ಕಡಂಗ, ಮೇ ೨೪: ಕಾಕೋಟುಪರಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಮುರೂರುವಿನಲ್ಲಿ ಧಾರಾಕಾರ ಗಾಳಿ ಸಹಿತ ಮಳೆಯಿಂದಾಗಿ ವಿದ್ಯುತ್ ತಂತಿಗೆ ಬಿದ್ದ ಮರವನ್ನು ತೆರವುಗೊಳಿಸಲಾಯಿತು.

ಈ ಸಂದರ್ಭ ಸ್ಥಳೀಯರಾದ ಶಫೀಕ್. ಬಿ.P.ೆ ಮುಸ್ತಫಾ ಮಹಮದ್ ಕುಂಜಿ, ಜಲೀಲ್, ಸಂತೋಷ್ ಕೈಜೋಡಿಸಿದರು. ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಪಟ್ಟು, ಕಡಂಗ, ಪೂದವಾಡ ಹಾಗೂ ಸುತ್ತಮುತ್ತಲಿನ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ವಿದ್ಯುತ್ ಇಲ್ಲದೆ ಗ್ರಾಮಸ್ಥರು ತೊಂದರೆಗೀಡಾಗಿದ್ದು, ಕೂಡಲೇ ಸಂಬAಧಪಟ್ಟ ಅಧಿಕಾರಿಗಳು ವಿದ್ಯುತ್ ಸಂಪರ್ಕ ಒದಗಿಸಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.