ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ಎನ್.ಎಸ್.ಎಸ್. ಘಟಕದ ವತಿಯಿಂದ ಕಾಲೇಜು ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನ ಆಚರಿಸಲಾಯಿತು.

ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಎಂ.ಕೆ. ಪದ್ಮ, ಹಿರಿಯ ಉಪನ್ಯಾಸಕ ಪಿ.ಸಿ. ಬ್ರೈಟಕುಮಾರ್, ಎನ್.ಎಸ್.ಎಸ್. ಅಧಿಕಾರಿ ವಿಪ್ರ ನೀಲಮ್ಮ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.*ಗೋಣಿಕೊಪ್ಪ: ಪ್ರಕೃತಿ ಹೊಂದಾಣಿಕೆಗೆ ಜಾಗೃತಿ ಅಗತ್ಯ ಎಂದು ಊಟಿ ಅಡದಾಂಭ ಯೂನಿವರ್ಸಲ್ ಹೋಲಿಸ್ಟಿಕ್ ಮೆಟಫಿಸಿಕಲ್ ವೆಲ್‌ನೆಸ್ ಫೌಂಡೇಷನ್ ಸ್ವಾಮೀಜಿಯಾಗಿರುವ ಸಿದಾ ಬಾಬ ನರಭಾವಿ ಹೇಳಿದರು.

ಎಂ.ಸಿ. ಮಾದಪ್ಪ ಪೆಟ್ರೋಲಿಯಂ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಗಿಡ ವಿತರಿಸಿ ಮಾತನಾಡಿದರು.

ಪ್ರಕೃತಿ ಹೊಂದಾಣಿಕೆ ಬಗ್ಗೆ ಎಲ್ಲರೂ ಜಾಗೃತರಾಗಬೇಕಿದೆ. ಸಾರ್ವಜನಿಕರಲ್ಲಿ ಪರಿಸರ ಕಾಳಜಿ ಮೂಡಿಸುವುದರಿಂದ ಪರಿಸರಕ್ಕೆ ಲಾಭವೇ ಹೆಚ್ಚು. ಪೀಳಿಗೆ ಪರಿಸರ ಜಾಗೃತಿ ಅಳವಡಿಸಿಕೊಳ್ಳಲು ಜಾಗೃತಿ ಹೆಚ್ಚಾಗಬೇಕು ಎಂದರು.

ಲೋಪಮುದ್ರ ಆಸ್ಪತ್ರೆ ಹಿರಿಯ ವೈದ್ಯ ಡಾ. ಮುಕ್ಕಾಟೀರ ಅಮೃತ್ ನಾಣಯ್ಯ ಮಾತನಾಡಿ, ಹವಾಮಾನ ವೈಪರಿತ್ಯ, ಅರಣ್ಯ ನಾಶದಿಂದ ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕಿದೆ. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ. ಇದರ ನಡುವೆ ಅರಣ್ಯ ಇಲಾಖೆ ಸಸ್ಯಾಭಿವೃದ್ಧಿ ಮೂಲಕ ಅರಣ್ಯೀಕರಣಕ್ಕೆ ಬೆಂಬಲವಾಗಿ ತೊಡಗಿಕೊಂಡಿದೆ. ಸಾರ್ವಜನಿಕ ಕಾಳಜಿಯಿಂದ ಗಿಡಗಳ ವಿತರಣೆ ವಿಶೇಷವಾಗಿದೆ. ಮಾಲಿನ್ಯ ತಡೆಗೆ ಕೈಜೋಡಿಸಬೇಕಿದೆ ಎಂದರು.

ಉದ್ಯಮಿ ಮಚ್ಚಮಾಡ ಅನೀಶ್ ಮಾದಪ್ಪ, ಪೊನ್ನಂಪೇಟೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಟಿ. ಶೆಟ್ಟಿಗೇರಿ ತಾವಳಗೇರಿ ಮೂಂದ್‌ನಾಡ್ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಪ್ರಮುಖರಾದ ಮಚ್ಚಮಾಡ ನೀಮಾ ಇದ್ದರು.

