ಮಡಿಕೇರಿ, ಜೂ. ೯ : ೨೦೨೫-೨೬ ನೇ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-IIIಬಿ) ಅಭಿವೃದ್ದಿಗಾಗಿ ೨೦೨೫-೨೬ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆ ಗಳಾದ ಬಸವ ಬೆಳಗು ಯೋಜನೆ (ಹೊಸದು), ಬಸವ ಬೆಳಗು ಯೋಜನೆ (ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸದು), ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತಮಹೋತ್ಸವದ ಮುನ್ನಡೆ ಯೋಜನೆ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವ ಫಲಾಪೇಕ್ಷಿಗಳಿಂದ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ೨೦೨೩-೨೪ ಹಾಗೂ ೨೦೨೪-೨೫ ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ hಣಣಠಿs://ಞvಟಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ನಿಗಮದ ದೂ.ಸಂ. ೦೮೦ ೨೨೮೬೫೫೨೨, ೯೯೦೦೦೧೨೩೫೧, ೯೯೦೦೦೧೨೩೫೨ ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿ ದೂ.ಸಂ.೦೮೨೭೨-೨೨೧೬೫೬ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.