೧೮ ಶಾಸಕರ ಅಮಾನತು ಆದೇಶ ಹಿಂತೆಗೆತ

ಬೆAಗಳೂರು, ಮೇ ೨೫: ಬಿಜೆಪಿಯ ೧೮ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಭಾನುವಾರ ಹೇಳಿದ್ದಾರೆ. ೧೮ ಬಿಜೆಪಿ ಶಾಸಕರ ಅಮಾನತಿಗೆ ಸಂಬAಧಿಸಿದAತೆ ಇಂದು ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ ೧೮ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ. ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ೧೮ ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಸಂತೋಷದಿAದ ಶಾಸಕರ ಅಮಾನತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಎಲ್ಲರೂ ನಮ್ಮ ಮಿತ್ರರು. ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡೆ. ಕ್ರಮತೆಗೆದುಕೊಳ್ಳುವುದಕ್ಕೆ ನನಗೆ ಅಧಿಕಾರವಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ಶಿರಾಡಿ ಘಾಟ್ : ೨ ಕಡೆಗಳಲ್ಲಿ ಭೂಕುಸಿತ

ಹಾಸನ, ಮೇ ೨೫: ರಾಜ್ಯದಲ್ಲಿ ಈ ತಿಂಗಳು ಪೂರ್ವ ಮುಂಗಾರು ಮಳೆ ಧಾರಾಕಾರವಾಗಿ ಸುರಿದಿದೆ. ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಬೆಂಗಳೂರು-ಮAಗಳೂರು ರಾಷ್ಟಿçÃಯ ಹೆದ್ದಾರಿ ೭೫ರ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು-ಮAಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ದರೂ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ.

ರಾಜ್ಯಕ್ಕೆ ಅವಮಾನ ಮಾಡಿದ ಸಿಎಂ : ವಿಜಯೇಂದ್ರ ಆರೋಪ

ಮೈಸೂರು, ಮೇ ೨೫: ನೀತಿ ಆಯೋಗದ ಸಭೆಗೆ ಗೈರು ಹಾಜರಾಗುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯು ಸಭೆಗೆ ಗೈರು ಹಾಜರಾಗಿದ್ದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನೆರೆಯ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕೂಡ ಭಾಗವಹಿಸಿದ್ದರು. ಆದರೆ, ನಮ್ಮ ಮುಖ್ಯಮಂತ್ರಿ ಸಭೆಗೆ ಯಾಕೆ ಬಹಿಷ್ಕಾರ ಹಾಕಿದರು ಎಂಬುದನ್ನು ತಿಳಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗವಹಿಸುತ್ತಾರೆ. ಆದರೆ, ಪ್ರಧಾನ ಮಂತ್ರಿ ಕರೆದ ಸಭೆಗೆ ಗೈರು ಹಾಜರಾಗುತ್ತಾರೆ. ರಾಜಕಾರಣ ಮಾಡುವುದೇ ರಾಜ್ಯ ಸರ್ಕಾರದ ಆದ್ಯತೆಯಾಗಿದೆ. ಅಧಿಕಾರಕ್ಕೆ ಬಂದಾಗಿನಿAದಲೂ ಕೇಂದ್ರದ ಜೊತೆ ಸಂಘರ್ಷದ ಹಾದಿಯನ್ನು ಸಿದ್ದರಾಮಯ್ಯ ತುಳಿದಿದ್ದಾರೆ. ಪ್ರಮುಖ ಸಭೆಗೆ ಗೈರು ಹಾಜರಾಗುವುದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದರು.