ಕುಶಾಲನಗರ ಆರೋಗ್ಯ ಕೇಂದ್ರ ಸಿದ್ದಾಪುರ: ಪರಿಸರ ದಿನಾಚರಣೆ ಅಂಗವಾಗಿ ಮಾಲ್ದಾರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಹಾಗೂ ಮಾಲ್ದಾರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಅರಣ್ಯದಲ್ಲಿ ಹಾಗೂ ಶಾಲೆ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ದಿನದ ಮಹತ್ವದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಈಶ್ವರಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಲ್ದಾರೆ ವಲಯ ಅರಣ್ಯ ಅಧಿಕಾರಿ ಹಂಸ ಮತ್ತು ಸಂಪತ್ ಹಾಗೂ ಪ್ರೌಢಶಾಲೆಯ ಶಿಕ್ಷಕಿ ಧನ್ಯ ಹಾಗೂ ಶಿಕ್ಷಕರು, ಶಾಲೆಯ ಮಕ್ಕಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.ಮಡಿಕೇರಿ: ಚಿಕ್ಕತ್ತೂರು ಸಾರ್ವಜನಿಕ ಆಟದ ಮೈದಾನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಮೈದಾನದಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಸಾಮಾಜಿಕ ಅರಣ್ಯ ಇಲಾಖೆ, ಎಸ್‌ಎಲ್‌ಎನ್ ಕಾಫಿ ಪ್ರೆöÊವೇಟ್ ಲಿಮಿಟೆಡ್ ಹಾಗೂ ಗ್ರಾಮ ಪಂಚಾಯಿತಿ ಕೂಡುಮಂಗಳೂರು ವತಿಯಿಂದ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಸಾಮಾಜಿಕ ಅರಣ್ಯದ ವಲಯ ಅರಣ್ಯ ಅಧಿಕಾರಿ ಹರೀಶ್, ಎಸ್.ಎಲ್.ಎನ್. ಕಾಫಿ ಪ್ರೆöÊವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ಸೋಮಯ್ಯ, ಗ್ರಾಮ ಪಂಚಾಯಿತಿ ಸದಸ್ಯೆ ಹೆಚ್.ಆರ್. ಪಾರ್ವತಮ್ಮ ರಾಮೇಗೌಡ, ಸೈನಿಕ ಶಾಲೆಯ ಉಪ ಅಭಿಯಂತರ ಶ್ರೀನಿವಾಸ್ ರಮೇಶ್, ಕುಮಾರ್ ಕೆ.ಜೆ., ಶ್ರೀನಿವಾಸ್ ಎ., ಚೇತನ್ ಕುಮಾರ್, ಶಿವಕುಮಾರ್, ಶ್ರೀನಿವಾಸ ಸಿ.ಸಿ., ಶಶಿಧರ್ ಅನು ಕುಮಾರ್ ಹಾಗೂ ಎಸ್‌ಎಲ್‌ಎನ್ ಸಿಬ್ಬಂದಿ ವರ್ಗ, ಅರಣ್ಯ ಇಲಾಖೆಯ ಸಿಬ್ಬಂದಿ ವರ್ಗ, ಚಿಕ್ಕತ್ತೂರಿನ ಗ್ರಾಮಸ್ಥರು ಭಾಗಿಯಾಗಿದ್ದರು.ಕೂಡಿಗೆ: ಹವಾಮಾನ ಬದಲಾವಣೆ ಹಾಗೂ ಮಾನವ ಆರೋಗ್ಯದ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ "ವಿಶ್ವ ಪರಿಸರ ದಿನಾಚರಣೆ" ಅಂಗವಾಗಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕುಶಾಲನಗರದಲ್ಲಿ "ತಾಯಿಯ ಹೆಸರಲ್ಲಿ ಒಂದು ವೃಕ್ಷ" ಅಭಿಯಾನದ ಅನ್ವಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಡಿ.ಎಸ್.ಓ. ಡಾ. ಶ್ರೀನಿವಾಸ್, ಕುಶಾಲನಗರ ತಾಲೂಕು ವೈದ್ಯಾಧಿಕಾರಿ ಡಾ. ಇಂದುದರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಗಿಡಗಳನ್ನು ನೆಟ್ಟರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಪರಿಸರ ಕಾಳಜಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಡಿ.ಎಸ್.ಓ. ಶ್ರೀನಿವಾಸ್ ಹವಮಾನ ಬಗ್ಗೆ, ಪರಿಸರ ಕಾಳಜಿ ಬಗ್ಗೆ ಮನವರಿಕೆ ಮಾಡಿದರು. ಈ ಸಂದರ್ಭ ಇಲಾಖೆಯ ಅಧಿಕಾರಿ ವರ್ಗದವರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ವೀರಾಜಪೇಟೆ ಅನ್ವಾರುಲ್ ಹುದಾ ಪಬ್ಲಿಕ್ ಶಾಲೆ ಕೂಡಿಗೆ: ಹವಾಮಾನ ಬದಲಾವಣೆ ಹಾಗೂ ಮಾನವ ಆರೋಗ್ಯದ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ "ವಿಶ್ವ ಪರಿಸರ ದಿನಾಚರಣೆ" ಅಂಗವಾಗಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಕುಶಾಲನಗರದಲ್ಲಿ "ತಾಯಿಯ ಹೆಸರಲ್ಲಿ ಒಂದು ವೃಕ್ಷ" ಅಭಿಯಾನದ ಅನ್ವಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಡಿ.ಎಸ್.ಓ. ಡಾ. ಶ್ರೀನಿವಾಸ್, ಕುಶಾಲನಗರ ತಾಲೂಕು ವೈದ್ಯಾಧಿಕಾರಿ ಡಾ. ಇಂದುದರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಕೆ. ಶಾಂತಿ ಗಿಡಗಳನ್ನು ನೆಟ್ಟರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಪರಿಸರ ಕಾಳಜಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಡಿ.ಎಸ್.ಓ. ಶ್ರೀನಿವಾಸ್ ಹವಮಾನ ಬಗ್ಗೆ, ಪರಿಸರ ಕಾಳಜಿ ಬಗ್ಗೆ ಮನವರಿಕೆ ಮಾಡಿದರು. ಈ ಸಂದರ್ಭ ಇಲಾಖೆಯ ಅಧಿಕಾರಿ ವರ್ಗದವರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ವೀರಾಜಪೇಟೆ ಅನ್ವಾರುಲ್ ಹುದಾ ಪಬ್ಲಿಕ್ ಶಾಲೆ ಐಗೂರು: ಸರಕಾರಿ ಹಿ.ಪ್ರಾ. ಕಾಜೂರು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಅರಣ್ಯ ಇಲಾಖೆಯ ವತಿಯಿಂದ ನೀಡಿದ ಗಿಡಗಳನ್ನು ಶಾಲಾ ಮೈದಾನದ ಬದಿಯಲ್ಲಿ ನೆಡಲಾಯಿತು.

