ಮಡಿಕೇರಿ, ಮೇ ೨೪: ಜಿಲ್ಲೆಯಲ್ಲಿ ಶುಂಠಿಯನ್ನು ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಹೆಚ್ಚಾಗಿ ಬೆಳೆಯ ಲಾಗುತ್ತಿದ್ದು, ಈ ಸಂಬAಧ ಕುಶಾಲನಗರ ಎಪಿಸಿಎಂಎಸ್ ಮತ್ತು ಸೋಮವಾರಪೇಟೆ ಎಪಿಸಿಎಂಎಸ್‌ಯಲ್ಲಿ ಹಸಿಶುಂಠಿ ಖರೀದಿ ಕೇಂದ್ರ ಆರಂಭಿಸಲಾಗಿದೆ.

ಪ್ರೂಟ್ಸ್ ಐಡಿ ಹೊಂದಿರುವ ರೈತರಿಂದ ಮಾತ್ರ ನೋಂದಣಿ ಮಾಡಿಸಿಕೊಂಡು ಗುಣಮಟ್ಟದ ಹಸಿಶುಂಠಿಯನ್ನು (ತೋಟಗಾರಿಕ ಪರಿಣಿತ ಅಧಿಕಾರಿಗಳಿಂದ ದೃಢೀಕರಿಸಿ) ಖರೀದಿ ಮಾಡಲಾಗುವುದು. ಪ್ರತಿ ಕ್ವಿಂಟಾಲ್‌ಗೆ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಗೆ ರೂ. ೨,೪೪೫ ಮಾರುಕಟ್ಟೆ ಬೆಲೆಯನ್ನು ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಹಂಪಣ್ಣ ತಿಳಿಸಿದ್ದಾರೆ.