ಮಡಿಕೇರಿ, ಮೇ ೨೯: ಈ ಬಾರಿ ಮುಂಗಾರು ಮುಂಚಿತವಾಗಿ ಆರಂಭವಾಗಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಜಿಲ್ಲೆಯ ಸೂಕ್ಷö್ಮ ಮತ್ತು ಅತಿಸೂಕ್ಷö್ಮ ಪ್ರದೇಶದಲ್ಲಿನ ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್ ಸೂಚಿಸಿದರು.
ಮುಂಗಾರು ಆರಂಭ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡ ಹಿನ್ನೆಲೆ ವಿಪತ್ತು ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಿರಾಬೇಕು. ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಬೇಕೆAದು ಸೂಚಿಸಿದರು. ಕಾಳಜಿ ಕೇಂದ್ರದಲ್ಲಿ ಉತ್ತಮ ಆಹಾರ ನೀಡಬೇಕು. ಯಾವುದೇ ಕಾರಣಕ್ಕೂ ದೂರು ಬರದಂತೆ ಗಮನಹರಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಕಿವಿಮಾತು ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಜಿಲ್ಲಾಡಳಿತದಿಂದ ಸಹಾಯವಾಣಿ ಸಂಖ್ಯೆ ೦೮೨೭೨-೨೨೧೦೭೭ ಆರಂಭಿಸಿದೆ. ಜೊತೆಗೆ ೮೫೫೦೦೦೧೦೭೭ ವಾಟ್ಸಾö್ಯಪ್ ಸಂಖ್ಯೆಯನ್ನು ಸಹ ಆರಂಭಿಸಿದ್ದು, ಅತಿವೃಷ್ಟಿಯಿಂದ ಉಂಟಾಗುವ ವಿಪತ್ತಿನ ಬಗ್ಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಡಿಕೇರಿ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ ೦೮೨೭೨-೨೨೮೩೯೬, ವೀರಾಜಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-೦೮೨೭೪-೨೫೭೩೨೮, ಸೋಮವಾರಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-೦೮೨೭೬-೨೮೨೦೪೫, ಕುಶಾಲನಗರ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-೦೮೨೭೬-೨೦೦೧೯೮ ಹಾಗೂ ಪೊನ್ನಂಪೇಟೆ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರ-೦೮೨೭೪-೨೪೯೭೦೦ ಸಹಾಯವಾಣಿ ಕೇಂದ್ರ ಆರಂಭಿಸಿಲಾಗಿದೆ ಎಂದರು.
ಮಳೆಯಿಂದ ಉಂಟಾಗುವ ಹಾನಿ ಸಂಬAಧ ಜಿಲ್ಲಾಡಳಿತದಿಂದ ಆರಂಭಿಸಿರುವ ವಾಟ್ಸಾö್ಯಪ್ ಗುಂಪಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಛಾಯಾಚಿತ್ರ ಹಾಗೂ ವಾಯ್ಸ್ ರೆಕಾರ್ಡ್ ಸಹಿತ ಮಾಹಿತಿ ನೀಡಬಹುದಾಗಿದೆ ಎಂದರು.
ವಿಪತ್ತು ನಿರ್ವಹಣೆ ಸಂಬAಧ ಜಿಲ್ಲಾ ಮಟ್ಟದಲ್ಲಿ ವಾಟ್ಸಾö್ಯಪ್ ಗ್ರೂಪ್ ಮಾಡಿರುವಂತೆ ತಾಲೂಕು ಮಟ್ಟದಲ್ಲಿಯೂ ಸಹ ತಹಶೀಲ್ದಾರರ ನೇತೃತ್ವದಲ್ಲಿ ಗುಂಪು ರಚಿಸಿಕೊಂಡು ತಾ.ಪಂ. ಇಒ, ಪಿಡಿಓ, ಗ್ರಾ.ಪಂ. ಕಾರ್ಯದರ್ಶಿಗಳು, ಲೋಕೋಪಯೋಗಿ, ಪಂಚಾಯತ್ ರಾಜ್ ಇಂಜಿನಿಯರ್‌ಗಳು, ಪೊಲೀಸ್, ಅಗ್ನಿಶಾಮಕ, ಗ್ರಾಮ ಸಹಾಯಕರು, ಗೃಹರಕ್ಷಕದಳ ಗುಂಪಿಗೆ ಸೇರಿಸಿಕೊಂಡು ವಿಪತ್ತು ನಿರ್ವಹಣೆಯನ್ನು ನಿರ್ವಹಿಸಬೇಕು ಎಂದರು.
