ಮಡಿಕೇರಿ, ಜೂ. ೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ನಗರಸಭೆ ಮಡಿಕೇರಿ, ವಕೀಲರ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೫ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನಾಚರಣೆ ‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸಿ’ ವಿಷಯದಡಿ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ ೧೦ ಗಂಟೆಗೆ ಗಾಂಧಿ ಭವನ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ನಂತರ ೧೦.೩೦ ಗಂಟೆಗೆ ಗಾಂಧಿ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮೇ ೩೧ ರಂದು ಆಯೋಜಿಸಿದ್ದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪರಿಸರ ಅಧಿಕಾರಿ ರಘುರಾಮ್ ತಿಳಿಸಿದ್ದಾರೆ.