ಕುಶಾಲನಗರ, ಮೇ ೨೮: ೨೦೨೫ರ ಸಿ.ಇ.ಟಿ. ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ ೮೭೫ನೇ ಸ್ಥಾನ ಗಳಿಸಿದ ಕುಶಾಲನಗರ ವಿವೇಕಾನಂದ ಪಿ.ಯು. ಕಾಲೇಜಿನ ವಿದ್ಯಾರ್ಥಿ ಕೌಶಿಕ್ ಅವರನ್ನು ವಿದ್ಯಾಸಂಸ್ಥೆಯ ಪರವಾಗಿ ಸನ್ಮಾನಿಸಿ, ಗೌರವಿಸಲಾಯಿತು.

ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಮತ್ತು ವಿವೇಕಾನಂದ ಪಿ.ಯು ಕಾಲೇಜು ಪ್ರಾಂಶುಪಾಲೆ ಕ್ಲಾರಾ ರೇಷ್ಮಾ ಅವರ ಉಪಸ್ಥಿತಿಯಲ್ಲಿ ಪೋಷಕರೊಂದಿಗೆ ಸಾಧಕ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು.

ವಿವೇಕಾನಂದ ಪಿ.ಯು. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಈ ಸಾಲಿನ ಪರೀಕ್ಷೆಯಲ್ಲಿ ಶೇ. ೯೬ ಅಂಕ ಪಡೆದಿರುವ ಕೌಶಿಕ್ ಉತ್ತಮ ಸಾಧನೆ ಮಾಡಿರುವ ಬಗ್ಗೆ ಸಂಸ್ಥೆಯ ಅಧ್ಯಕ್ಷ ಶಂಭುಲಿAಗಪ್ಪ ಮೆಚ್ಚುಗೆ ವ್ಯಕ್ತಪಡಿಸಿ, ಉನ್ನತ ವ್ಯಾಸಂಗಕ್ಕೆ ಸಂಸ್ಥೆಯ ಮೂಲಕ ಸಹಾಯ ಹಸ್ತ ನೀಡುವ ಭರವಸೆ ನೀಡಿದರು.

ಕೌಶಿಕ್ ಕುಶಾಲನಗರ ಗೊಂದಿಬಸವನಹಳ್ಳಿಯ ನಿವಾಸಿ ಆಟೋ ಚಾಲಕ ಗಂಗರಾಜು ಮತ್ತು ಲತಾ ಮಣಿ ಅವರ ಪುತ್ರ. ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿ ಕೌಶಿಕ್, ತಾನು ಇಂಜಿನಿಯರಿAಗ್ ವಿಭಾಗದಲ್ಲಿ ಉನ್ನತ ಮಟ್ಟದ ಶಿಕ್ಷಣ ಪಡೆಯುವ ಗುರಿ ಹೊಂದಿರುವುದಾಗಿ ತಿಳಿಸಿದರು. ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿ ಮಹೇಶ್ ಅಮೀನ್, ಎಂ.ಜಿ.ಎA. ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ.ಎ. ಲಿಖಿತ, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ಕೌಶಿಕ್, ಪೋಷಕರು ಇದ್ದರು.