ಮಡಿಕೇರಿ, ಮೇ ೨೭: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಪರಿಶಿಷ್ಟ ಜಾತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ ೩೦ ಕೊನೆಯ ದಿನವಾಗಿದೆ. ಶೇ. ೭೫ ಸ್ಥಾನಗಳು ಪರಿಶಿಷ್ಟ ಜಾತಿ ಮತ್ತು ಉಳಿದ ಶೇ. ೨೫ ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ೫ನೇ ತರಗತಿಯಿಂದ ೧೦ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ನಿಲಯದಲ್ಲಿ ಪೌಷ್ಟಿಕಯುಕ್ತ ಉಪಹಾರ ಹಾಗೂ ಊಟದ ವ್ಯವಸ್ಥೆ, ಉಚಿತ ವಸತಿ, ಲೇಖನ ಸಾಮಾಗ್ರಿಗಳು, ಸಮವಸ್ತç, ಶೂ ಮತ್ತು ಸಾಕ್ಸ್, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್ ಹಾಗೂ ಬಾಲಕಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://sತಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ (SಂಖಿS Iಆ ಯೊಂದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬAಧಿಸಿದ ನಿಲಯಗಳ ವಾರ್ಡನ್‌ರವರಿಗೆ ಸಲ್ಲಿಸಬೇಕು.

ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಸಂತ ಜೋಸೆಫರ ಕಾನ್ವೆಂಟ್ ಹತ್ತಿರ, ಮಡಿಕೇರಿ ದೂರವಾಣಿ ಸಂಖ್ಯೆ: ೮೯೦೪೫೮೯೦೮೬ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಚೈನ್‌ಗೇಟ್, ಮಡಿಕೇರಿ ದೂರವಾಣಿ ಸಂಖ್ಯೆ: ೮೩೧೦೦೭೪೬೮೬, ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಚೇರಂಬಾಣೆ ದೂರವಾಣಿ ಸಂಖ್ಯೆ: ೯೪೮೦೬೨೯೭೧೧ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ ೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ತಿಳಿಸಿದ್ದಾರೆ.

ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಮೇ ೨೭: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪಿಯುಸಿ ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ ೨೦ ಕೊನೆಯ ದಿನವಾಗಿದೆ. ಅರ್ಜಿಯನ್ನು ವೆಬ್‌ಸೈಟ್ ವಿಳಾಸ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ನಲ್ಲಿ ಸಲ್ಲಿಸಬೇಕು.

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್‌ಸಿ ಮತ್ತು ಎಸ್‌ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೧ ಲಕ್ಷ.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ಅನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ.೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ಮೊ.ಸಂಖ್ಯೆ: ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ ೯೪೪೮೨೦೫೯೧೯ ಹಾಗೂ ಸೋಮವಾರಪೇಟೆ ತಾಲೂಕು ಕಚೇರಿ ಮೊ.ಸಂಖ್ಯೆ ೯೪೮೧೭೭೨೧೪೩ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಮೇ ೨೭: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ (ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಂಗ ಸಂಸ್ಥೆ) ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. (ಸಹಕಾರ ಸಂಘ, ಸಂಸ್ಥೆ, ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ).

ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆಸಿಎಸ್ ನಿಯಮ ೧೭(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕಾಗುತ್ತದೆ. ಕೋರ್ಸ್ ಅವಧಿ ೬ ತಿಂಗಳು

ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‌ರವರೆಗೆ ಎರಡು ಅಧಿವೇಶನಗಳು ಪದೋನ್ನತಿ ಮತ್ತು ವಾರ್ಷಿಕ ಬಡ್ತಿಗೆ ಉಪಯುಕ್ತ ಅಧ್ಯಯನ ಸಾಹಿತ್ಯ ನೀಡಲಾಗುವುದು. ೬ ತಿಂಗಳ ಅವಧಿಯಲ್ಲಿ (೫+೫=೧೦) ೨ ಸಂಪರ್ಕ ತರಗತಿಗಳು ಹೈಬ್ರಿಡ್ ಮಾದರಿಯಲ್ಲಿ ಆಫ್‌ಲೈನ್, ಆನ್‌ಲೈನ್ ತರಗತಿಗಳು ಸಹಕಾರ ವಾರಪತ್ರಿಕೆಯನ್ನು ನೀಡಲಾಗುವುದು. ಈಗಾಗಲೇ ರಾಜ್ಯದಲ್ಲಿ ಸುಮಾರು ೩೦,೦೦೦ ಸಹಕಾರಿ ಉದ್ಯೋಗಿಗಳು ತರಬೇತಿ ಪಡೆದಿದ್ದಾರೆ. ಸಹಕಾರ ಕ್ಷೇತ್ರದ ಅರಿವಿಗೆ ನಿಮಗೀಗ ಸುವರ್ಣಾವಕಾಶ.

ಅರ್ಜಿ ಫಾರಂ ಅನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ ಕೊಡಗು ಜಿಲ್ಲೆ-೫೭೧೨೦೧ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ, ಮಡಿಕೇರಿ, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಯೂನಿಯನ್ ಇಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ೯೮೪೫೩೧೮೩೬೪, ೯೬೬೩೧೫೩೯೨೨ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಕಟಣೆ ತಿಳಿಸಿದೆ.

ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಮೇ ೨೭: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ (ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಂಗ ಸಂಸ್ಥೆ) ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೋರ್ಸ್ ಅವಧಿ ೬ ತಿಂಗಳು. ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‌ವರೆಗೆ ಎರಡು ಅಧಿವೇಶನಗಳು. ಕನಿಷ್ಟ ಪ್ರವೇಶ ಶುಲ್ಕ. ಪ್ರವೇಶ ಪಡೆದ ಎಲ್ಲಾ ಅಭ್ಯರ್ಥಿಗಳಿಗೂ ಶಿಷ್ಯವೇತನ ನೀಡಲಾಗುವುದು. ರಿಯಾಯಿತಿ ದರದಲ್ಲಿ ಅಧ್ಯಯನ ಸಾಹಿತ್ಯ ನೀಡಲಾಗುವುದು. ಹೈಬ್ರಿಡ್ ಮಾದರಿಯಲ್ಲಿ ಆಫ್‌ಲೈನ್/ ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು. ಸಹಕಾರ ಸಂಘ / ಬ್ಯಾಂಕ್ ನೇಮಕಾತಿ ಪರೀಕ್ಷೆಗೆ ಅನುಕೂಲಕರ. ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ.

ವಿದ್ಯಾರ್ಹತೆ; ಕನಿಷ್ಠ ಎಸ್‌ಎಸ್‌ಎಲ್‌ಸಿ, ಗರಿಷ್ಠ ಯಾವುದೇ ಪದವಿ/ಇತರೆ. ವಿಶೇಷವಾಗಿ ನಾಯಕತ್ವ (ಐeಚಿಜeಡಿshiಠಿ, ಒoಣivಚಿಣioಟಿಚಿಟ Sಠಿeeಛಿh) ಬೆಳೆಸಿಕೊಳ್ಳಲು ಚರ್ಚಾ ಸ್ಪರ್ಧೆಯೊಂದಿಗೆ ಕಲಿಕೆ. ಕನಿಷ್ಟ ಶುಲ್ಕದೊಂದಿಗೆ ತ್ರೆöÊಮಾಸಿಕ ಕಂಪ್ಯೂಟರ್ ಬೇಸಿಕ್ ತರಬೇತಿ ನೀಡಲಾಗುವುದು.

ಅರ್ಜಿ ಫಾರಂನ್ನು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ ಕೊಡಗು ಜಿಲ್ಲೆ-೫೭೧೨೦೧, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮಡಿಕೇರಿ, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಯೂನಿಯನ್ ಇಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ೯೮೪೫೩೧೮೩೬೪, ೯೬೬೩೧೫೩೯೨೨ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರಕಟಣೆ ತಿಳಿಸಿದೆ.