ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ಮೇ ೨೮: ರಾಜ್ಯದ ಮಿಲಿಟರಿ ಕ್ಯಾಂಟೀನ್‌ಗಳಿಗೆ ಪೂರೈಕೆ ಮಾಡುವ ಮದ್ಯಕ್ಕೆ ತೆರಿಗೆ ವಿಧಿಸುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಅಬಕಾರಿ ತೆರಿಗೆ ಹೆಚ್ಚಳಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಸುದ್ದಿಯಾಗಿತ್ತು.

ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರೇ ಈ ಕುರಿತು ತೆರಿಗೆ ಹೆಚ್ಚಳದ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರವು ಸೂಚಿಸಿದೆ ಎಂದು ಮಾಧ್ಯಮಕ್ಕೆ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿಯೂ ಬಹಿರಂಗಪಡಿಸಿದ್ದರು. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಅಬಕಾರಿ ಕಮಿಷನರ್ ಅವರಿಗೆ ಸೂಚನೆ ನೀಡಿ ಅಕ್ಕ ಪಕ್ಕದ ರಾಜ್ಯಗಳಲ್ಲಿ ಮದ್ಯಕ್ಕೆ ವಿಧಿಸಲಾಗುತ್ತಿರುವ ತೆರಿಗೆ ಮಾಹಿತಿ ಸಂಗ್ರಹಿಸಿ ಪ್ರಸ್ತಾವನೆ ಸಲ್ಲಿಸುವಂತೆ ಆದೇಶಿಸಿದ್ದರು. ಸರ್ಕಾರದ ಈ ತೆರಿಗೆ ಹೆಚ್ಚಳ ಕ್ರಮಕ್ಕೆ ರಾಜ್ಯಾದ್ಯಂತ ರಕ್ಷಣಾ ವಲಯದ ಉದ್ಯೋಗಿಗಳು ಮತ್ತು ನಿವೃತ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

(ಮೊದಲ ಪುಟದಿಂದ) ಜನಾಕ್ರೋಶಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ವಿಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಆಪರೇಷನ್ ಸಿಂಧೂರ್ ಯಶಸ್ಸಿನ ಸಂಭ್ರಮ ಆಚರಣೆಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ‘ಜೈ ಹಿಂದ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಿಲಿಟರಿ ಕ್ಯಾಂಟೀನ್ ವಸ್ತುಗಳಿಗೆ ಅಬಕಾರಿ ಸುಂಕ ವಿಧಿಸುವುದಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ಈ ವಿಚಾರವನ್ನು ಘೋಷಣೆ ಮಾಡುತ್ತಿದ್ದಂತೆಯೇ ಸಭೆಯಲ್ಲಿ ನೆರೆÀದಿದ್ದವರು ಚಪ್ಪಾಳೆ ಮೂಲಕ ಸ್ವಾಗತಿಸಿದರು. ನಿವೃತ್ತ ಸೇನಾ ಸಿಬ್ಬಂದಿಯ ಕಲ್ಯಾಣಕ್ಕಾಗಿ ಎಕ್ಸ್ ಸರ್ವಿಸ್ ಮೆನ್ ವೆಲ್ಫೇರ್ ಕಾರ್ಪೊರೇಷನ್ (ಇx seಡಿviಛಿemeಟಿ ತಿeಟಜಿಚಿಡಿe ಛಿoಡಿಠಿoಡಿಚಿಣioಟಿ) ಸ್ಥಾಪಿಸಬೇಕೆಂಬ ಮನವಿ ಇದೆ. ಅದನ್ನು ಸ್ಥಾಪಿಸುವ ಸಂಬAಧ ಕಾರ್ಯಪ್ರವೃತ್ತರಾಗಲಿದ್ದೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ನೀವೆಲ್ಲ ದೇಶದ ಜತೆಗಿದ್ದೀರಿ. ನಾವು ನಿಮ್ಮ ಜತೆಗಿದ್ದೇವೆ ಎಂದು ಮಾಜಿ ಸೈನಿಕರನ್ನು ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು.

ಈ ಸಂದರ್ಭ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿರುವ ಎಲ್ಲ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಸೈನಿಕರ ವಿಭಾಗದ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಸಲಹೆ ಮೇರೆಗೆ ಕಾರ್ಪೊರೇಷನ್ ರಚಿಸಲು ಆಲೋಚಿಸುತ್ತಿದ್ದೇವೆ. ನಮ್ಮ ದೇಶಕ್ಕೆ ಸೇವೆ ಸಲ್ಲಿಸಿರುವ ಯೋಧರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ದಿವಂಗತ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ಕರ್ನಲ್ ಜೋಜನ್ ಥಾಮಸ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಎಂ.ಸಿ. ಮುತ್ತಣ್ಣ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಗಣೇಶ್ ಮುದ್ದಪ್ಪ, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತÀ ಕ್ಯಾಪ್ಟನ್ ಎಂ.ವಿ. ಪಂಜಲ್, ಶೌರ್ಯ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಮೋಹನ್ ಗಂಗಾಧರನ್, ಮೇಜರ್ ಶಫೀಕ್ ಮೊಹಮದ್ ಖಾನ್, ಸೇನಾ ಪದಕ ಪುರಸ್ಕೃತ ಕರ್ನಲ್ ರಾಮಮೂರ್ತಿ ಅವರ ಕುಟುಂಬ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಇಂದು ಬಂದ್ : ರಾಜ್ಯ ಅಬಕಾರಿ ಇಲಾಖೆಗೆ ೪೦ ಸಾವಿರ ಕೋಟಿ ತೆರಿಗೆ ಸಂಗ್ರಹದ ಗುರಿ ನೀಡಲಾಗಿದೆ. ಆದರೆ ಈ ವರ್ಷ ಗುರಿ ತಲುಪಲು ಸಾದ್ಯವಾಗದೇ ಶೇಕಡಾ ೧೦ ರಷ್ಟು ಕೊರತೆ ಉಂಟಾಗಿದೆ. ಹೀಗಾಗಿ ಸರ್ಕಾರ ಕಳೆದ ೬ ತಿಂಗಳಿನಲ್ಲಿ ಮೂರು ಬಾರಿ ಮದ್ಯ ಹಾಗೂ ಬಿಯರ್ ದರ ಏರಿಸಿ ಬೊಕ್ಕಸ ತುಂಬಿಸಲು ಮುಂದಾಗಿದೆ. ಇತ್ತೀಚೆಗೆ ಮದ್ಯದ ಅಂಗಡಿ , ಬಾರ್ , ಡಿಸ್ಟಿಲ್ಲರಿ ಸೇರಿದಂತೆ ವಿವಿಧ ಮದ್ಯ ಮಾರಾಟಗಾರರ ಸನ್ನದು ಶುಲ್ಕವನ್ನು ದುಪ್ಪಟ್ಟು ಮಾಡಲಾಗಿದ್ದು, ಇದಕ್ಕೆ ಮದ್ಯ ವರ್ತಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮೇ ೨೯ ರಂದು ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟಿಸಲೂ ಕರೆ ನೀಡಲಾಗಿದೆ.