ಮಡಿಕೇರಿ, ಮೇ ೨೮: ವಿಶ್ವ ಪರಿಸರ ದಿನಾಚರಣೆ-೨೦೨೫ ರ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿ, ಕೊಡಗು ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಾಲಾಮಕ್ಕಳಿಗಾಗಿ ತಾ. ೩೧ ರಂದು ಬೆಳಿಗ್ಗೆ ೯.೩೦ ಗಂಟೆಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಡ್ರಾಯಿಂಗ್ ಶೀಟ್ ಮಾತ್ರ ನೀಡಲಾಗುವುದು. ಚಿತ್ರಕಲೆಗೆ ಬೇಕಾಗುವ ಬಣ್ಣ ಇನ್ನಿತರೆ ವಸ್ತುಗಳನ್ನು ವಿದ್ಯಾರ್ಥಿಗಳೇ ತರಬೇಕು.
ಈ ವರ್ಷದ ಘೋಷ ವಾಕ್ಯವು “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” “ಇಟಿಜiಟಿg Pಟಚಿsಣiಛಿ Poಟಟuಣioಟಿ ಉಟobಚಿಟಟಥಿ” ಆಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ೭೭೬೦೭೩೮೪೪೭, ೯೭೪೧೩೧೮೨೩೭ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿ.ಇ.ಓ.), ಸ್ಥಳೀಯ ಸಾರ್ವಜನಿಕ ಶಿಕ್ಷಣ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ರಘುರಾಮ್ ತಿಳಿಸಿದ್ದಾರೆ.