ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್‌ಐಎಗೆ
ಮಂಗಳೂರು, ಜೂ. ೮: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟಿçÃಯ ತನಿಖಾ ಸಂಸ್ಥೆ ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬAಧ ಆದೇಶ ಹೊರಡಿಸಿದೆ. ಸುಮಾರು ಒಂದು ತಿಂಗಳ ಹಿಂದೆ ನಡೆದ ಈ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದೂ ಸಂಘಟನೆಗಳು ಮೇ ೩ ರಂದು ಜಿಲ್ಲಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು. ದಕ್ಷಿಣ ಕನ್ನಡದ ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ಒತ್ತಾಯಿಸಿದ್ದರು.
ಕಾಲ್ತುಳಿತ ಪ್ರಕರಣ : ವಿಧಾನಸೌಧದ ಭದ್ರತಾ ಮುಖ್ಯಸ್ಥರ ಪತ್ರ ವೈರಲ್!
ಬೆಂಗಳೂರು, ಜೂ. ೮: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಯ ಮೂರು ದಿನಗಳ ನಂತರ, ವಿಧಾನಸೌಧದ ಭದ್ರತಾ ಮುಖ್ಯಸ್ಥರು ಆರ್‌ಸಿಬಿ ಸನ್ಮಾನ ಕಾರ್ಯಕ್ರಮವನ್ನು ವಿರೋಧಿಸಿ ಬರೆದ ಪತ್ರ ಇದೀಗ ವೈರಲ್ ಆಗಿದೆ. ರಾಜ್ಯ ಸರ್ಕಾರವನ್ನು ಉದ್ದೇಶಿಸಿ ಬರೆದ ಪತ್ರವು ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡುವ ಕಾರ್ಯಕ್ರಮ ನಡೆಸುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಮುಂಚಿತವಾಗಿ ಎಚ್ಚರಿಕೆ ನೀಡಿತ್ತು. ಜೂನ್ ೪ ರಂದು ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂಎನ್ ಕರಿಬಸವನ ಗೌಡ ಅವರು ಬರೆದ ಪತ್ರದಲ್ಲಿ, ಸಿಬ್ಬಂದಿ ಕೊರತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿನ ಸವಾಲುಗಳ ಬಗ್ಗೆ ಎಚ್ಚರಿಸಿದ್ದರು. ಹಿರಿಯ ಅಧಿಕಾರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಜಿ. ಸತ್ಯವತಿ ಮತ್ತು ಇತರ ಉನ್ನತ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ‘ಆರ್‌ಸಿಬಿಗೆ ದೇಶದಾದ್ಯಂತ ಅಭಿಮಾನಿಗಳಿದ್ದಾರೆ ಮತ್ತು ನಾವು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮವನ್ನು ಆಯೋಜಿಸಿದರೆ, ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಸೇರಬಹುದು. ಭದ್ರತಾ ಸಿಬ್ಬಂದಿ ಕೊರತೆಯಿರುವುದರಿಂದ, ಸರಿಯಾದ ಬಂದೋಬಸ್ತ್ ವ್ಯವಸ್ಥೆ ಮಾಡುವುದು ಸವಾಲಿನ ಕೆಲಸವಾಗಿರುತ್ತದೆ' ಎಂದು ಬರೆದಿದ್ದರು.
ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ
ಗಂಜಾA, ಜೂ. ೮: ಈ ವಾರದ ಆರಂಭದಲ್ಲಿ ಒಡಿಶಾದ ಗಂಜಾA ಜಿಲ್ಲೆಯಲ್ಲಿ ೧೪ ಮತ್ತು ೧೫ ವರ್ಷದ ಇಬ್ಬರು ಬಾಲಕಿಯರನ್ನು ಮದುವೆ ಮನೆಯಿಂದ ಅಪಹರಿಸಿ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿಶಾಖಪಟ್ಟಣಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರವಣ್ ವಿವೇಕ್ ಅವರ ಪ್ರಕಾರ, ಈ ಘಟನೆ ಜೂನ್ ೩ ರಂದು