ಮಡಿಕೇರಿ, ಮೇ ೨೮ : ಮುಂಬರುವ ಚುನಾವಣೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ವಲಯಗಳಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಕೆಪಿಸಿಸಿಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಗೆ ಡಿಸಿಸಿಯಿಂದ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಗೆ ಕೆಪಿಸಿಸಿ ಸದಸ್ಯ ಹೆಚ್.ಎಂ. ನಂದಕುಮಾರ್, ಡಿಸಿಸಿ ಉಪಾಧ್ಯಕ್ಷ ಸಾಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ವಿ.ಪಿ. ಸುರೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್‌ದಾಸ್, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್ ಅವರುಗಳನ್ನು ನೇಮಕ ಮಾಡಲಾಗಿದೆ.