ಮಹಾರಾಷ್ಟçಕ್ಕೆ ಕಾಲಿಟ್ಟ ಮುಂಗಾರು

ಮುAಬೈ, ಮೇ ೨೫: ನೈರುತ್ಯ ಮುಂಗಾರು ಭಾನುವಾರ ಮಹಾರಾಷ್ಟçಕ್ಕೆ ಕಾಲಿಟ್ಟಿದ್ದು, ಮುಂದಿನ ಮೂರು ದಿನಗಳಲ್ಲಿ ಮುಂಬೈ ಸೇರಿದಂತೆ ಕೆಲವು ಭಾಗಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದ ಕೆಲವು ಭಾಗಗಳು, ಕರ್ನಾಟಕ, ಸಂಪೂರ್ಣ ಗೋವಾ, ಮಹಾರಾಷ್ಟ್ರದ ಕೆಲವು ಭಾಗಗಳು, ಬಂಗಾಳಕೊಲ್ಲಿಯ ಉತ್ತರ ಭಾಗ ಮತ್ತು ಮಿಜೋರಾಂನ ಕೆಲವು ಭಾಗಗಳು, ಮಣಿಪುರ ಮತ್ತು ನಾಗಾಲ್ಯಾಂಡ್‌ನ ಕೆಲವು ಭಾಗಗಳಿಗೆ ಮುಂಗಾರು ಪ್ರವೇಶಿಸಿದೆ ಎಂದು ಐಎಂಡಿ ಮಾಹಿತಿ ನೀಡಿದೆ. ಮುಂಗಾರು ಮಾರುತಗಳು ಕರ್ನಾಟಕದ ದೇವಗಢ, ಬೆಳಗಾವಿ, ಹಾವೇರಿ, ಮಂಡ್ಯ, ಧರ್ಮಪುರಿ, ಚೆನ್ನೈ, ಐಜ್ವಾಲ್, ಕೊಹಿಮಾ ಮೂಲಕ ಹಾದುಹೋಗುತ್ತವೆ. ಮುಂದಿನ ಮೂರು ದಿನಗಳಲ್ಲಿ ಅರಬ್ಬಿ ಸಮುದ್ರದ ಕೆಲವು ಭಾಗಗಳು, ಮುಂಬೈ ಸೇರಿದಂತೆ ಮಹಾರಾಷ್ಟçದ ಹೆಚ್ಚಿನ ಭಾಗಗಳು, ಬೆಂಗಳೂರು ಸೇರಿದಂತೆ ಕರ್ನಾಟಕ, ಆಂಧ್ರಪ್ರದೇಶದ ಕೆಲವು ಭಾಗಗಳು, ತಮಿಳುನಾಡಿನ ಕೆಲವು ಪ್ರದೇಶಗಳು ಸೇರಿದಂತೆ ಬಂಗಾಳ ಕೊಲ್ಲಿಯ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಿಗೆ ಮಳೆಯಾಗಲಿದೆ ಎಂದು ಐಎಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಠಾಣೆ ಮೇಲ್ಛಾವಣಿ ಕುಸಿದು ಇನ್ಸ್ಪೆಕ್ಟರ್ ಸಾವು

ಗಾಜಿಯಾಬಾದ್, ಮೇ ೨೫: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಭಾರಿ ಮಳೆಯಿಂದಾಗಿ ಸಹಾಯಕ ಪೊಲೀಸ್ ಆಯುಕ್ತ ಠಾಣೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಘಟನೆಯಲ್ಲಿ ೫೮ ವರ್ಷದ ಸಬ್‌ಇನ್ಸ್ಪೆಕ್ಟರ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ವೀರೇಂದ್ರ ಕುಮಾರ್ ಮಿಶ್ರಾ ಅವರು ಕೋಣೆಯೊಳಗೆ ಮಲಗಿದ್ದರು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವುದು ಕಂಡುಬAದಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಪ್ರಿಯದರ್ಶಿ ಅವರು ಪೊಲೀಸ್ ಕಚೇರಿಯ ಮೇಲ್ಛಾವಣಿ ಕುಸಿದು ಬಿದ್ದಿರುವುದನ್ನು ಖಚಿತಪಡಿಸಿದ್ದಾರೆ. ಮಿಶ್ರಾ ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.