ಕಾರ್ಯಕ್ರಮದಲ್ಲಿ ಎಸಿಎಫ್ ಗೋಪಾಲ್ ಎ.ಎ., ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಉಲ್ಲಾಸ್, ಅರಣ್ಯ ಸಿಬ್ಬಂದಿಗಳು, ಮುಖ್ಯ ಶಿಕ್ಷಕಿ ಸರಳ ಕುಮಾರಿ, ಶಿಕ್ಷಕ ವೃಂದದ ಅಜಿತ್ ಕುಮಾರ್, ಸತೀಶ್ ಕುಮಾರ್, ಅನಸೂಯ ಇಂದಿರಾ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಚೆಯ್ಯಂಡಾಣೆ: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

‘ಅಮ್ಮನ ಹೆಸರಿನಲ್ಲಿ ಒಂದು ಮರ’ ಎಂಬ ಧ್ಯೇಯವಾಕ್ಯದೊಂದಿಗೆ ವಿದ್ಯಾರ್ಥಿಗಳು ಇಕೋ ಕ್ಲಬ್ ವತಿಯಿಂದ ನೀಡಿದ ಸಸಿಗಳನ್ನು ನೆಟ್ಟರು. ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಗಿಡಗಳನ್ನು ಪೋಷಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಈ ಸಂದರ್ಭ ಅತಿಥಿ ಶಿಕ್ಷಕಿ ಫಶೀಲಾ, ಸಿಬ್ಬಂದಿ ಕಾವೇರಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಡಂಗ: ವೀರಾಜಪೇಟೆಯ ಅನ್ವಾರುಲ್ ಹುದಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪರಿಸರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಶಾಲೆಯಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಯಿತು

ಶಾಲಾ ಶಿಕ್ಷಕರಾದ ಯಾಕೂಬ್ ರಿಜ್ವಿ ಅವರು ಪರಿಸರ ಸಂರಕ್ಷಣೆಯ ಅಗತ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಭಾಷಣ ಸ್ಪರ್ಧೆ, ಫ್ಯಾನ್ಸಿ ಡ್ರೆಸ್, ಚಿತ್ರರಚನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಪರಿಸರದ ಮಹತ್ವವನ್ನು ಅನುಭವದಿಂದ ಅರ್ಥಮಾಡಿಕೊಳ್ಳುವ ಅವಕಾಶ ಪಡೆದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಇಲ್ಯಾಸ್ ಅನ್ವಾರಿ ಎಂ.ಎA., ಯಾಕೂಬ್ ರಿಜ್ವಿ, ಜಯಂತಿ ಸಿ.ಪಿ., ಮತ್ತು ಮುಖ್ಯ ಶಿಕ್ಷಕಿ ರೂಹಿ ಉಪಸ್ಥಿತರಿದ್ದರು. ಸ್ವಾಗತ ಭಾಷಣವನ್ನು ದಿವ್ಯ ವಿ.ಪಿ. ನೆರವೇರಿಸಿದರು.

ಹುದಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಿಗೆ: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳುವಾರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಭಾಗವಹಿಸಿ ಸಂಸ್ಥೆಯ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ತಿಳಿಸಿದರು.

ಈ ಸಂದರ್ಭ ಸಂಸ್ಥೆಯ ನಿರ್ದೇಶಕ ಡಾ. ಎಂ.ಸಿ. ಶಿವಕುಮಾರ್ ಸಂಸ್ಥೆಯ ಎಲ್ಲಾ ಸಿಬ್ಬಂದಿಗಳಿAದ ಗಿಡಗಳನ್ನು ನೆಡಿಸಿದರು. ಈ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವಲಯಾರಣ್ಯಾಧಿಕಾರಿ ಗಣೇಶ್ ಭಾಗವಹಿಸಿದ್ದರು.ಮಡಿಕೇರಿ: ಕುಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪ್ರತಿ ವಿದ್ಯಾರ್ಥಿ ಒಂದೊAದು ಗಿಡವನ್ನು ಮನೆಯಿಂದ ತಂದು ಶಾಲಾ ಆವರಣದಲ್ಲಿ ನೆಟ್ಟರು.

ಸೀಬೆಕಾಯಿ, ಬಟರ್ ಫ್ರೂಟ್, ನೇರಳೆ ಹಣ್ಣು, ಕಿತ್ತಳೆ ಹಣ್ಣಿನ ಗಿಡಗಳು, ನಾಗದಾಳಿ, ಪುದಿನ, ದೊಡ್ಪಾತ್ರೆ ಮುಂತಾದ ಔಷಧಿ ಸಸ್ಯಗಳು, ಕುಂಬಳಕಾಯಿ, ಟೊಮೆಟೊ, ಮೆಣಸಿನ ಕಾಯಿ ಸಸಿಗಳನ್ನು ಮತ್ತು ಹಲವಾರು ಹೂವಿನ ಗಿಡಗಳನ್ನು ನೆಡಲಾಯಿತು. ಒಂದೊAದು ಮಗುವಿಗೆ ಒಂದೊAದು ಗಿಡವನ್ನು ದತ್ತು ಕೊಟ್ಟು ಆ ಗಿಡದ ಪಾಲನೆ, ಪೋಷಣೆಯ ಜವಾಬ್ದಾರಿಯನ್ನು ಮಗುವಿಗೆ ವಹಿಸಿ ಚೆನ್ನಾಗಿ ಗಿಡ ಬೆಳೆಸಿದ ಮಗುವಿಗೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಬಹುಮಾನ ನೀಡುವುದಾಗಿ ಘೋಷಿಸಲಾಯಿತು.

ಮುಖ್ಯ ಶಿಕ್ಷಕರು ಸೀಬೆ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಎಲ್ಲಾ ಶಿಕ್ಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಪರಿಸರ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸ್ವೀಕರಿಸಿದರು.ಪೊನ್ನಂಪೇಟೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹುದಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಪೊನ್ನಂಪೇಟೆ ಅರಣ್ಯ ವಲಯದ ವತಿಯಿಂದ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ, ಉಪವಲಯ ಅರಣ್ಯಾಧಿಕಾರಿ ನಾಗೇಶ್ ಕುಮಾರ್, ಗಸ್ತು ಅರಣ್ಯಪಾಲಕ ಸೋಮಣ್ಣ ಗೌಡ, ಆರ್.ಆರ್.ಟಿ. ತಂಡದ ಸಿಬ್ಬಂದಿ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.ಮುಳ್ಳೂರು: ಸಮೀಪದ ಬಾಣವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಣವಾರ ಗ್ರಾಮದ ನಿವಾಸಿ ಮಲ್ಲಿಗಮ್ಮ ಮತ್ತು ಅವರ ಮೊಮ್ಮಗ ನೀಡಿದ ತೆಂಗಿನ ಗಿಡಗಳನ್ನು ಶಾಲೆಗೆ ಸೇರಿದ ಜಾಗದಲ್ಲಿ ನೆಡಲಾಯಿತು. ಮಲ್ಲಿಗಮ್ಮ ಅವರ ಮೊಮ್ಮಗ ಕೌಶಿಕ್ ತೆಂಗಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ವನಜ, ಅಂಗನ ವಾಡಿ ಕಾರ್ಯಕರ್ತೆ ಗೀತಾ, ಪ್ರಮುಖರಾದ ತುಳಸಿ, ಸವಿತ, ಸುನಂದ, ಶಿವು, ಪ್ರಸಾದ್, ಬಸಮ್ಮ, ಗ್ರಾಮಸ್ಥರು ಹಾಜರಿದ್ದರು.