ಸುಬ್ರಹ್ಮಣ್ಯದಲ್ಲಿ ಉಪಹಾರ ಪ್ರಸಾದ

ಸುಬ್ರಹ್ಮಣ್ಯ, ಮೇ ೨೮: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಾ. ೩೦ ರಿಂದ ಉಪಹಾರ ಪ್ರಸಾದದ ವ್ಯವಸ್ಥೆ ಆರಂಭವಾಗಲಿದೆ. ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಮಧ್ಯಾಹ್ನ ಮತ್ತು ರಾತ್ರಿ ಅನ್ನದಾಸೋಹ ಭೋಜನ ಪ್ರಸಾದದ ವ್ಯವಸ್ಥೆ ಜಾರಿಯಲ್ಲಿದೆ. ಇದೀಗ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆಯನ್ನು ತಾ. ೩೦ ರಂದು ಪೂರ್ವಾಹ್ನ ೮ ಗಂಟೆಗೆ ವಿಧ್ಯುಕ್ತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಅಬ್ದುಲ್ ಹತ್ಯೆ : ಬಿಜೆಪಿ, ಆರ್‌ಎಸ್‌ಎಸ್ ಕಾರಣ

ಶಿವಮೊಗ್ಗ, ಮೇ ೨೮: ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬAಧ ಈಗಾಗಲೇ ಗೃಹ ಸಚಿವ ಜಿ. ಪರಮೇಶ್ವರ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಜೊತೆ ಮಾತಾಡಿದ್ದೇನೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಹೇಳಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇದು ಅತ್ಯಂತ ನೋವಿನ ಸಂಗತಿ. ಮಂಗಳೂರಿನ ಈ ಕೆಟ್ಟ ಪರಿಸ್ಥಿತಿಗೆ ಬಿಜೆಪಿ ಹಾಗೂ ಸಂಘ ಪರಿವಾರದವರು ಕಾರಣ. ಅವರದ್ದು ವಿಷ, ಕೊಳಕು ತುಂಬಿದ ಮನಸ್ಸು. ಅವರಿಗೆ ಮಾನವೀಯತೆ, ಮನುಷ್ಯತ್ವ ಯಾವುದು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಸಂಘ ಪರಿವಾರದವರಿಗೆ ಒಂದು ಶವ ಸಿಕ್ಕರೂ ಅದರ ಮೇಲೆ ರಾಜಕೀಯ ಮಾಡುತ್ತಾರೆ. ಬಿಜೆಪಿಯವರಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯ ಇದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸರಣಿ ಹತ್ಯೆ ಆಗುತ್ತಿರುವುದು ಜಿಲ್ಲೆ ಹಾಗೂ ರಾಜ್ಯಕ್ಕೂ ಕೆಟ್ಟ ಹೆಸರು. ಪೊಲೀಸರಿಗೆ ಪ್ರಾಥಮಿಕ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

ಕಮಲ್ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿದ್ದರಾಮಯ್ಯ

ಬೆಂಗಳೂರು, ಮೇ ೨೮: ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ ನಡೆದ ತಮ್ಮ ಮುಂಬರುವ ಚಿತ್ರ ಥಗ್ ಲೈಫ್' ಆಡಿಯೋ ಬಿಡುಗಡೆ ಸಮಾರಂಭದಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದು, ಇದಕ್ಕೆ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಅವರಿಗೆ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು. ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ ‘ಥಗ್ ಲೈಫ್' ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಟೆಹ್ರಾನ್‌ನಲ್ಲಿ ಮೂವರು ಭಾರತೀಯರು ನಾಪತ್ತೆ