ಬುಡಕಟ್ಟು ಮಹಿಳೆ ಅತ್ಯಾಚಾರ-ಕೊಲೆ ಆರೋಪ

ಖಾಂಡ್ವಾ, ಮೇ ೨೫: ಮಧ್ಯ ಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಇಬ್ಬರು ಪುರುಷರು, ೪೫ ವರ್ಷದ ಬುಡಕಟ್ಟು ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿAದ ಸುಮಾರು ೯೦ ಕಿ.ಮೀ ದೂರದಲ್ಲಿರುವ ಖಲ್ವಾ ತಹಸಿಲ್‌ನಲ್ಲಿರುವ ರೋಶ್ನಿ ಪೊಲೀಸ್ ಹೊರಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ತೀವ್ರ ಹಲ್ಲೆ ನಡೆಸಲಾಗಿದ್ದು, ಅವರು ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಖಾಂಡ್ವಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ರಘುವಂಶಿ ಹೇಳಿದ್ದಾರೆ. ಖಂಡ್ವಾ ಜಿಲ್ಲಾ ಆಸ್ಪತ್ರೆಯಲ್ಲಿ ವಿಧಿವಿಜ್ಞಾನ ತಜ್ಞರ ನಿಕಟ ನಿಗಾದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ವರದಿ ಬಂದ ನಂತರ ಹೆಚ್ಚಿನ ವಿವರ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಪಕ್ಷ ಮತ್ತು ಕುಟುಂಬದಿAದ ತೇಜ್ ಪ್ರತಾಪ್ ಹೊರಕ್ಕೆ

ನವದೆಹಲಿ, ಮೇ ೨೫: ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್‌ನನ್ನು ಪಕ್ಷದಿಂದ ೬ ವರ್ಷಗಳ ಕಾಲ ಹೊರಹಾಕಿದ್ದಾರೆ. ಇಷ್ಟೇ ಅಲ್ಲ, ಲಾಲು ತೇಜ್ ಪ್ರತಾಪ್ ಅವರನ್ನು ಕುಟುಂಬದಿAದಲೂ ಹೊರಹಾಕಿದ್ದಾರೆ. ಆರ್‌ಜೆಡಿ ಮುಖ್ಯಸ್ಥರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊAಡಿದ್ದು, ಅದರಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ. ತೇಜ್ ಪ್ರತಾಪ್ ಈಗ ಕುಟುಂಬ ಮತ್ತು ಪಕ್ಷದಲ್ಲಿ ಯಾವುದೇ ಪಾತ್ರ ಹೊಂದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ವೈಯಕ್ತಿಕ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ನಿರ್ಲಕ್ಷಿಸುವುದರಿಂದ ಸಾಮಾಜಿಕ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟವನ್ನು ದುರ್ಬಲಗೊಳಿಸುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥರು ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಹಿರಿಯ ಮಗನ ಚಟುವಟಿಕೆಗಳು, ಸಾರ್ವಜನಿಕ ನಡವಳಿಕೆ ಮತ್ತು ಬೇಜವಾಬ್ದಾರಿ ವರ್ತನೆ ನಮ್ಮ ಕೌಟುಂಬಿಕ ಮೌಲ್ಯಗಳು ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿಲ್ಲ. ಆದ್ದರಿಂದ, ನಾನು ಅವರನ್ನು ಪಕ್ಷ ಮತ್ತು ಕುಟುಂಬದಿAದ ದೂರವಿಡುತ್ತೇನೆ. ಇನ್ನು ಮುಂದೆ ಅವರಿಗೆ ಪಕ್ಷ ಮತ್ತು ಕುಟುಂಬದಲ್ಲಿ ಯಾವುದೇ ರೀತಿಯ ಪಾತ್ರವಿರುವುದಿಲ್ಲ ಎಂದಿದ್ದಾರೆ.