ಕುಶಾಲನಗರ, ಮೇ ೨೫: ಕುಶಾಲನಗರ ಕನ್ನಿಕಾ ಇಂಟರ್ನ್ಯಾಷನಲ್ ಹೊಟೇಲ್ ಮಾಲೀಕರು ಹಾಗೂ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ ಆರ್ ನಾಗೇಂದ್ರ ಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಹೊಟೇಲ್ ಸಂಘದ ಆತಿಥ್ಯ ರತ್ನ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ.
ಬಿ.ಆರ್. ನಾಗೇಂದ್ರ ಪ್ರಸಾದ್ ಈ ಹಿಂದೆ ಕೊಡಗು ಹೊಟೇಲ್ ರೆಸಾರ್ಟ್ ಮತ್ತು ರೆಸ್ಟೋರೆಂಟ್ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ತಾ. ೨೯ರಂದು ಬೆಂಗಳೂರಿನ ಸರ್ ಎಂ.ವಿ. ಆಡಿಟೋರಿಯಂನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಘದ ರಾಜ್ಯ ಅಧ್ಯಕ್ಷರಾದ ಜಿ.ಕೆ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.