ನಡೆದಿದೆ. ಅಪ್ರಾಪ್ತರು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾಗ ಆರೋಪಿಗಳು ಅವರನ್ನು ಅಪಹರಿಸಿದ್ದಾರೆ. ಬಳಿಕ ಅವರ ಮೇಲೆ ಅತ್ಯಾಚಾರ ಎಸಗಿ, ಹಲ್ಲೆ ನಡೆಸಿದ್ದಾರೆ. ನಂತರ ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ ಎಂದು ಬಾಲಕಿಯರ ಕುಟುಂಬ ಆರೋಪಿಸಿದೆ ಎಂದು ಎಸ್‌ಪಿ ಹೇಳಿದರು. ಪ್ರಾಥಮಿಕ ತನಿಖೆಯಲ್ಲಿ, ಬಾಲಕಿಯರನ್ನು ಇಬ್ಬರು ಪುರುಷರು ಕರೆದೊಯ್ದಿದ್ದಾರೆ. ಅವರಲ್ಲಿ ಒಬ್ಬ ಬಾಲಕಿಗೆ ಆರೋಪಿಗಳ ಪರಿಚಯವಿತ್ತು. ನಂತರ ಈ ಇಬ್ಬರು ಪುರುಷರೊಂದಿಗೆ ಇನ್ನಿಬ್ಬರು ಸೇರಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತದಲ್ಲಿ ೬,೦೦೦ ದಾಟಿದ ಸಕ್ರಿಯ ಕೋವಿಡ್ ಸೋಂಕು ಪ್ರಕರಣ
ನವದೆಹಲಿ, ಜೂ. ೮: ಭಾನುವಾರ ಬಿಡುಗಡೆಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅAಶಗಳ ಪ್ರಕಾರ, ಕಳೆದ ೪೮ ಗಂಟೆಗಳಲ್ಲಿ ೭೬೯ ಹೊಸ ಕೋವಿಡ್ ಸೋಂಕುಗಳು ವರದಿಯಾಗಿವೆ. ಈ ಮೂಲಕ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ೬,೦೦೦ ದಾಟಿದೆ. ಕೇರಳ ಹೆಚ್ಚು ಬಾಧಿತ ರಾಜ್ಯವಾಗಿ ಮುಂದುವರೆದಿದೆ, ನಂತರದ ಸ್ಥಾನಗಳಲ್ಲಿ ಗುಜರಾತ್, ಪಶ್ಚಿಮ ಬಂಗಾಳ ಮತ್ತು ದೆಹಲಿ ಇದೆ ಎಂದು ಸಚಿವಾಲಯ ತಿಳಿಸಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ, ಕೇಂದ್ರವು ಸೌಲಭ್ಯ ಮಟ್ಟದ ಸನ್ನದ್ಧತೆಯನ್ನು ಪರಿಶೀಲಿಸಲು ಅಣಕು ಅಭ್ಯಾಸಗಳನ್ನು ನಡೆಸುತ್ತಿದೆ ಮತ್ತು ಆಮ್ಲಜನಕ, ಐಸೋಲೇಷನ್ ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭಾರತದಲ್ಲಿ ೬,೧೩೩ ಸಕ್ರಿಯ ಕೋವಿಡ್ ಪ್ರಕರಣಗಳಿವೆ ಮತ್ತು ಕಳೆದ ೨೪ ಗಂಟೆಗಳಲ್ಲಿ ಇನ್ನೂ ಆರು ಸಾವುಗಳು ವರದಿಯಾಗಿವೆ ಎಂದು ಸಚಿವಾಲಯ ತಿಳಿಸಿದೆ.
ರೂ. ೨೦ ಲಕ್ಷ ಮೌಲ್ಯದ ಆಭರಣಗಳಿದ್ದ ಬ್ಯಾಗನ್ನು ಕಸಿದೊಯ್ದ ಕೋತಿ
ಮಥುರಾ, ಜೂ. ೮: ಮಥುರಾ-ವೃಂದಾವನ ಪ್ರದೇಶಕ್ಕೆ ಭೇಟಿ ನೀಡುವ ಭಕ್ತರಿಗೆ ಎದುರಾಗುವ ಕೋತಿಗಳ ದೊಡ್ಡ ಗುಂಪು ಸಾಮಾನ್ಯವಾಗಿ ಕನ್ನಡಕ, ಕ್ಯಾಪ್‌ಗಳು ಮತ್ತು ಆಹಾರವನ್ನು ಕಸಿದೊಯ್ಯುವುದು ಸಾಮಾನ್ಯ ಎನ್ನುವಂತಾಗಿದೆ. ಆದರೆ, ಭಕ್ತರ ಕುಟುಂಬವೊAದು ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಂಗವೊAದು ಆಭರಣಗಳಿದ್ದ ಬ್ಯಾಗ್‌ಅನ್ನು ಕಸಿದುಕೊಂಡಿರುವ ಘಟನೆ ವರದಿಯಾಗಿದೆ. ವೃಂದಾವನದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನಕ್ಕೆ ಅಲಿಘಢ ಮೂಲದ ವಜ್ರ ವ್ಯಾಪಾರಿ ಅಭಿಷೇಕ್ ಅಗರ್ವಾಲ್ ಮತ್ತು ಅವರ ಕುಟುಂಬ ಭೇಟಿ ನೀಡಿದ ಸಂದರ್ಭದಲ್ಲಿ ರೂ. ೨೦ ಲಕ್ಷ ಮೌಲ್ಯದ ಆಭರಣಗಳು ಇದ್ದ ಬ್ಯಾಗ್ ಅನ್ನು ಕೋತಿಯೊಂದು ಕಸಿದೊಯ್ದಿದೆ. ಎಂಟು ಗಂಟೆಗಳ ಪ್ರಯತ್ನದ ನಂತರ, ಪೊಲೀಸರು ಕೋತಿಯಿಂದ ಬ್ಯಾಗನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವೃತ್ತ ಅಧಿಕಾರಿ (ಸದರ್) ಸಂದೀಪ್ ಸಿಂಗ್ ತಿಳಿಸಿದ್ದಾರೆ.