ಈಗಾಗಲೇ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರ ಜೊತೆ ತಾಲೂಕುಮಟ್ಟದ ಅಧಿಕಾರಿಗಳು ಸಹ ಸಮನ್ವಯ ಸಾಧಿಸಿ ವಿಪತ್ತು ನಿರ್ವಹಣೆ ಮಾಡಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಗಮನಹರಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಮುಂಗಾರು ಹಿನ್ನೆಲೆ ಬಿರುಗಾಳಿ ಹೆಚ್ಚಾಗಿದ್ದು, ಇದರಿಂದ ಮನೆ ಹಾಗೂ ವಿದ್ಯುತ್ ಕಂಬಕ್ಕೆ ಹೆಚ್ಚಿನ ಹಾನಿಯಾಗುತ್ತಿದೆ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕು. ಲೋಕೋಪಯೋಗಿ, ಪಂಚಾಯಿತಿ ಮತ್ತಿತರ ಇಂಜಿನಿಯರ್ ಇಲಾಖೆಗಳು ರಸ್ತೆ ಹಾನಿ, ರಸ್ತೆಗೆ ಮರ ಬಿದ್ದಲ್ಲಿ ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ನಿರ್ವಹಣೆಗೆ ರೂ. ೪೦ ಕೋಟಿ ಹಣ
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾಡಳಿತ ಬಳಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ರೂ. ೪೦ ಕೋಟಿ ಹಣವಿದೆ. ಜೊತೆಗೆ ತಹಶೀಲ್ದಾರರ ಬಳಿಯು ಅನುದಾನವಿದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ಹೋಬಳಿವಾರು ಒಟ್ಟು ೨೦ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಿಕೋಪಗಳು ಸಂಭವಿಸಿದಲ್ಲಿ ಸ್ಥಳೀಯ ಮಟ್ಟ ಹಾಗೂ ಜಿಲ್ಲಾಡಳಿತದೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಕುಟುಂಬಗಳಿಗೆ ಕೂಡಲೇ ಪರಿಹಾರ ವಿತರಿಸಬೇಕು. ಹಾಗೆಯೇ ಮನೆ ಹಾನಿ ಸಂಬAಧ ಪರಿಹಾರ ವಿತರಿಸಬೇಕು ಎಂದು ಹೇಳಿದರು.
ಶಾಲಾ-ಕಾಲೇಜು ಕಟ್ಟಡಗಳ ಸುಸ್ಥಿತಿ ಬಗ್ಗೆ ಗಮನಹರಿಸಬೇಕು. ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ, ಶಾಲಾ ಕೊಠಡಿ ದುರಸ್ತಿಗೆ ಪಂಚಾಯತ್ ರಾಜ್ ಇಂಜಿನಿಯರ್‌ಗೆ ವಹಿಸಲಾಗಿದೆ ಎಂದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಮಧ್ಯಾಹ್ನದ ಬಿಸಿಯೂಟ ಯೋಜನೆ ಹಾಗೂ ಕ್ಷೀರಭಾಗ್ಯ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರ್ಪಡೆ ಮಾಡುವಂತಾಗಬೇಕು. ಯಾವುದೇ ಕಾರಣಕ್ಕೂ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯಬಾರದು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕಾವೇರಿ ಅವರು, ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ ೭ ಮಕ್ಕಳನ್ನು ಪತ್ತೆಹಚ್ಚಿ ಶಾಲೆಗೆ ಸೇರ್ಪಡೆ ಮಾಡಲಾಗಿದೆ ಎಂದರು. ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ ಅವರು ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಪ್ರಗತಿ ಹಾಗೂ ವಸತಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರಕೃತಿ ವಿಕೋಪ ಕಂಟ್ರೋಲ್ ರೂಮ್ ಸಹಾಯವಾಣಿ ಕೇಂದ್ರ ೨೪x೭ ಕಾರ್ಯ ನಿರ್ವಹಿಸಲಿದೆೆ. ಹಾಗೆಯೇ ಸೆಸ್ಕ್, ಅರಣ್ಯ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ವಿಕೋಪ ಪೀಡಿತ ಪ್ರದೇಶಗಳಲ್ಲಿ ಲಭ್ಯವಿರಬೇಕಾದ ಔಷಧ, ಚಿಕಿತ್ಸಾ ಉಪಕರಣಗಳ ಕುರಿತಂತೆ ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗ ನಿರ್ವಹಣೆಗೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಲಭ್ಯವಿರುವಂತೆ ಆರೋಗ್ಯ ಇಲಾಖೆಯಿಂದ ಕ್ರಮವಹಿಸಲಾಗಿದೆ. ಈ ಕಾಳಜಿ ಕೇಂದ್ರಗಳ ಉಸ್ತುವಾರಿಯನ್ನು ಆಯಾಯ ನೋಡಲ್ ಅಧಿಕಾರಿ ನಿರ್ವಹಿಸಲಿದ್ದಾರೆ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ಈ ಬಾರಿ ಮೇ ತಿಂಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ೩೦ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡುವ ಗುರಿ ಇದೆ. ಬಿತ್ತನೆ ಬೀಜ ಜೂನ್ ಮೊದಲ ವಾರದಿಂದ ವಿತರಿಸಲಾಗುತ್ತದೆ ಎಂದರು.
೮೮ ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಸೆಪ್ಟೆಂಬರ್‌ವರೆಗೂ ರಸಗೊಬ್ಬರ ಪೂರೈಕೆಯಾಗಿದೆ. ಉಳಿದಂತೆ ರಸಗೊಬ್ಬರ ಪೂರೈಕೆಯಾಗಲಿದ್ದು,. ಡಿಎಪಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು.
ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ನಗರಾಭಿವೃದ್ಧಿ ಇಲಾಖೆಗಳು ಮುಂತಾದ ಸಂಬAಧಪಟ್ಟ ಇಂಜಿನಿಯರಿAಗ್ ಇಲಾಖೆಗಳು ಪ್ರವಾಹದ ಪರಿಸ್ಥಿತಿ ತಲೆದೋರದಂತೆ ತಮ್ಮ ವ್ಯಾಪ್ತಿಯ ಚರಂಡಿ, ನಾಲೆಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು.
ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ ಅವರು ಕಂದಾಯ ಇಲಾಖೆಗೆ ಸಂಬAಧಿಸಿದAತೆ ಮಾಹಿತಿ ನೀಡಿದರು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾ.ಪಂ. ಇಒಗಳು, ಇಂಜಿನಿಯರ್‌ಗಳು ಹಲವು ಮಾಹಿತಿ ನೀಡಿದರು.