ಮಡಿಕೇರಿ, ಮೇ ೨೮: ಪ್ರಸಕ್ತ ಸಾಲಿಗೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ. ಶೇ. ೭೫ ಸ್ಥಾನಗಳು ಪರಿಶಿಷ್ಟ ಜಾತಿ - ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಉಳಿದ ಶೇ. ೨೫ ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ತರಗತಿಗಳಲ್ಲಿ (ಐಟಿಐ, ನರ್ಸಿಂಗ್, ಪ್ಯಾರಮೆಡಿಕಲ್ ಇತ್ಯಾದಿ) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿನಿಲಯದಲ್ಲಿ ಉಚಿತ ಊಟದ ವ್ಯವಸ್ಥೆ, ವಸತಿ, ವೈದ್ಯಕೀಯ ತಪಾಸಣೆ, ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್ ಹಾಗೂ ವಿದ್ಯಾರ್ಥಿನಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ hಣಣಠಿs://sತಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ, ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬAಧಿಸಿದ ನಿಲಯಗಳ ವಾರ್ಡನ್‌ರವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಎಫ್‌ಎಂಸಿ ಕಾಲೇಜಿನ ಹತ್ತಿರ, ಮಡಿಕೇರಿ ದೂರವಾಣಿ ಸಂಖ್ಯೆ: ೭೩೫೩೧೪೧೬೨೪, ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಚೈನ್‌ಗೇಟ್, ಮಡಿಕೇರಿ ದೂರವಾಣಿ ಸಂಖ್ಯೆ: ೮೯೦೪೫೮೯೦೮೬ ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-೧), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂರವಾಣಿ ಸಂಖ್ಯೆ ೯೪೮೦೮೪೩೧೫೫ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ

ಮಡಿಕೇರಿ, ಮೇ ೨೮: ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿರುವ ಸಮಾಜ ಕಲ್ಯಾಣ ಇಲಾಖಾ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ ೨೦೨೫-೨೬ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಸೋಮವಾರಪೇಟೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತç, ಶೂ-ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್, ಸೋಪು, ಎಣ್ಣೆ, ಬ್ರಶ್, ಪೇಸ್ಟ್, ಪೌಡರ್, ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಕುಶಾಲನಗರ ೯೪೮೩೧೧೬೫೦೪, ಸೋಮವಾರಪೇಟೆ ೯೭೪೧೭೪೭೬೬೧, ಹೆಬ್ಬಾಲೆ ೭೩೪೮೮೪೦೦೭೦, ಕೊಡ್ಲಿಪೇಟೆ ೯೮೪೪೫೮೧೪೩೭ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಕುಶಾಲನಗರ ೯೭೪೦೧೩೨೩೫೬, ಸೋಮವಾರಪೇಟೆ ೮೮೬೧೪೮೬೮೭೧, ಶನಿವಾರಸಂತೆ ೮೮೬೧೪೮೬೮೭೧ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕುಶಾಲನಗರ ೯೪೮೩೧೧೬೫೦೪ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಕುಶಾಲನಗರ ದೂ. ೯೭೪೦೧೩೨೩೫೬ ಈ ಸಂಸ್ಥೆಗಳಲ್ಲಿ ದಾಖಲು ಮಾಡುವಂತೆ ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.

ಸಾಲ ಸೌಲಭ್ಯಕ್ಕೆ

ಮಡಿಕೇರಿ, ಮೇ ೨೮: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಕೊಡಗು ಇವರ ವತಿಯಿಂದ ೨೦೨೫-೨೬ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಏಇಂ ಗಿiಚಿ/ಅಇಖಿ/ಓಇಇಖಿ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ಸಿಇಟಿ, ನೀಟ್ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‌ಸೈಟ್ hಣಣಠಿs://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂ. ೦೮೨೭೨-೨೦೧೪೪೯ ಗೆ ಸಂಪರ್ಕಿಸಬಹುದು. “ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.