ಇರಾನ್, ಮೇ ೨೮: ಪಂಜಾಬ್‌ನ ಸಂಗ್ರೂರ್, ಹೋಶಿಯಾರ್‌ಪುರ ಮತ್ತು ಎಸ್‌ಬಿಎಸ್ ನಗರದಿಂದ ಇರಾನ್‌ಗೆ ಪ್ರಯಾಣಿಸಿದ್ದ ಮೂವರು ಭಾರತೀಯರು ಕಾಣೆಯಾಗಿದ್ದಾರೆ ಎಂದು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದ್ದು, ಅವರನ್ನು ತುರ್ತು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದೆ. ಇದಲ್ಲದೆ, ವಿದೇಶಾಂಗ ಸಚಿವ ಎಸ್. ಜೈಶಂಕರ್, ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ರಾಜತಾಂತ್ರಿಕ ಕಾರ್ಯಕ್ರಮವೊಂದರಲ್ಲಿ ಇರಾನಿನ ಉಪ ವಿದೇಶಾಂಗ ಸಚಿವ ಮಜೀದ್ ರಾವಂಚಿ ಅವರೊಂದಿಗೆ ನೇರವಾಗಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ. ಕಾಣೆಯಾದ ಮೂವರು ವ್ಯಕ್ತಿಗಳನ್ನು ಹುಶನ್‌ಪ್ರೀತ್ ಸಿಂಗ್ (ಸಂಗ್ರೂರ್), ಜಸ್ಪಾಲ್ ಸಿಂಗ್ (ಎಸ್‌ಬಿಎಸ್ ನಗರ) ಮತ್ತು ಅಮೃತ್‌ಪಾಲ್ ಸಿಂಗ್ (ಹೋಶಿಯಾರ್‌ಪುರ) ಎಂದು ಗುರುತಿಸಲಾಗಿದೆ. ಅವರೆಲ್ಲರೂ ಮೇ ೧ ರಂದು ಟೆಹ್ರಾನ್‌ನಲ್ಲಿ ಇಳಿದ ಸ್ವಲ್ಪ ಸಮಯದ ನಂತರ ನಾಪತ್ತೆಯಾಗಿದ್ದರು. ೩ ಭಾರತೀಯ ನಾಗರಿಕರ ಕುಟುಂಬ ಸದಸ್ಯರು ತಮ್ಮ ಸಂಬAಧಿಕರು ಇರಾನ್‌ಗೆ ಪ್ರಯಾಣಿಸಿದ ನಂತರ ಕಾಣೆಯಾಗಿದ್ದಾರೆ ಎಂದು ಭಾರತದ ರಾಯಭಾರ ಕಚೇರಿಗೆ ತಿಳಿಸಿದ್ದಾರೆ. ರಾಯಭಾರ ಕಚೇರಿ ತಾನು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಕುಟುಂಬ ಸದಸ್ಯರಿಗೆ ನಿಯಮಿತವಾಗಿ ಮಾಹಿತಿ ನೀಡುತ್ತಿದೆ ಎಂದು ಹೇಳಿದೆ. ಪಂಜಾಬ್‌ನಲ್ಲಿರುವ ಏಜೆಂಟ್ ಮೂವರು ಪುರುಷರಿಗೆ ದುಬೈ-ಇರಾನ್ ಮಾರ್ಗದ ಮೂಲಕ ಆಸ್ಟೆçÃಲಿಯಾಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದ್ದರು. ಅವರಿಗೆ ಇರಾನ್‌ನಲ್ಲಿ ವಾಸ್ತವ್ಯ ಕಲ್ಪಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

