ಮಡಿಕೇರಿ, ಜೂ. ೩: ಜಿಲ್ಲಾ ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೊಂಡ ನ್ಯಾಯಾಧೀಶರು ಗಳಿಗೆ ಮಡಿಕೇರಿ ವಕೀಲರ ಸಂಘದಿAದ ಸ್ವಾಗತ ಕೋರ ಲಾಯಿತು.
ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ. ನಿರಂಜನ್ ಅಧ್ಯಕ್ಷತೆಯಲ್ಲಿ ನ್ಯಾಯಾಲಯ ಸಂಕೀರ್ಣದಲ್ಲಿರುವ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ, ಹಿರಿಯ ಸಿವಿಲ್ ನ್ಯಾಯಾಧೀಶರಾದ ವೀರಭದ್ರಯ್ಯ, ಕಿರಿಯ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡ ವಿನುತ ಅವರನ್ನು ಸ್ವಾಗತಿಸಲಾಯಿತು.
ಈ ಸಂದರ್ಭ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪುಂಡಲಿಕ ಹೊಸಮನಿ, ೩ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುಬ್ರಮಣ್ಯ, ಕೌಟುಂಬಿಕ
(ಮೊದಲ ಪುಟದಿಂದ) ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜು, ಸಂಘದ ಕಾರ್ಯದರ್ಶಿ ಡಿ.ಎಂ. ಕೇಶವ, ಖಜಾಂಜಿ ರವಿಶಂಕರ್, ಜಂಟಿ ಕಾರ್ಯದರ್ಶಿ ಪವನ್ ಪೆಮ್ಮಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.