ಹುಬ್ಬಳ್ಳಿ ಗಲಭೆ ಸೇರಿ ೪೩ ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಕೋರ್ಟ್

ಬೆಂಗಳೂರು, ಮೇ ೨೯: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ ೪೩ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ ೪೩ ಪ್ರಕರಣಗಳನ್ನು ಅಕ್ಟೋಬರ್ ೧೦, ೨೦೨೪ ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ. ಅಂಜಾರಿಯಾ, ನ್ಯಾ. ಕೆ.ವಿ. ಅರವಿಂದ್ ಅವರಿದ್ದ ಹೈಕೋರ್ಟ್ ದ್ವಿಸದಸ್ಯ ಪೀಠ ಇಂದು (ಮೇ ೨೯) ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಂಭವಾಗಿದೆ. ಪಿಐಎಲ್ ವಿಚಾರಣೆಯ ಸಂದರ್ಭದಲ್ಲೇ ಕೋರ್ಟ್, ಸಚಿವ ಸಂಪುಟದ ಕ್ರಮ ನಿಯಮಬಾಹಿರವಾಗಿದ್ದರೆ ಒಪ್ಪುವುದಿಲ್ಲ, ಪ್ರಕರಣಗಳನ್ನು ಹಿಂಪಡೆಯಲು ಅನುಮತಿ ನೀಡುವುದಿಲ್ಲ ಎಂದು ಹೇಳಿತ್ತು. ಅಲ್ಲದೇ ಅರ್ಜಿದಾರರ ಪರ ವಕೀಲರು ಪ್ರಭಾವಿ ವ್ಯಕ್ತಿಗಳೂ ಸೇರಿದಂತೆ ಕೆಲವು ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಅಪರಾಧ ದಂಡ ಸಂಹಿತೆ ಸೆಕ್ಷನ್ ೩೨೧ಕ್ಕೆ ವಿರುದ್ಧವಾಗಿ ಸರಕಾರ ಹಿಂಪಡೆದಿದೆ ಎಂದು ಹೇಳಿರುವುದು ಮೇಲ್ನೋಟಕ್ಕೆ ಸಮರ್ಥನೀಯವಾಗಿದೆ ಎಂದು ಅಭಿಪ್ರಾಯಪಟ್ಟಿತ್ತು.

ಸರಣಿ ಹತ್ಯೆ ಖಂಡಿಸಿ ಕಾಂಗ್ರೆಸ್ ನಾಯಕರಿಂದ ಸಾಮೂಹಿಕ ರಾಜೀನಾಮೆ

ಮಂಗಳೂರು, ಮೇ ೨೯: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ೩೨ ವರ್ಷದ ಮುಸ್ಲಿಂ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಯೋಗೀಶ್ ಪೂಜಾರಿ ಅವರ ಪುತ್ರ ದೀಪಕ್ (೨೧), ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್ (೨೧) ಮತ್ತು ಸುರೇಶ್ ಬೆಲ್ಚಡ ಅವರ ಪುತ್ರ ಚಿಂತನ್ (೧೯) ಬಂಧಿತರ ಆರೋಪಿಗಳಾಗಿದ್ದು, ಎಲ್ಲರೂ ಬಂಟ್ವಾಳ ತಾಲೂಕಿನವರಾಗಿದ್ದಾರೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಣಪಾಡಿಯಿಂದ ಗುರುವಾರ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದೆ. ಗುರುವಾರ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳನ್ನು ಖಂಡಿಸಿ, ಸರ್ಕಾರದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಪಕ್ಷದ ಮುಸ್ಲಿಂ ನಾಯಕರು ಸಾಮೂಹಿಕ ರಾಜೀನಾಮೆ ನೀಡಿದರು. ಪಕ್ಷದ ಕಾರ್ಯಕರ್ತರು ಎಲ್ಲಾ ಮುಸ್ಲಿಂ ನಾಯಕರ ರಾಜೀನಾಮೆಗೆ ಒತ್ತಾಯಿಸಿದ್ದರಿಂದ ಸಭೆ ಗೊಂದಲದಲ್ಲಿ ಕೊನೆಗೊಂಡಿತು. ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್, ಎಂ.ಎಸ್. ಮೊಹಮ್ಮದ್, ಅಬ್ದುಲ್ ರವೂಫ್ ಮತ್ತು ಇತರರು ಸೇರಿದಂತೆ ಪಕ್ಷದ ನಾಯಕರು ತಮ್ಮ ರಾಜೀನಾಮೆಯನ್ನು ಘೋಷಿಸಿದರು. ಅಲ್ಲದೆ ಒಂದು ವಾರದೊಳಗೆ ರಾಜೀನಾಮೆ ಪತ್ರಗಳನ್ನು ಕೆಪಿಸಿಸಿಗೆ ಸಲ್ಲಿಸಲಾಗುವುದು ಎಂದು ಹಮೀದ್ ಹೇಳಿದರು.

ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್‌ಗೆ ಅವಕಾಶ ಇಲ್ಲ

ಬೆಂಗಳೂರು, ಮೇ ೨೯: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ತಮಿಳು ನಟ ಕಮಲ್ ಹಾಸನ್ ಮೇ ೩೦ ರೊಳಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರ ಮುಂದಿನ ‘ಥಗ್ ಲೈಫ್' ಚಿತ್ರ ರಿಲೀಸ್‌ಗೆ ಅವಕಾಶ ನೀಡದಿರಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾರಾ ಗೋವಿಂದು, ಥಾಮಸ್ ಡಿಸೋಜಾ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು. ಸಭೆ ನಡೆಯುತ್ತಿದ್ದಾಗಲೇ ಕೆಲ ಕನ್ನಡಪರ ಹೋರಾಟಗಾರರು ಮುತ್ತಿಗೆಗೆ ಯತ್ನಿಸಿದ ಘಟನೆಯೂ ನಡೆಯಿತು. ಸಭೆಯಲ್ಲಿ ಮಾತನಾಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು, ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡ್ಬೇಕು ಎಂದು ಹಲವು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಈ ವಿಚಾರದ ಬಗ್ಗೆ ಚರ್ಚಿಸಿದ್ದು, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇವೆ. ಅವರು ಹೇಳಿರುವುದರಲ್ಲಿ ತಪ್ಪಿದ್ದು, ಕಮಲ್ ಹಾಸನ್‌ರ ತಪ್ಪನ್ನು ಮನವರಿಕೆ ಮಾಡಿಸಿ ಕ್ಷಮೆ ಕೇಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. ನಿರ್ಮಾಪಕ ಸಾರಾ ಗೋವಿಂದು, ಕಮಲ್ ಹಾಸನ್ ಬಗ್ಗೆ ನಮಗೆ ಯಾರಿಗೂ ಕನಿಕರ ಇಲ್ಲ. ಇವತ್ತು ಅಥವಾ ನಾಳೆ ಒಳಗೆ ಕಮಲ್ ಹಾಸನ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಖಂಡಿಸುತ್ತೇವೆ. ಕಮಲ್ ಹಾಸನ್ ಬಹಿರಂಗವಾಗಿ ಕ್ಷಮೆ ಕೇಳದೇ ಇದ್ದರೆ ಯಾವುದೇ ಕಾರಣಕ್ಕೂ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಮಾಡಿಕೊಡಲ್ಲ ಎಂದು ಎಚ್ಚರಿಕೆ ನೀಡಿದರು.

ಜನವರಿ ೨೦೨೫ ರಿಂದ ೧೦೮೦ ಭಾರತೀಯರನ್ನು ಗಡೀಪಾರು

ನವದೆಹಲಿ, ಮೇ ೨೯: ವಲಸೆ ವಿಷಯಗಳಲ್ಲಿ, ವಿಶೇಷವಾಗಿ ಅಕ್ರಮ ಸ್ಥಾನಮಾನ ಹೊಂದಿರುವ ಭಾರತೀಯ ಪ್ರಜೆಗಳ ಗಡೀಪಾರು ವಿಷಯದಲ್ಲಿ ಭಾರತವು ಅಮೇರಿಕಾದೊಂದಿಗೆ ನಿಕಟ ಸಹಕಾರವನ್ನು ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಜನವರಿ ೨೦೨೫ ರಿಂದ ಸುಮಾರು ೧೦೮೦ ಭಾರತೀಯರನ್ನು ಅಮೇರಿಕಾದಿಂದ ಗಡೀಪಾರು ಮಾಡಲಾಗಿದೆ. ಸುಮಾರು ೬೨ ಪ್ರತಿಶತದಷ್ಟು ಜನರು ವಾಣಿಜ್ಯ ವಿಮಾನಗಳಲ್ಲಿ ಮರಳಿದ್ದಾರೆ ಎಂದು ತಿಳಿಸಿದೆ. ವಿದ್ಯಾರ್ಥಿ ಮತ್ತು ವಿನಿಮಯ ಸಂದರ್ಶಕರ ವೀಸಾ ಅರ್ಜಿದಾರರಿಗೆ ಸಂಬAಧಿಸಿದAತೆ ಅಮೇರಿಕಾ ಸರ್ಕಾರದ ನವೀಕರಿಸಿದ ಮಾರ್ಗಸೂಚಿಗಳನ್ನು ಸೂಚಿಸುವ ವರದಿಗಳನ್ನು ಭಾರತ ನೋಡಿದೆ ಎಂದು ಜೈಸ್ವಾಲ್ ಹೇಳಿದ್ದಾರೆ.