‘ಕಾವೇರಿ ಜೆಟ್ ಇಂಜಿನ್' ಅಭಿವೃದ್ಧಿ: ರಷ್ಯಾದಲ್ಲಿ ಪರೀಕ್ಷೆ

ನವದೆಹಲಿ, ಮೇ ೨೮: ಭಾರತದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ಸ್ಥಳೀಯವಾಗಿ ಅಭಿವೃದ್ಧಿಪಡಿಸಿರುವ ಕಾವೇರಿ ಜೆಟ್ ಇಂಜಿನ್ ಪರೀಕ್ಷೆಯನ್ನು ರಷ್ಯಾದಲ್ಲಿ ನಡೆಸುತ್ತಿದೆ. ಭಾರತದ ದೀರ್ಘ ಶ್ರೇಣಿಯ ಮಾನವ ರಹಿತ ಯುದ್ಧ ವಿಮಾನಗಳಿಗೆ ಶಕ್ತಿ ತುಂಬಲು ಈ ಇಂಜಿನ್ ಬಳಸಲು ಯೋಜಿಸುತ್ತಿದೆ. ಇದು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಸಹಾಯ ಮಾಡುತ್ತದೆ. ಸದ್ಯ ರಷ್ಯಾದಲ್ಲಿ ಕಾವೇರಿಯ ಇಂಜಿನ್ ಪರೀಕ್ಷೆ ನಡೆಯುತ್ತಿದೆ. ಅಲ್ಲಿ ಸುಮಾರು ೨೫ ಗಂಟೆಗಳ ಪರೀಕ್ಷೆ ಬಾಕಿಯಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಅಲ್ಲಿನ ಅಧಿಕಾರಿಗಳು ನೀಡಬೇಕು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿರುವುದಾಗಿ ತಿಳಿದುಬಂದಿದೆ. ಸ್ವದೇಶಿ ನಿರ್ಮಿತ ಮಾನವ ರಹಿತ ಯುದ್ಧ ವಿಮಾನ ಯೋಜನೆಗಳಿಗೆ ಶಕ್ತಿ ನೀಡಲು ಕಾವೇರಿ ಜೆಟ್ ಇಂಜಿನ್ ಸಿದ್ಧವಾಗುತ್ತಿದೆ. ಈ ಯೋಜನೆಗಾಗಿ ಸರ್ಕಾರದಿಂದ ಅನುದಾನ ಕೇಳಿ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆದ ನಂತರ ಕಾವೇರಿ ಇಂಜಿನ್ ಬಗ್ಗೆ ಜನರು ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ. ಸ್ಥಳೀಯ ಲಘು ಯುದ್ಧ ವಿಮಾನ ತೇಜಸ್‌ಗೆ ಶಕ್ತಿ ತುಂಬುವ ಉದ್ದೇಶದಿಂದ ಕಾವೇರಿ ಎಂಜಿನ್ ಅಭಿವೃದ್ಧಿಪಡಿಸಲು ಡಿಆರ್‌ಡಿಒ ಯೋಜಿಸಿತ್ತು. ಆದರೆ ಇದರ ವಿಳಂಬದಿAದಾಗಿ ಯುದ್ಧ ವಿಮಾನಗಳಿಗೆ ಅಮೇರಿಕದ ಜಿಇ-೪೦೪ ಇಂಜಿನ್ ಬಳಸಲಾಗುತಿತ್ತು. ೮೩ ಎಲ್‌ಸಿಎ ಮಾರ್ಕ್ ೧ಎ ಯುದ್ಧ ವಿಮಾನಗಳಿಗೂ ಜಿಇ-೪೦೪ ಇಂಜಿನ್ ಬಳಸಲು ಯೋಜಿಸಲಾಗಿತ್ತು. ಆದರೆ ಅಮೇರಿಕಾದ ಸಂಸ್ಥೆಯಿAದ ಪೂರೈಕೆಯಲ್ಲಿನ ಸಮಸ್ಯೆಗಳಿಂದಾಗಿ ಈ ಯೋಜನೆಯೂ ವಿಳಂಬವಾಗಿದೆ. ಹೀಗಾಗಿ ಕಾವೇರಿ ಜೆಟ್ ಇಂಜಿನ್ ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾದ ಫೈಟರ್ ಜೆಟ್ ಇಂಜಿನ್ ಆಗಿದ್ದು, ಇದರ ಪರೀಕ್ಷೆ ಯಶಸ್ವಿಯಾದರೆ ಯುದ್ಧ ವಿಮಾನಗಳನ್ನು ನಿರ್ಮಿಸಲು ವಿದೇಶಿ ಇಂಜಿನ್‌ಗಳ ಮೇಲಿನ ಭಾರತದ ಅವಲಂಭನೆಯನ್ನು ತಗ್ಗಿಸಲಿದೆ. ಅದಲ್ಲದೇ ವಿಶ್ವದಲ್ಲೇ ಬಲಿಷ್ಠ ರಕ್ಷಣಾ ತಂತ್ರಜ್ಞಾನವನ್ನು ಹೊಂದಿದ ರಾಷ್ಟçಗಳ ಪಟ್ಟಿಗೆ ಭಾರತ ಸೇರಲಿದೆ. ಅದಕ್ಕಾಗಿ ರಕ್ಷಣಾ ತಜ್ಞರು ಕಾವೇರಿ ಇಂಜಿನ್ ಯೋಜನೆಗೆ ಹೆಚ್ಚಿನ ಅನುದಾನ ನೀಡಿ, ಅದಕ್ಕೆ ವೇಗ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.