ಮಡಿಕೇರಿ, ಜೂ. ೮: ಪ್ರಸ್ತುತದ ಸನ್ನಿವೇಶದಲ್ಲಿ ಮೌಲ್ಯಯುತವಾದ ವಿಚಾರಧಾರೆಗಳತ್ತ ಒತ್ತು ನೀಡುವ ಅಗತ್ಯತೆ ಇದೆ. ಈ ವಿಚಾರ ಮಾಧ್ಯಮ ಕ್ಷೇತ್ರದ ಮೂಲಕವೂ ಆಗಬೇಕಾಗಿದೆ. ಈ ಹಿಂದೆ ಮೌಲ್ಯಕ್ಕೆ ಹೆಚ್ಚು ಪ್ರಾಧಾನ್ಯತೆ ಇತ್ತು. ಆದರೆ, ಇದೀಗ ಈ ವಿಚಾರ ಕ್ರಮೇಣ ಕಡಿಮೆಯಾಗುತ್ತಿರುವುದು ವಿಷಾದಕರ ಎಂದು ಕೊಡಗು ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ (ಪರೀಕ್ಷಾಂಗ) ಮೇಚಿರ ರವಿಶಂಕರ್ ನಾಣಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಕೊಡಗು ಪ್ರೆಸ್ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಬದುಕಿನ ಮೌಲ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಮಾನವೀಯ ಮೌಲ್ಯಗಳನ್ನು ಮರೆತಿರುವುದು ಸಮಾಜದ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಜನರಲ್ಲಿ ಮತ್ತೆ ಮೌಲ್ಯಗಳನ್ನು ಮೂಡಿಸುವಲ್ಲಿ ಪತ್ರಿಕಾ ಮಾಧ್ಯಮದ ಪಾತ್ರ ಮಹತ್ತರವಾಗಿದೆ. ಮನೆಯೇ ಮೊದಲ ಪಾಠ ಶಾಲೆ ಎಂಬ ಮಾತಿನಂತೆ ಪೋಷಕರು ಮಕ್ಕಳಿಗೆ ಎಳೆ ವಯಸ್ಸಿನಿಂದಲೇ ಜೀವನದ ಮೌಲ್ಯಗಳನ್ನು ಕಲಿಸಿಕೊಡಬೇಕು ಎಂದರು.
ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಇದ್ದಂತೆ. ಸಾಮಾಜಿಕ ಬದಲಾವಣೆಯನ್ನು ತರುವ ಮತ್ತು ಜನಾಭಿಪ್ರಾಯ ರೂಪಿಸುವ ಜವಾಬ್ದಾರಿ ಪತ್ರಕರ್ತರದ್ದಾಗಿರುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು ಜನರನ್ನು ಬೇಗ ತಲುಪುತ್ತಿವೆ. ಇದು ಸಮಾಜಕ್ಕೆ ಮಾರಕವಾಗಿದ್ದು, ಪತ್ರಿಕಾ ಮಾಧ್ಯಮವು ಸಾಮಾಜಿಕ ಜಾಲತಾಣಗಳಲ್ಲಿ ಹಿಡಿತ ಸಾಧಿಸುವ ಮೂಲಕ ಸಮಾಜದಲ್ಲಿ ಆರೋಗ್ಯಕರ ವಾತಾವರಣ ನಿರ್ಮಿಸಬೇಕೆಂದು ಸಲಹೆ ನೀಡಿದರು.
ಮಡಿಕೇರಿ ತಾಲೂಕು ಎಸ್ಎನ್ಡಿಪಿ ಅಧ್ಯಕ್ಷ ಟಿ.ಆರ್. ವಾಸುದೇವ್ ಮಾತನಾಡಿ, ಪತ್ರಿಕೋದ್ಯಮ ಜನರ ಧ್ವನಿಯಾಗಿದೆ. ಪತ್ರಕರ್ತರಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದ್ದು, ಅವರು ಸಮಾಜದ ಶಿಕ್ಷಕರಿದ್ದಂತೆ, ತಮ್ಮ ಶ್ರಮ ಹಾಗೂ ಬದ್ಧತೆಯಿಂದ ಸಾಮಾಜಿಕ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದಾರೆ. ಖಡ್ಗಕ್ಕಿಂತ ಲೇಖನಿ ಹರಿತ ಎಂಬAತೆ ತಮ್ಮ ಪ್ರಭಾವಶಾಲಿ ಬರಹಗಳಿಂದ ಸಮಾಜದ ಅಂಕು-ಡೊAಕನ್ನು ತಿದ್ದುತ್ತಾ ಸದಾ ಸಮಾಜದ ಪರ ಕೆಲಸ ಮಾಡುವ ೪ಐದನೇ ಪುಟಕ್ಕೆ