾರ್ಯಕ್ರಮ ದಲ್ಲಿ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.