ಕೂಡಿಗೆ, ಮೇ ೨೭: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಸಂಬAಧ ಮುಂಜಾಗ್ರತಾ ಕ್ರಮವಾಗಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯು ಕೂಡಿಗೆಯ ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಮುಖವಾಗಿ ತಾಲೂಕು ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮದ ಬಗ್ಗೆ ಕೈಗೊಂಡಿರುವ ಮಾಹಿತಿ ಮತ್ತು ಕಾಳಜಿ ಕೇಂದ್ರ ತೆರೆಯುವ ಬಗ್ಗೆ, ನೋಡಲ್ ಅಧಿಕಾರಿಗಳಿಂದ ಯಾವ ಹಂತದಲ್ಲಿ ಕಾರ್ಯವೈಖರಿ ನಡೆಯುತ್ತಿದೆ ಎಂಬ ಬಗ್ಗೆ ಮತ್ತು ಚೆಸ್ಕಾಂ, ಅರಣ್ಯ ಇಲಾಖೆಯ ವತಿಯಿಂದ ಇದುವರೆಗೆ ಕೈಗೊಂಡ ಸಂಪೂರ್ಣ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಯೋಜನೆ ಬಗ್ಗೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ೨೦೨೫-೨೬ನೇ ಸಾಲಿನ ಅತಿವೃಷ್ಟಿ, ಅನಾವೃಷ್ಟಿಗೆ ಸಂಬAಧಿಸಿದAತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಿದ್ಧತೆ ಸೇರಿದಂತೆ, ಸ್ವಯಂಸೇವಕರ ನೇಮಕ, ಅತಿವೃಷ್ಟಿ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳ ಮಾಹಿತಿ ಮತ್ತು ನಿಗದಿತ ಕೇಂದ್ರಗಳ ಮಾಹಿತಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.

ಅಧಿಕಾರಿಗಳಿಂದ ಮಾಹಿತಿ

ಸಭೆಯಲ್ಲಿ ಮೊದಲು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಪ್ರವಾಹ ಸಂಭವಿಸಬಹುದಾದ ಸ್ಥಳಗಳ ೨೯೨ ಮನೆಗಳಿಗೆ ತಿಳುವಳಿಕೆ ಪತ್ರ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಹಾರ ಕಿಟ್, ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ಮಾಹಿತಿ ಒದಗಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸೂಚನೆಯಂತೆ ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ಅಧಿಕಾರಿಗಳು ಕಡ್ಡಾಯವಾಗಿ ತಾಲೂಕು ಕೇಂದ್ರ ಸ್ಥಳದಲ್ಲಿದ್ದು ಕೆಲಸ ನಿರ್ವಹಿಸುವಂತೆ ಶಾಸಕರು ಸೂಚನೆ ನೀಡಿದರು.

ಚೆಸ್ಕಾಂ ಇಲಾಖೆ ಕಾರ್ಯಪಾಲಕ ಅಭಿಯಂತರ ಮಂಜುನಾಥ ತಾಲೂಕು ವ್ಯಾಪ್ತಿಯಲ್ಲಿ ಗಾಳಿ - ಮಳೆಯಿಂದಾಗಿ ೧೩೦ ವಿದ್ಯುತ್ ಕಂಬಗಳು ಸೇರಿದಂತೆ ಎರಡು ಟಿ.ಸಿ. ಮುರಿತಗೊಂಡಿರುವ ಬಗ್ಗೆ ಮಾಹಿತಿ ನೀಡಿದರು. ಕೂಡಿಗೆ, ಮೇ ೨೭: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಪರಿಸ್ಥಿತಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಸಂಬAಧ ಮುಂಜಾಗ್ರತಾ ಕ್ರಮವಾಗಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯು ಕೂಡಿಗೆಯ ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪ್ರಮುಖವಾಗಿ ತಾಲೂಕು ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮದ ಬಗ್ಗೆ ಕೈಗೊಂಡಿರುವ ಮಾಹಿತಿ ಮತ್ತು ಕಾಳಜಿ ಕೇಂದ್ರ ತೆರೆಯುವ ಬಗ್ಗೆ, ನೋಡಲ್ ಅಧಿಕಾರಿಗಳಿಂದ ಯಾವ ಹಂತದಲ್ಲಿ ಕಾರ್ಯವೈಖರಿ ನಡೆಯುತ್ತಿದೆ ಎಂಬ ಬಗ್ಗೆ ಮತ್ತು ಚೆಸ್ಕಾಂ, ಅರಣ್ಯ ಇಲಾಖೆಯ ವತಿಯಿಂದ ಇದುವರೆಗೆ ಕೈಗೊಂಡ ಸಂಪೂರ್ಣ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಕೈಗೊಳ್ಳಬಹುದಾದ ಯೋಜನೆ ಬಗ್ಗೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ೨೦೨೫-೨೬ನೇ ಸಾಲಿನ ಅತಿವೃಷ್ಟಿ, ಅನಾವೃಷ್ಟಿಗೆ ಸಂಬAಧಿಸಿದAತೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಿದ್ಧತೆ ಸೇರಿದಂತೆ, ಸ್ವಯಂಸೇವಕರ ನೇಮಕ, ಅತಿವೃಷ್ಟಿ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳ ಮಾಹಿತಿ ಮತ್ತು ನಿಗದಿತ ಕೇಂದ್ರಗಳ ಮಾಹಿತಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.

ಅಧಿಕಾರಿಗಳಿಂದ ಮಾಹಿತಿ

ಸಭೆಯಲ್ಲಿ ಮೊದಲು ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಪ್ರವಾಹ ಸಂಭವಿಸಬಹುದಾದ ಸ್ಥಳಗಳ ೨೯೨ ಮನೆಗಳಿಗೆ ತಿಳುವಳಿಕೆ ಪತ್ರ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಹಾರ ಕಿಟ್, ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಗಿರೀಶ್ ಮಾಹಿತಿ ಒದಗಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸೂಚನೆಯಂತೆ ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ಅಧಿಕಾರಿಗಳು ಕಡ್ಡಾಯವಾಗಿ ತಾಲೂಕು ಕೇಂದ್ರ ಸ್ಥಳದಲ್ಲಿದ್ದು ಕೆಲಸ ನಿರ್ವಹಿಸುವಂತೆ ಶಾಸಕರು ಸೂಚನೆ ನೀಡಿದರು.

ಚೆಸ್ಕಾಂ ಇಲಾಖೆ ಕಾರ್ಯಪಾಲಕ ಅಭಿಯಂತರ ಮಂಜುನಾಥ ತಾಲೂಕು ವ್ಯಾಪ್ತಿಯಲ್ಲಿ ಗಾಳಿ - ಮಳೆಯಿಂದಾಗಿ ೧೩೦ ವಿದ್ಯುತ್ ಕಂಬಗಳು ಸೇರಿದಂತೆ ಎರಡು ಟಿ.ಸಿ. ಮುರಿತಗೊಂಡಿರುವ ಬಗ್ಗೆ ಮಾಹಿತಿ ನೀಡಿದರು.