ಮಡಿಕೇರಿ, ಮೇ ೨೪: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ)-೨೦೧೩ ರ ಕಾಯ್ದೆಗೆ ಸಂಬAಧಿಸಿದAತೆ, ಸಂಪನ್ಮೂಲ ವ್ಯಕ್ತಿಗಳಾದ ಪಿಯಾಲಿ ಬೋಪಣ್ಣ ಅವರು ಗುರುವಾರ ವೀಡಿಯೋ ಸಂವಾದ ಮೂಲಕ ಮಾಹಿತಿ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಅನುಷ್ಠಾನ ಅಧಿಕಾರಿಗಳು, ಸ್ಥಳೀಯ ದೂರು ನಿವಾರಣಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಇತರರು ಪಾಲ್ಗೊಂಡಿದ್ದರು.